ಕಲಬುರಗಿ; ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

ಕಲಬುರಗಿ, ಮಾರ್ಚ್ 21: ಕಲಬುರಗಿ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ಮಾರ್ಚ್ 25ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.

ಕಲಬುರಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪಾ ಮುಳೇಗಾಂವ ಈ ಕುರಿತು ಮಾಹಿತಿ ನೀಡಿದ್ದಾರೆ. ವಿವಿಧ ವಿಷಯಗಳ ಖಾಲಿಯಿರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಅತಿಥಿ ಉಪನ್ಯಾಸಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅತಿಥಿ ಉಪನ್ಯಾಸಕರ ನೇಮಕಾತಿಯು ಸರ್ಕಾರದ ಆದೇಶದ ಷರತ್ತುಗಳಿಗೊಳಪಟ್ಟಿರುತ್ತದೆ. ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ಕಾಲೇಜಿನ ಪ್ರಿನ್ಸಿಪಾಲರಿಗೆ ಮಾರ್ಚ್ 25ರೊಳಗಾಗಿ ಅರ್ಜಿ ಸಲ್ಲಿಸಬೇಕು.

Apply For Guest Lecturer Post In Govt PU Colleges Kalaburagi

ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ (ವಿಷಯವಾರು) ವಿವರ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿ ವಿಧಾನಸೌಧದ ಆವರಣದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+