ಕೊಪ್ಪಳ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ, ಜನವರಿ 19: ಕೊಪ್ಪಳದಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ಯಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಮೂರು ಹುದ್ದೆಗಳು ಖಾಲಿ ಇವೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 31ರೊಳಗೆ ಅಗತ್ಯ ದಾಖಲೆಗಳ ಜೊತೆ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.
ಕೊಪ್ಪಳ ತಾಲೂಕಿನ ದದೇಗಲ್‌ನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿ.ಎಮ್.ಸಿ.ಹೆಚ್ & ಇ&ಸಿ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ 3 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಮಾಡುವವರು ಪ್ರಥಮ ದರ್ಜೆಯಲ್ಲಿ ಬಿ.ಇ ಅಥವಾ ಎಮ್.ಟೆಕ್ ಇನ್ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರ್ ಪದವಿ ಹೊಂದಿದರಬೇಕು.

ಆಸಕ್ತ & ಅರ್ಹ ಆಕಾಂಕ್ಷಿಗಳು ಜನವರಿ 31ರೊಳಗೆ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಗದಗ ರೋಡ್, ದದೇಗಲ್ ಕಾರ್ಯಾಲಯವನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 7507094445.
ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಆಯ್ಕೆ ಪಟ್ಟಿ: ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ 19 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಖಾಲಿ ಇರುವ ಗ್ರಾಮ ಆಡಳಿತ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡುವ ಸಲುವಾಗಿ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ 19 ಹುದ್ದೆಗಳಿಗೆ 1:1 ಅನುಪಾತದಲ್ಲಿ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
ಈ ಪಟ್ಟಿ ಕೊಪ್ಪಳ ಜಿಲ್ಲಾ ವೆಬ್‌ಸೈಟ್ koppal.nic.in ರಲ್ಲಿ ಲಭ್ಯವಿದೆ. ಈ ಪಟ್ಟಿಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಮರ್ಥನೀಯ ದಾಖಲಾತಿಗಳೊಂದಿಗೆ ಜನವರಿ 23 ರೊಳಗಾಗಿ ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಲಿಖಿತವಾಗಿ ಸಲ್ಲಿಸಲು ಸೂಚನೆ ನೀಡಲಾಗಿದೆ.
ನಿಗದಿತ ಅವಧಿ ಮುಗಿದ ನಂತರ ಸ್ವೀಕೃತವಾದ ಆಕ್ಷೇಪಣೆಗಳು ಯಾವುದೇ ಕಾರಣಕ್ಕೂ ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ.
ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿಂದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಸ್ವಯಂ ಉದ್ಯೋಗ ತರಬೇತಿಗಾಗಿ ಅರ್ಜಿ ಕರೆಯಲಾಗಿದೆ. 30 ದಿನಗಳ ಮಹಿಳಾ ಹೊಲಿಗೆ ತರಬೇತಿಗಾಗಿ ಜನವರಿ 24 ರಂದು ಸಂದರ್ಶನ ನಡೆಯಲಿದ್ದು, ಜನವರಿ 27 ರಿಂದ ತರಬೇತಿ ಪ್ರಾರಂಭವಾಗಲಿವೆ.
ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ 45 ವರ್ಷ ಒಳಗಿನವರಾಗಿರಬೇಕು. ಕನಿಷ್ಠ 8ನೇ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು.
ಅರ್ಜಿ ಸಲ್ಲಿಕೆ ಮಾಡುವವರು ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ರೇಷನ್ ಕಾರ್ಡ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟ್ ಸೈಜ್ ಮೂರು ಫೋಟೋ, ಅಂಕಪಟ್ಟಿ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿಯನ್ನು ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ಇವರಿಗೆ ಸಲ್ಲಿಸಬೇಕು.
ಆಸಕ್ತರು ಕರೆ ಮಾಡಲು ದೂರವಾಣಿ ಸಂಖ್ಯೆ 9481085217, 7259073827, 9538096796. ಸ್ವಯಂ ಉದ್ಯೋಗ ತರಬೇತಿಗಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುತ್ತದೆ.












Click it and Unblock the Notifications