ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತಿಥಿ ಉಪನ್ಯಾಸಕರ ನೇಮಕ; ಆಸಕ್ತರು ಅರ್ಜಿ ಸಲ್ಲಿಸಿ

|
Google Oneindia Kannada News

ರಾಯಚೂರು, ಆಗಸ್ಟ್ 8; ರಾಯಚೂರಿನ ಯರಮರಸ್ ಕ್ಯಾಂಪ್‌ನಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಖಾಲಿ ಇರುವ ವಿಷಯವಾರು ಉಪನ್ಯಾಸಕರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಗೌರವಧನದ ಆಧಾರದ ಮೇಲೆ ಅಭ್ಯರ್ಥಿಗಳ ನೇಮಕಾತಿ ನಡೆಯಲಿದೆ. ಇಂಗ್ಲಿಶ್ ಉಪನ್ಯಾಸಕರ ನೇಮಕಾತಿಗೆ ಎಂ.ಎ.ಬಿ.ಇಡ್, ರಸಾಯನಶಾಸ್ತ್ರ ಉಪನ್ಯಾಸಕರ ನೇಮಕಾತಿಗೆ ಎಂ.ಎಸ್.ಸಿ. ಬಿ.ಇಡ್, ವ್ಯವಹಾರ ಅಧ್ಯಯನ ಉಪನ್ಯಾಸಕರ ನೇಮಕಾತಿಗೆ ಎಂ.ಕಾಂ.ಬಿ.ಇಡ್ ಪದವಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ ನೇಮಕಾತಿ; 250 ಹುದ್ದೆಗಳು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ ನೇಮಕಾತಿ; 250 ಹುದ್ದೆಗಳು

ಆಸಕ್ತರು ಅರ್ಜಿ ಸಲ್ಲಿಸಲು ಆಗಸ್ಟ್ 13ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಸ್ವವಿವರ, ಅನುಭವ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಗಳೊಂದಿಗೆ ಕಾಲೇಜಿಗೆ ಭೇಟಿ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9972564776.

ಧಾರವಾಡ, ಕಲಬುರಗಿಯಲ್ಲಿ ಉದ್ಯೋಗ ಮೇಳ, ವಿವರಗಳು ಧಾರವಾಡ, ಕಲಬುರಗಿಯಲ್ಲಿ ಉದ್ಯೋಗ ಮೇಳ, ವಿವರಗಳು

Apply For Guest Lecturer Post In Raichur

ಮಿನಿ ಉದ್ಯೋಗ ಮೇಳ; ರಾಯಚೂರು ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲು ಉದ್ಧೇಶಿಸಲಾಗಿದೆ. ಎಸ್‌. ಎಸ್. ಎಲ್. ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು.

ಚಿಕ್ಕಮಗಳೂರಲ್ಲಿ ಕೆಲಸ ಖಾಲಿ ಇದೆ; ಆಗಸ್ಟ್‌ 16ರೊಳಗೆ ಅರ್ಜಿ ಹಾಕಿ ಚಿಕ್ಕಮಗಳೂರಲ್ಲಿ ಕೆಲಸ ಖಾಲಿ ಇದೆ; ಆಗಸ್ಟ್‌ 16ರೊಳಗೆ ಅರ್ಜಿ ಹಾಕಿ

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಮುಂಚಿತವಾಗಿ ಹೆಸರು ನೋಂದಾವಣೆ ಮಾಡಿಕೊಳ್ಳಬೇಕು. ಕಂಪನಿಗಳು ಸಹ ತಮ್ಮಲ್ಲಿ ಲಭ್ಯವಿರುವ ಖಾಲಿ ಹುದ್ದೆಗಳ ವಿವರಗಳೊಂದಿಗೆ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9141255573, 867813510.

ಲೆಕ್ಕಿಗರ ಹುದ್ದೆ ಭರ್ತಿ; ದಾವಣಗೆರೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯಲ್ಲಿ ಖಾಲಿ ಇರುವ ಲೆಕ್ಕಿಗರ ಹುದ್ದೆಯನ್ನು ಒಂದು ವರ್ಷದ ಅವಧಿಗೆ ಗೌರವಧನ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲು ಆಸಕ್ತ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

ಅರ್ಜಿಗಳನ್ನು ಸಲ್ಲಿಸುವವರು ಬಿ.ಕಾಂ ಪದವಿ ಹೊಂದಿದ್ದು, ಅಂಕೌಂಟೆಂಟ್ ಹುದ್ದೆಯಲ್ಲಿ ಕನಿಷ್ಠ 5 ವರ್ಷಗಳ ಅನುಭವವಿರಬೇಕು. ಲೆಕ್ಕಪತ್ರದಲ್ಲಿ ಬ್ಯಾಂಕ್ ವ್ಯವಹಾರಗಳನ್ನು, ಸರ್ಕಾರದ ಲೆಕ್ಕಪತ್ರಗಳನ್ನು ತಯಾರಿಸುವ ಲೆಕ್ಕಪತ್ರಗಳಿಗೆ ಸಂಬಂಧಿಸಿದ ದಾಖಲೆ, ರಿಜಿಸ್ಟರ್‌ಗಳ ಕುರಿತು ಮಾಹಿತಿ ಹೊಂದಿರಬೇಕು.

ಅಭ್ಯರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಶ್ ಮಾತನಾಡುವ ಹಾಗೂ ಬರೆಯಲು ಗೊತ್ತಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಟ್ಯಾಲಿ ತಂತ್ರಾಂಶ ಉಪಯೋಗಿಸುವ ಜ್ಞಾನ ಹಾಗೂ ಕೌಶಲ್ಯ ಮತ್ತು ಕಚೇರಿಯ ಪತ್ರ, ಲೆಕ್ಕಪತ್ರಗಳ ವ್ಯವಹಾರವನ್ನು ಗಣಕೀಕೃತದಲ್ಲಿ ನಮೂದಿಸಿ ಕೇಂದ್ರ ಕಚೇರಿಗೆ ಕಳುಹಿಸುವ ಕುರಿತು ಪರಿಣತಿ ಹೊಂದಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ 40 ವರ್ಷ ಮೀರಿರಬಾರದು. ಸ್ವವಿವರದ ಅರ್ಜಿಯ ಜೊತೆ ರೂ. 5 ಸ್ಟಾಂಪ್ ಹಚ್ಚಿದ ಲಕೋಟೆಯನ್ನು ಲಗತ್ತಿಸಿ ಕಳಿಸಬೇಕು. ಆಯ್ಕೆಯಾದ ಅಭ್ಯರ್ಥಿಗೆ ಪ್ರತಿ ತಿಂಗಳು ರೂ.13,310 ಗೌರವಧನ ನೀಡಲಾಗುವುದು.

ಅಭ್ಯರ್ಥಿಗಳು ಸ್ವವಿವರದ ಭಾವಚಿತ್ರವುಳ್ಳ ಅರ್ಜಿಯನ್ನು ಭರ್ತಿ ಮಾಡಿ ಆಗಸ್ಟ್ 21ರ ಒಳಗೆ ಯೋಜನಾ ನಿರ್ದೇಶಕರು, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಕೊಡಿ ಸಂ. 42, ಜಿಲ್ಲಾಡಳಿತ ಭವನ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕು.

ಕೊಡಗು; ಕೊಡಗು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯಲ್ಲಿ ಖಾಲಿ ಇರುವ ಅಕೌಂಟೆಂಟ್ ಕಂ ಕಚೇರಿ ಸಹಾಯಕ ಮತ್ತು ಕಚೇರಿ ಜವಾನ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳನ್ನು ಮಾಸಿಕ ಗೌರವಧನದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಕೌಂಟೆಂಟ್ ಕಂ ಕಚೇರಿ ಸಹಾಯಕ ಹುದ್ದೆ (1) ಖಾಲಿ ಇದ್ದು ಅಭ್ಯರ್ಥಿಗಳು ಬಿ.ಕಾಂ ಪದವಿ ಹೊಂದಿರಬೇಕು, ಲೆಕ್ಕ ಪತ್ರಗಳನ್ನು ನಿರ್ವಹಿಸುವಲ್ಲಿ/ ಅಕೌಂಟೆಂಟ್ ಹುದ್ದೆಯಲ್ಲಿ ಕನಿಷ್ಠ 5 ವರ್ಷಗಳ ಅನುಭವ ಇರಬೇಕು, ಲೆಕ್ಕ ಪತ್ರದಲ್ಲಿ ಬ್ಯಾಂಕ್ ವ್ಯವಹಾರಗಳನ್ನು, ಸರ್ಕಾರದ ಲೆಕ್ಕ ಪತ್ರಗಳನ್ನು ತಯಾರಿಸುವ ಲೆಕ್ಕ ಪತ್ರಗಳಿಗೆ ಸಂಬಂಧಿಸಿದ ದಾಖಲೆ, ರಿಜಿಸ್ಟರ್‌ಗಳ ಕುರಿತು ಮಾಹಿತಿಯನ್ನು ಹೊಂದಿರಬೇಕು.

ಅಭ್ಯರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ ಮಾತನಾಡುವ ಹಾಗೂ ಬರೆಯುವ ಉತ್ತಮ ಶೈಲಿ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು, ಟ್ಯಾಲಿ ತಂತ್ರಾಂಶ ಉಪಯೋಗಿಸುವ ಕೌಶಲ್ಯ ಇರಬೇಕು. ಕಚೇರಿ ಪತ್ರ ವ್ಯವಹಾರಗಳ, ಲೆಕ್ಕ ಪತ್ರಗಳ ವ್ಯವಹಾರಗಳನ್ನು ಗಣಕೀಕೃತದಲ್ಲಿ ನಮೂದಿಸಿ ಕೇಂದ್ರ ಕಚೇರಿಗಳಿಗೆ ಗಣಕ ಯಂತ್ರದ ಮೂಲಕ ಕಳುಹಿಸುವ ಪರಿಣತಿ ಹೊಂದಿರಬೇಕು. ಮಾಸಿಕ ಗೌರವಧನ 13,310. ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಗರಿಷ್ಠ ವಯೋಮಿತಿ 40 ವರ್ಷ.

ಕಚೇರಿ ಜವಾನ ಹುದ್ದೆ; 1 ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಕಚೇರಿಯಲ್ಲಿ ಹಾಗೂ ಇತರೆ ಶುಚಿತ್ವ ಕಾಪಾಡುವ ಕೆಲಸ ನಿರ್ವಹಿಸಿದ ಅನುಭವ ಹೊಂದಿರಬೇಕು, ಓದಲು, ಬರೆಯಲು ಬರಬೇಕು. ಮಾಸಿಕ ಗೌರವ ಧನ 10,648 ರೂ.ಗಳು. ಗರಿಷ್ಠ ವಯೋಮಿತಿ 40 ವರ್ಷ ಮೀರಿರಬಾರದು.

ಅಭ್ಯರ್ಥಿಗಳು ಅರ್ಜಿಯನ್ನು ಬಿಳಿ ಹಾಳೆಯಲ್ಲಿ ವಿವರಗಳನ್ನು ನಮೂದಿಸಿ ಎಲ್ಲಾ ದಾಖಲೆಗಳ ನಕಲು ಪ್ರತಿಗಳನ್ನು ಲಗತ್ತಿಸಿ, ಜಿಲ್ಲಾಧಿಕಾರಿ ಮತ್ತು ಅಧ್ಯಕ್ಷರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಕೊಡಗು ಜಿಲ್ಲೆ ಮಡಿಕೇರಿ ಇವರ ಹೆಸರಿಗೆ ಅರ್ಜಿ ಬರೆದು, ಈ ಅರ್ಜಿಯನ್ನು ಕಾರ್ಮಿಕ ಅಧಿಕಾರಿಗಳು, ಕಾರ್ಮಿಕ ಇಲಾಖೆ, ಮೊದಲನೆ ಮಹಡಿ, ಕೊಠಡಿ ಸಂಖ್ಯೆ 11, ಜಿಲ್ಲಾಡಳಿತ ಭವನ, ಕೊಡಗು ಜಿಲ್ಲೆ ಮಡಿಕೇರಿ ಇವರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್, 21 ಕೊನೆಯ ದಿನ.

English summary
Apply for guest lecturer post in Raichur. Candidates can submit applications till August 13, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X