ಕೊಪ್ಪಳ; ಐಟಿಐ ಕಾಲೇಜು ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ, ಜುಲೈ 16; ಕೊಪ್ಪಳ ಜಿಲ್ಲೆಯ ಕನಕಗಿರಿ ಮತ್ತು ಗಂಗಾವತಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ)ನಲ್ಲಿ ತರಬೇತಿ ನೀಡಲು ಅತಿಥಿ ಬೋಧಕರ ಅವಶ್ಯಕತೆ ಇದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕನಕಗಿರಿ ಐಟಿಐನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಫಿಟ್ಟರ್ ಟ್ರೇಡ್‌ಗಳಿಗೆ 2023-24ನೇ ಸಾಲಿನಲ್ಲಿ ತರಬೇತಿ ನೀಡಲು ಅತಿಥಿ ಬೋಧಕರ ಅವಶ್ಯಕತೆ ಇದೆ. ಸೂಕ್ತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಲೆಕ್ಟ್ರಿಷಿಯನ್ 1 ಹುದ್ದೆಗೆ ಐಟಿಐ ಅಥವಾ ಎಟಿಎಸ್ ಅಥವಾ ಡಿಇಇ ಅಥವಾ ಬಿಇ ಎಲೆಕ್ಟ್ರಿಕಲ್ ವಿದ್ಯಾರ್ಹತೆ ಹೊಂದಿರಬೇಕು. ಇರಬೇಕು. ಎರಡು ವರ್ಷಗಳ ಸೇವಾನುಭವ ಹೊಂದಿರಬೇಕು.
ಫಿಟ್ಟರ್ 2 ಹುದ್ದೆಗಳಿಗೆ ಐಟಿಐ ಅಥವಾ ಎಟಿಎಸ್ ಅಥವಾ ಡಿಎಂಇ ಅಥವಾ ಬಿಇ (ಮೆಕ್ಯಾನಿಕ್) ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. ಎರಡು ವರ್ಷಗಳ ಸೇವಾನುಭವ ಹೊಂದಿರಬೇಕು. ಆಸಕ್ತರು ಅರ್ಜಿಗಳನ್ನು ಜುಲೈ 28ರ ಸಂಜೆ 5 ಗಂಟೆಯೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.
ಆಸಕ್ತರು, ಅರ್ಹರು ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಇವರನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 9448259832.
ಗಂಗಾವತಿ ಐಟಿಐ; ಕೊಪ್ಪಳ ಜಿಲ್ಲೆಯ ಗಂಗಾವತಿ ಐಟಿಐನಲ್ಲಿ ವಿವಿಧ ವೃತ್ತಿಗಳಿಗಾಗಿ 2023-24ನೇ ಸಾಲಿನಲ್ಲಿ ಅತಿಥಿ ಬೋಧಕರ ಹುದ್ದೆಗೆ ಆಸಕ್ತ, ಸೂಕ್ತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ಖಾಲಿ ಇರುವ 7 ಎಲೆಕ್ಟ್ರಿಷಿಯನ್ ಹುದ್ದೆಗೆ ಐಟಿಐ, ಎಟಿಎಸ್, ಡಿಇಇ ಅಥವಾ ಬಿಇ ಎಲೆಕ್ಟ್ರಿಷಿಯನ್ ವಿದ್ಯಾರ್ಹತೆ ಹೊಂದಿರಬೇಕು. ಎರಡು ಫಿಟ್ಟರ್ ಹುದ್ದೆಗೆ ಐಟಿಐ, ಎಟಿಎಸ್, ಡಿಎಂಇ ಅಥವಾ ಬಿಇ (ಮೆಕಾನಿಕಲ್) ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.
ಎರಡು ಮೆಕಾನಿಕ್ ಮೋಟರ್ ವೆಹಿಕಲ್ ಹುದ್ದೆಗೆ ಐಟಿಐ, ಎಟಿಎಸ್, ಡಿಪ್ಲೊಮಾ ಇನ್ ಅಟೋಮೊಬೈಲ್ಸ್ ಅಥವಾ ಡಿಎಂಇ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. 1 ಇಂಜಿನಿಯರಿಂಗ್ ಡ್ರಾಯಿಂಗ್ ಹುದ್ದೆಗೆ ಡಿಎಂಇ ಅಥವಾ ಬಿಇ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಎರಡು ವೇಲ್ಡರ್ ಹುದ್ದೆಗೆ ಐಟಿಐ, ಎಟಿಎಸ್ ಅಥವಾ ಡಿಇಇ ವಿದ್ಯಾರ್ಹತೆ ಹೊಂದಿರಬೇಕು. 1 ಟರ್ನರ್ ಹುದ್ದೆಗೆ ಐಟಿಐ, ಎಟಿಎಸ್ ಅಥವಾ ಡಿಇಇ ವಿದ್ಯಾರ್ಹತೆಯನ್ನು ಹೊಂದಿರುವವರು ಅರ್ಜಿ ಹಾಕಬಹುದು.
ಈ ಎಲ್ಲಾ ಹುದ್ದೆಗೆಳಿಗೆ ನಿಗದಿತ ವಿದ್ಯಾರ್ಹತೆಹೊಂದಿಗೆ ಎರಡು ವರ್ಷಗಳ ಅನುಭವ ಹೊಂದಿರಬೇಕು. ಆಸಕ್ತರು ಖುದ್ದಾಗಿ ಅಥವಾ ಅಂಚೆಮೂಲಕ ಜುಲೈ 28ರ ಸಂಜೆ 5 ಗಂಟೆಯೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಗಂಗಾವತಿ ಇವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 9448259832.












Click it and Unblock the Notifications