ಶಿವಮೊಗ್ಗ; ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ, ಡಿಸೆಂಬರ್ 21; ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಶಿವಮೊಗ್ಗ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆದಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 31 ಕಡೆಯ ದಿನವಾಗಿದೆ.
ಅರ್ಜಿಗಳನ್ನು ಸಲ್ಲಿಸುವವರು ಡಿಟಿಡಿಎಂ/ ಡಿಪಿಎಂ, ಬಿಇ & ಎಂಟೆಕ್(ಮೆಕ್ಯಾನಿಕಲ್), ಬಿಇ/ ಎಂಟೆಕ್ (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್) ಕೈಗಾರಿಕಾ ಕ್ಷೇತ್ರದಲ್ಲಿ ಎರಡು ವರ್ಷಗಳ ಅನುಭವ ಹೊಂದಿರಬೇಕು.
ಆಸಕ್ತ, ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ. ಸಿಎ 38, ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ, ಶಿವಮೊಗ್ಗ 577222 ಇಲ್ಲಿಗೆ ಸಂಪರ್ಕಿಸಬಹುದು.

ಧಾರವಾಡದಲ್ಲಿ ಕೆಲಸ ಖಾಲಿ; ಧಾರವಾಡ ಜಿಲ್ಲಾ ಗೃಹ ರಕ್ಷಕ ದಳದಲ್ಲಿ ಖಾಲಿಯಾಗಿರುವ ಗೌರವ ಸಮಾದೇಷ್ಟರ ಹುದ್ದೆಗೆ ಕರ್ನಾಟಕ ಗೃಹ ರಕ್ಷಕ ದಳ ನಿಯಮಗಳ ಪ್ರಕಾರ ನೇಮಕಾತಿ ಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಡಿಸೆಂಬರ್ 24ರೊಳಗೆ ಸಲ್ಲಿಕೆ ಮಾಡಬಹುದಾಗಿದೆ.
ನವೆಂಬರ್ 18ರಂದು ಪೊಲೀಸ್ ಮಹಾನಿರ್ದೇಶಕರು ಮತ್ತು ಗೃಹ ರಕ್ಷಕ ದಳದ ಮಹಾಸಮಾದೇಷ್ಟರು ಮತ್ತು ಪೌರ ರಕ್ಷಣೆ ವಿಭಾಗದ ನಿರ್ದೇಶಕರು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲು ಸೂಚನೆ ನೀಡಿದ್ದಾರೆ. ಅರ್ಜಿ ಸಲ್ಲಿಸುವ ಆಸಕ್ತ ಪದವಿಧರರು ಮತ್ತು ಯಾವುದೇ ರಾಜಕೀಯ ಪಕ್ಷ ಅಥವಾ ಯಾವುದೇ ರಾಜಕೀಯ ಸಂಘಟನೆಯಲ್ಲಿ ಭಾಗಿಯಾಗದ ಮತ್ತು ರಾಜಕೀಯ ಕಾರ್ಯಚಟುವಟಿಕೆಗಳಿಂದ ಹೊರತಾಗಿರುವ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವವರು ಯಾವುದೇ ನ್ಯಾಯಾಲಯ ಅಥವಾ ಆಯೋಗದ ತನಿಖೆಗೆ ಮತ್ತು ಶಿಕ್ಷೆಗೆ ಒಳಗಾಗಿರಬಾರದು ಮತ್ತು ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 50 ವರ್ಷ ವಯಸ್ಸು ಮೀರಿರಬಾರದು ಮತ್ತು ಜಿಲ್ಲಾ ಕೇಂದ್ರದ 20 ಕಿ. ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿರಬೇಕು.
ಅರ್ಜಿ ಸಲ್ಲಿಸುವಾಗ ಜಿಲ್ಲಾ ಶಸ್ತ್ರಚಿಕಿತ್ಸಕರಿಂದ ದೈಹಿಕ ಮತ್ತು ವೈದ್ಯಕೀಯ ಸದೃಢತೆಯ ದೃಢೀಕರಣ ಹೊಂದಿರಬೇಕೆಂದು. ಜಿಲ್ಲಾ ಗೃಹರಕ್ಷಕ ದಳದ ಗೌರವ ಸಮಾದೇಷ್ಟರ ಹುದ್ದೆಗೆ ಯಾವುದೇ ವೇತನ ಇರುವುದಿಲ್ಲ. ಇದು ಪೂರ್ಣ ಪ್ರಮಾಣದಲ್ಲಿ ಸ್ವಯಂವಾಗಿ ಸೇವೆ ಸಲ್ಲಿಸುವ ಗೌರವ ಹುದ್ದೆಯಾಗಿದೆ.
ಅರ್ಜಿ ಸಲ್ಲಿಸುವವರು ತಮ್ಮ ಪರಿಚಯ ಪತ್ರದೊಂದಿಗೆ ಜನನ ಪ್ರಮಾಣ ಪತ್ರ, ಶೈಕ್ಷಣಿಕ ದಾಖಲಾತಿಗಳು, ವಿಳಾಸ, ದೂರವಾಣಿ ಸಂಖ್ಯೆಯೊಂದಿಗೆ ಇಬ್ಬರು ಸ್ಥಳೀಯ ಗಣ್ಯರ ಶಿಫಾರಸ್ಸಿನೊಂದಿಗೆ ಧಾರವಾಡ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು.
ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ದಾವಣಗೆರೆ ತಾಲ್ಲೂಕು ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆಯರು 2 ಹಾಗೂ ಸಹಾಯಕಿಯರ 35 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಸಾಮಾನ್ಯ ವರ್ಗದವರಾಗಿದ್ದು ವಯೋಮಿತಿ 18 ರಿಂದ 35 ವರ್ಷಗಳು. ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗೆ 18 ರಿಂದ 45 ವರ್ಷದ ವಯೋಮಿತಿ ಇದೆ. ವಿಕಲಚೇತನ ವರ್ಗಕ್ಕೆ ಸಂಬಂಧಿಸಿದಂತೆ ಅರ್ಹ ಸ್ಥಳೀಯ (ಅದೇ ಗ್ರಾಮದ) ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯಾಗಲು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ ವಿದ್ಯಾರ್ಹತೆ 9ನೇ ತರಗತಿ ತೇರ್ಗಡೆಯಾಗಿರಬೇಕು. ಅರ್ಜಿ ಸಲ್ಲಿಸುವವರು 2022ರ ಜನವರಿ 18ರ ಸಂಜೆ 5.30 ಗಂಟೆಯೊಳಗೆ ಆನ್‍ಲೈನ್ http://davanagere.nic.in/ ಅರ್ಜಿ ಸಲ್ಲಿಸಬೇಕು.
ಉಚಿತ ತರಬೇತಿಗೆ ಅರ್ಜಿ ಆಹ್ವಾನ; ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ನಿರುದ್ಯೋಗಿ ಯುವಕ, ಯುವತಿಯರಿಗಾಗಿ 30 ದಿನಗಳ ಉಚಿತ ಕೌಶಲ್ಯ ಆಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಉಚಿತ ಕೌಶಲ್ಯ ಆಧಾರಿತ ತರಬೇತಿಯಡಿ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಟ್ರೈನಿಂಗ್ ಹಮ್ಮಿಕೊಂಡಿದ್ದು, ಈ ತರಬೇತಿಯಿಂದ ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ. ತರಬೇತಿಗಳು ಊಟ-ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತವೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
ತರಬೇತಿಯಲ್ಲಿ ಭಾಗವಹಿಸುವ ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 25 ರೊಳಗಾಗಿ ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9483485489, 9482188780, 9743321062, 08284-295307, 08284-220807.












Click it and Unblock the Notifications