ಬಳ್ಳಾರಿಯಲ್ಲಿ ಕೆಲಸ ಖಾಲಿ ಇದೆ: ವಿವಿಧ ಹುದ್ದೆಗಳ ನೇಮಕಾತಿ, ವಿವರ

ಬಳ್ಳಾರಿ, ಸೆಪ್ಟೆಂಬರ್ 03: ಬಳ್ಳಾರಿಯಲ್ಲಿ ಅತಿಥಿ ಶಿಕ್ಷಕ, ಅತಿಥಿ ಉಪನ್ಯಾಸಕ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು, ಅರ್ಹರು ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಶಾಲಾ, ಕಾಲೇಜು ವಿವರ ಸೇರಿದಂತೆ ಉದ್ಯೋಗದ ಇತರ ಮಾಹಿತಿಗಳು ಇಲ್ಲಿವೆ.

ಬಳ್ಳಾರಿ ನಗರದ ಈದ್ಗಾ ರಸ್ತೆಯ ಹಿರಾಳ್‌ಕುಡಂನ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಖಾಲಿಯಿರುವ ಆಂಗ್ಲ ಮಾಧ್ಯಮದ ಆಂಗ್ಲ ಭಾಷಾ ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಕರೆಯಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಮುಖ್ಯೋಪಾಧ್ಯಯರು ತಿಳಿಸಿದ್ದಾರೆ.

Apply For Guest Teacher And Lecturer Post Ballari District

ಇದು 6ನೇ ತರಗತಿಯಿಂದ 10ನೇ ತರಗತಿಯ ವರೆಗೆ ಆಂಗ್ಲ ಮಾಧ್ಯಮ ಶಾಲೆಯಾಗಿದ್ದು, ಎನ್‌ಸಿಆರ್‌ಟಿ ಪಠ್ಯಕ್ರಮ ಹೊಂದಿದೆ. ಆಸಕ್ತ ಆಂಗ್ಲ ಅತಿಥಿ ಶಿಕ್ಷಕರಿದ್ದಲ್ಲಿ ಈದ್ಗಾ ರಸ್ತೆಯ ಹಿರಾಳ್‌ಕುಡಂನ ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಯರ ಕಚೇರಿ ಅಥವಾ ಮೊಬೈಲ್ ಸಂಖ್ಯೆ 9740738762ಗೆ ಸಂಪರ್ಕಿಸಬಹುದು.

ಅತಿಥಿ ಉಪನ್ಯಾಸಕರ ಹುದ್ದೆ: ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಪ್ರಸ್ತಕ ಶೈಕ್ಷಣಿಕ ಸಾಲಿನ 1, 3 ಮತ್ತು 5 ನೇ ಸೆಮಿಸ್ಟರ್‌ಗೆ ಉಳಿಕೆಯಾಗಿರುವ ಕೋರ್ಸ್‌ಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳನ್ನು ಆನ್‌ಲೈನ್ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಎಐಸಿಟಿಇ ನಿಯಮಗಳನ್ವಯ ಕನಿಷ್ಠ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಸೆಪ್ಟೆಂಬರ್ 6ರೊಳಗಾಗಿ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಬೇಕು.

ಆಟೋ ಮೊಬೈಲ್ ವಿಭಾಗ-06, ಸಿವಿಲ್ ವಿಭಾಗ-01, ಎಲೆಕ್ಟ್ರಿಕಲ್ ವಿಭಾಗ-02, ಮೆಟಲರ್ಜಿ-06, ವಿಜ್ಞಾನ-02, ಇಂಗ್ಲೀಷ್-01 ಮತ್ತು ಕನ್ನಡ-01 ಸೇರಿ ಒಟ್ಟು 19 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ಆಸಕ್ತ, ಅರ್ಹರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08392-242228ಗೆ ಸಂಪರ್ಕಿಸಬಹುದು.

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಿರುಗುಪ್ಪ ಯೋಜನೆ ವ್ಯಾಪ್ತಿಯಲ್ಲಿ ಖಾಲಿಯಿರುವ 31 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 71 ಸಹಾಯಕಿಯರು ಮತ್ತು ಕಂಪ್ಲಿ ತಾಲ್ಲೂಕಿನಲ್ಲಿ 12 ಅಂಗನವಾಡಿ ಕಾರ್ಯಕರ್ತೆಯರು ಮತ್ತು 23 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಿದೆ.

ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಅಕ್ಟೋಬರ್ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಲಕೋಟೆ ಮೂಲಕ ಬಂದ ಅರ್ಜಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಿರುಗುಪ್ಪ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಅಥವಾ ದೂರವಾಣಿ ಸಂಖ್ಯೆ 08396-220203, ಮೊಬೈಲ್ ಸಂಖ್ಯೆ 8050804012ಗೆ ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ: ಪ್ರಸ್ತಕ ಶೈಕ್ಷಣಿಕ ವರ್ಷದಲ್ಲಿ ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನ ಮಂತ್ರಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಧಾರವಾಡ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕ ಡಾ. ಪ್ರಕಾಶ್. ಎನ್. ಎಸ್ ತಿಳಿಸಿದ್ದಾರೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ನವೆಂಬರ್ 30 ಕೊನೆಯ ದಿನವಾಗಿದೆ.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ, ಭಾರತೀಯ ವೈದ್ಯಕೀಯ ಮಂಡಳಿ, ಯುಜಿಸಿ ಯಂತಹ ಅಧಿಕೃತ ಸಂಸ್ಥೆಗಳಿಂದ ಮಾನ್ಯತೆ ಪಡೆದ ಮೊದಲ ವೃತ್ತಿಪರ ಪದವಿ ಕೋರ್ಸ್‌ಗಳಾದ ಬಿಇ, ಬಿ.ಟೆಕ್, ಬಿಡಿಎಸ್, ಎಂಬಿಬಿಎಸ್, ಬಿ.ಎಡ್, ಬಿಬಿಎ, ಬಿಸಿಎ, ಬಿ-ಫಾರ್ಮ್, ಬಿಇಡಿ, ಎಲ್‌ಎಲ್‌ಬಿ ಮತ್ತು ಸ್ನಾತಕೋತ್ತರ ಪದವಿಗಳಾದ ಎಂಬಿಎ, ಎಂಸಿಎ ಕೋರ್ಸ್‌ಗಳಲ್ಲಿ ಶೈಕ್ಷಣಿಕ ವರ್ಷ 2024-25ರ ಮೊದಲನೇ ವರ್ಷದಲ್ಲಿ ಪ್ರವೇಶ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು.

ಆಸಕ್ತರು ಅರ್ಜಿ ಸಲ್ಲಿಸಲು ಕೆಎಸ್‌ಬಿ ವೆಬ್‌ಸೈಟ್‌ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2440176.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+