ಕೊಪ್ಪಳ; ಅಳವಂಡಿಯಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಕೊಪ್ಪಳ, ಜನವರಿ 13; ಕೊಪ್ಪಳ ತಾಲ್ಲೂಕಿನ ಅಳವಂಡಿ ಗ್ರಾಮದ ಡಾ. ಬಿ. ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಸಾಲಿನಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಕರೆಯಲಾಗಿದ್ದು, ಜನವರಿ 23ರೊಳಗೆ ಅರ್ಜಿ ಸಲ್ಲಿಸಬೇಕು.

ಡಾ . ಬಿ. ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಅಳವಂಡಿ ತಾಲೂಕು ಕೊಪ್ಪಳ, ಈ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಕನ್ನಡ ಭಾಷಾ ಶಿಕ್ಷಕರ (ಬಿ.ಎ.ಬಿಎಡ್ ಅಥವಾ ಎಂ.ಎ.ಬಿಎಡ್) ಹುದ್ದೆಗೆ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸಲು ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಮಕರ ಸಂಕ್ರಾಂತಿ ವಿಶೇಷ ಪುಟ

ಅರ್ಹ ಅಭ್ಯರ್ಥಿಗಳು ಜನವರಿ 23ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಅಳವಂಡಿಯ ಡಾ. ಬಿ. ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ಹೇಳಿದ್ದಾರೆ.

Apply For Guest Teacher Post At Alavandi Koppal

ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ದಾವಣಗೆರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಫಾರ್ಮಸಿ ಅಧಿಕಾರಿ ಮತ್ತು ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹುದ್ದೆ ಭರ್ತಿ ಮಾಡಲಾಗುತ್ತಿದೆ.

ಹೊರಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. 16 ಫಾರ್ಮರ್ಸಿ ಅಧಿಕಾರಿಗಳು ಹಾಗೂ 1 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ತಾತ್ಕಾಲಿಕವಾಗಿ ಹೊರಗುತ್ತಿಗೆ ಮೇಲೆ ನೇಮಕ ಮಾಡಿಕೊಳ್ಳಲು ಜನವರಿ 17 ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.

ಬೆಳಗ್ಗೆ 11ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಸಂದರ್ಶನ ನಡೆಸಲಾಗುವುದು. ಅರ್ಹ ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಮೂಲ ದಾಖಲೆಗಳು ಮತ್ತು ಪ್ರಮಾಣ ಪತ್ರಗಳೊಂದಿಗೆ ಹಾಗೂ ಒಂದು ಸೆಟ್ ದೃಢೀಕೃತ ಜೆರಾಕ್ಸ್‌ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+