ಬಳ್ಳಾರಿ; ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಡಿಸೆಂಬರ್ 07; ಬಳ್ಳಾರಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಜ್ಞಾನ ಶಿಕ್ಷಕರ ಹುದ್ದೆ ಖಾಲಿ ಇದೆ. ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಕರೆಯಲಾಗಿದೆ.

ಬಳ್ಳಾರಿ ತಾಲೂಕಿನ ಕೊಳಗಲ್ಲು ಸಮೀಪದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಾಂಶುಪಾಲ ಬಸವರಾಜ. ಕೆ. ತಿಳಿಸಿದ್ದಾರೆ.

ಆಸಕ್ತ, ಅರ್ಹ ಅಭ್ಯರ್ಥಿಗಳು ತಮ್ಮ ಸ್ವವಿವರ ಮತ್ತು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಡಿಸೆಂಬರ್ 10ರೊಳಗೆ ಶಾಲೆಯ ಪ್ರಾಂಶುಪಾಲರ ಕಚೇರಿಗೆ ಸಲ್ಲಿಸಬೇಕು.

Apply For Guest Teacher Post At Ballari Morarji Desai Residential School

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಬಸವರಾಜ. ಕೆ ಅವರನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆಗಳು 7353346069, 8722048870, 9916315278.

ಕ್ಯಾಂಪಸ್ ಸಂದರ್ಶನ; ರಾಮನಗರ ಜಿಲ್ಲೆಯ ಬಿಡದಿಯ ಮೆ. ಟೋಯೋಟೊ ಕಿರ್ಲೋಸ್ಕರ್ ಮೋಟಾರ್ಸ್ ಪ್ರೈ ಲಿಮಿಟೆಡ್‍ ಕಲಬುರಗಿಯಲ್ಲಿ ಡಿಸೆಂಬರ್ 8ರಂದು ಕ್ಯಾಂಪಸ್ ಸಂದರ್ಶನ ಆಯೋಜನೆ ಮಾಡಿದೆ.

ಐ.ಟಿ.ಐ ವೃತ್ತಿಯಲ್ಲಿ ಫಿಟ್ಟರ್, ಇಲೆಕ್ಟ್ರಿಷಿಯನ್ ಎಂ.ಎಂ.ವ್ಹಿ, ಎಂ.ಡಿ, ಟರ್ನರ್, ವೆಲ್ಡರ್ ಮತ್ತು ಟೂಲ್ ಆಂಡ್ ಡೈ ಮೇಕರ್ ಟ್ರೇಡ್‍ಗಳಲ್ಲಿ ಪಾಸಾದ ಹಾಗೂ ಪೂರಕ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಕ್ಯಾಂಪಸ್ ಸಂದರ್ಶನದಲ್ಲಿ ಪಾಲ್ಗೊಳ್ಳಲು ವಯೋಮಿತಿ 18 ರಿಂದ 25 ವರ್ಷಗಳು. ಬೆಳಗ್ಗೆ 9 ಗಂಟೆಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ)ಯಲ್ಲಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ.

ಅರ್ಹ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಭಾವಚಿತ್ರ-2, ಆಧಾರ್ ಕಾರ್ಡ್ ಹಾಗೂ ಇತರೆ ದಾಖಲಾತಿಗಳೊಂದಿಗೆ ಕಲಬುರಗಿ ಎಂ.ಎಸ್.ಕೆ.ಮಿಲ್ ರಸ್ತೆಯಲ್ಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ಇಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+