ಬೆಂಗಳೂರು, ಬಳ್ಳಾರಿ; ಅತಿಥಿ ಶಿಕ್ಷಕ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಮೇ 30; ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 17, ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 5 ಹುದ್ದೆಗಳಿದ್ದು ಆಸಕ್ತ, ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2023-2024ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 17 ಮೌಲಾನಾ ಅಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕನ್ನಡ ಭಾಷಾ ಶಿಕ್ಷಕರು, ಆಂಗ್ಲ ಭಾಷಾ ಶಿಕ್ಷಕರು, ಹಿಂದಿ/ ಉರ್ದು ಭಾಷಾ ಶಿಕ್ಷಕರು, ಸಾಮಾನ್ಯ ವಿಜ್ಞಾನ ಶಿಕ್ಷಕರು, ಸಮಾಜ ವಿಜ್ಞಾನ ಶಿಕ್ಷಕರು, ಗಣಿತ ಶಿಕ್ಷಕರು, ದೈಹಿಕ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಅರ್ಹ ಅಭ್ಯರ್ಥಿಗಳು ಬಿಎ, ಬಿಎಡ್ ಅಥವಾ ಎಂಎ, ಬಿಎಡ್ ವ್ಯಾಸಂಗ ಮಾಡಿರಬೇಕು. ಆಸಕ್ತ ಅಭ್ಯರ್ಥಿಗಳು ತಮ್ಮ ವಿವರಗಳೊಂದಿಗೆ ಖುದ್ದಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಇಲ್ಲಿಗೆ ಜೂನ್ 10ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಛೇರಿ, ಅಲಸಂಖ್ಯಾತರ ಕಲ್ಯಾಣ ಇಲಾಖೆ, ಪೋಡಿಯಂ ಬ್ಲಾಕ್ 1ನೇ ಮಹಡಿ, ಬೆಂಗಳೂರು-560001 ಇವರನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 080-22866718.

ಬಳ್ಳಾರಿಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿ; ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕು ವ್ಯಾಪ್ತಿಯ ಸೋಮಸಮುದ್ರ ಗ್ರಾಮದಲ್ಲಿನ ಸರ್ಕಾರಿ ಉನ್ನತೀಕರಿಸಿದ ಪ್ರೌಢಶಾಲೆಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರನ್ನು ನೇಮಕಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ, ಇಂಗ್ಲೀಷ್, ಹಿಂದಿ, ಕಲಾ, ವಿಜ್ಞಾನ (ಸಿಬಿಝೆಡ್) ಹಾಗೂ ಕಲಾ ವಿಭಾಗ ಸೇರಿದಂತೆ ಸೇರಿದಂತೆ ಐದು ವಿಷಯಗಳಿಗೆ 5 ಹುದ್ದೆಗಳಿದ್ದು, ಅಭ್ಯರ್ಥಿಗಳ ಪದವಿ ಮತ್ತು ಬಿ.ಎಡ್ ವಿದ್ಯಾರ್ಹತೆ ಮೇಲೆ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ತಮ್ಮ ದೃಢೀಕೃತ ಅಂಕಪಟ್ಟಿಗಳೊಂದಿಗೆ ಅರ್ಜಿಗಳನ್ನು ಮುಖ್ಯೋಪಾಧ್ಯಾಯರು ಸರಕಾರಿ ಉನ್ನತೀಕರಿಸಿದ ಪ್ರೌಢಶಾಲೆ. ಸೋಮಸಮುದ್ರ, ಇವರಿಗೆ ಖುದ್ದಾಗಿ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸೋಮಸಮುದ್ರ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಬಹುದು.












Click it and Unblock the Notifications