ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು ಗ್ರಾಮಾಂತರ ಜಿಲ್ಲೆ; ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಜೂನ್ 14; ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಮತ್ತು ದೊಡ್ಡಬಳ್ಳಾಪುರದಲ್ಲಿ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಕರೆಯಲಾಗಿದೆ.

ನೆಲಮಂಗಲದಲ್ಲಿ ಕನ್ನಡ ಶಿಕ್ಷಕರ ಒಂದು ಹುದ್ದೆ, ದೊಡ್ಡಬಳ್ಳಾಪುರದಲ್ಲಿ ಎರಡು ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 10ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಐಬಿಪಿಎಸ್ ನೇಮಕಾತಿ; ಕರ್ನಾಟಕದಲ್ಲಿಯೂ ಕೆಲಸ ಖಾಲಿ ಇದೆಐಬಿಪಿಎಸ್ ನೇಮಕಾತಿ; ಕರ್ನಾಟಕದಲ್ಲಿಯೂ ಕೆಲಸ ಖಾಲಿ ಇದೆ

ನೆಲಮಂಗಲ; ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಇಸ್ಲಾಂಪುರ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಶಿಕ್ಷಕರ ಹುದ್ದೆ ತುಂಬಲಾಗುತ್ತಿದೆ.

ಬೆಂಗಳೂರು ಹೊಸ ಕೇಂದ್ರ ಸ್ಥಾಪನೆ, 15K ಹೊಸ ನೇಮಕಾತಿ ಘೋಷಿಸಿದ SAPಬೆಂಗಳೂರು ಹೊಸ ಕೇಂದ್ರ ಸ್ಥಾಪನೆ, 15K ಹೊಸ ನೇಮಕಾತಿ ಘೋಷಿಸಿದ SAP

Apply For Guest Teacher Post At Bengaluru Rural

6 ರಿಂದ 10ನೇ ತರಗತಿ (ಆಂಗ್ಲ ಮಾಧ್ಯಮ)ಕ್ಕೆ ಬೋಧಿಸಲು ಖಾಲಿ ಇರುವ ಶಿಕ್ಷಕರ ಹುದ್ದೆಗೆ ಸ್ಥಳೀಯ ಅರ್ಹ ಅತಿಥಿ/ ನಿವೃತ್ತ ಶಿಕ್ಷಕರನ್ನು ಗೌರವಧನದ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತಿದೆ.

ವಿಜಯನಗರ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ವಿಜಯನಗರ; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕನ್ನಡ ಶಿಕ್ಷಕರ 1 ಹುದ್ದೆಗೆ ಬಿ.ಎ/ ಬಿ.ಎಡ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅತಿಥಿ/ ನಿವೃತ್ತ ಶಿಕ್ಷಕರು ತಮ್ಮ ಸ್ವವಿವರಗಳಿರುವ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 10ರೊಳಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ, ನೆಲಮಂಗಲ ತಾಲ್ಲೂಕಿನ ಇಸ್ಲಾಂಪುರ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಯ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 7019605870, 8746993589.

ನೆಲಮಂಗಲ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿ ಕಾರ್ಯಲಯ, ಟಿ.ಬಿ.ಬಸ್ ಸ್ಟಾಪ್ ಹತ್ತಿರ, ಸುಭಾಶ್ ನಗರದಲ್ಲಿರುವ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-27725445.

ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಬೀರಸಂದ್ರ ಗ್ರಾಮದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ 2ನೇ ಮಹಡಿಯ ಕೊಠಡಿ ಸಂಖ್ಯೆ 216ರಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯನ್ನು ಸಹ ಸಂಪರ್ಕಿಸಬಹುದಾಗಿದೆ.

ದೊಡ್ಡಬಳ್ಳಾಪುರದ ಉದ್ಯೋಗ ಮಾಹಿತಿ; ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2022-23ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮುತ್ತೂರು ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

6 ರಿಂದ 10ನೇ ತರಗತಿ (ಆಂಗ್ಲ ಮಾಧ್ಯಮ)ಕ್ಕೆ ಬೋಧಿಸಲು ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಸ್ಥಳೀಯ ಅರ್ಹ ಅತಿಥಿ/ ನಿವೃತ್ತ ಶಿಕ್ಷಕರು ಗೌರವಧನದ ಆಧಾರದ ಕೆಲಸ ಮಾಡಲು ಅರ್ಜಿ ಸಲ್ಲಿಸಬಹುದು.

ಕನ್ನಡ ಶಿಕ್ಷಕರ 1 ಹುದ್ದೆಗೆ ಬಿ.ಎ/ ಬಿ.ಎಡ್ ವಿದ್ಯಾರ್ಹತೆ ಹೊಂದಿರುವವರು ಹಾಗೂ ಗಣಿತ ಶಿಕ್ಷಕರ 1 ಹುದ್ದೆಗೆ ಬಿ.ಎಸ್.ಇ/ ಬಿ.ಎಡ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅತಿಥಿ/ ನಿವೃತ್ತ ಶಿಕ್ಷಕರು ಅರ್ಜಿ ಹಾಕಬಹುದು. ಅಗತ್ಯ ದಾಖಲೆಗಳೊಂದಿಗೆ ಜುಲೈ 10ರೊಳಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಮುತ್ತೂರು ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಯ ಮುಖ್ಯೋಪಾಧ್ಯಾಯರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 7019605870, 8746993589.

ದೊಡ್ಡಬಳ್ಳಾಪುರ ತಾಲ್ಲೂಕಿನ ಕುಂಬಾರ ಪೇಟೆಯ ಜಾಮೀಯಾ ಮಸೀದಿ ಬಳಿಯಿರುವ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಮತ್ತು ತಾಲ್ಲೂಕು ಮಾಹಿತಿ ಕೇಂದ್ರವನ್ನು ಸಂಪರ್ಕಿಸಿ. ದೂರವಾಣಿ ಸಂಖ್ಯೆ 080-27627444.

Recommended Video

Rakshit Shetty ಅಭಿನಯದ 777 Charlie ಸಿನಿಮಾ ನೋಡಿ ಗಳಗಳನೆ ಅತ್ತ Bommai | *Karnataka | OneIndia Kannada

ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಬೀರಸಂದ್ರ ಗ್ರಾಮದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ 2ನೇ ಮಹಡಿಯ ಕೊಠಡಿ ಸಂಖ್ಯೆ: 216ರಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080-29787455.

English summary
Apply for guest teacher post at Moulana Azad model school (English medium) at Bengaluru rural district Nelamangala and Doddaballapur. Candidates can apply before July 10th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X