ಕೊಪ್ಪಳ; ಆಂಗ್ಲ ಮಾಧ್ಯಮ ವಸತಿ ಶಾಲೆಗೆ ಅತಿಥಿ ಶಿಕ್ಷಕರ ನೇಮಕ

ಕೊಪ್ಪಳ, ಜೂನ್ 21; ಕೊಪ್ಪಳ ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕ ಹುದ್ದೆ ಭರ್ತಿಗೆ ಅರ್ಜಿ ಕರೆಯಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಜೂನ್ 26ರ ಸಂಜೆ 5ಗಂಟೆಯೊಳಗಾಗಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

Apply For Guest Teacher Post At Kukanur Morarji Desai Residential School

ಈ ವಸತಿ ಶಾಲೆಯಲ್ಲಿ ಖಾಲಿ ಇರುವ ಆಂಗ್ಲ ಮತ್ತು ಸಮಾಜ ವಿಜ್ಞಾನ ವಿಷಯಗಳ ತಲಾ 1 ಹುದ್ದೆಗೆ ಬಿಎ ಬಿಎಡ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿ ನೇಮಕ ಮಾಡಲಾಗುತ್ತಿದೆ. ಒಂದು ಗಣಕಯಂತ್ರ ಶಿಕ್ಷರ ಹುದ್ದೆಗೆ ಬಿಎಸ್ಸಿ ಇನ್-ಕಂಪ್ಯೂಟರ್ ಸೈನ್ಸ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿ ನೇಮಕ ಮಾಡಲಾಗುತ್ತದೆ.

ಒಂದು ಆರ್ಟ್ & ಕ್ರಾಫ್ಟ್ ಶಿಕ್ಷಕರ ಹುದ್ದೆಗೆ ಡಿಪ್ಲೋಮಾ ಇನ್-ಆರ್ಟ್ & ಕ್ರಾಫ್ಟ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು ಎಂದು ತಿಳಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಜೂನ್ 26ರ ಸಂಜೆ 5ಗಂಟೆಯೊಳಗಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆಗೆ ವಿಳಾಸ; ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ವಸತಿ ಶಾಲೆ ಕುದರಿಮೋತಿ ಶಾಲೆಯಲ್ಲಿ ಅಥವಾ ಹೊಸಪೇಟೆ ರಸ್ತೆ ಮೌಲಾನಾ ಆಜಾದ್ ಭವನದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬಹುದು.

ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ವಸತಿ ಶಾಲೆ; ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮದಲ್ಲಿರುವ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಕರೆಯಲಾಗಿದೆ.

ಜೀವಶಾಸ್ತ್ರ ವಿಷಯದ ಎರಡು ಹುದ್ದೆ, ರಸಾಯನಶಾಸ್ತ್ರ ಒಂದು, ಭೌತಶಾಸ್ತ್ರ ಎರಡು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಎಂ.ಎಸ್ಸಿ, ಬಿಎಡ್ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬೇಕು.

ಗಣಕ ಯಂತ್ರ ವಿಜ್ಞಾನ ವಿಷಯದ ಒಂದು ಹುದ್ದೆಗೆ ಎಂ-ಟೆಕ್ & ಎಂ.ಸಿ.ಎ ವಿದ್ಯಾರ್ಹತೆ ಹೊಂದಿರುವವರು, ಸಮಾಜ ವಿಜ್ಞಾನ ವಿಷಯದ ಎರಡು ಹುದ್ದೆಗಳಿಗೆ ಎಂಎ, ಬಿಎಡ್, ಒಂದು ಪ್ರಯೋಗಾಲಯ ಸಹಾಯ ಹುದ್ದೆಗೆ ಬಿಎಸ್ಸಿ (ಪಿಸಿಎಂಬಿ) ವಿದ್ಯಾರ್ಹತೆ, ಒಂದು ಆರ್ಟ್ & ಕ್ರಾಫ್ಟ್ ಹುದ್ದೆಗೆ ಡಿಪ್ಲೋಮಾ ಇನ್-ಆರ್ಟ್ & ಕ್ರಾಫ್ಟ್ ವಿದ್ಯಾರ್ಹತೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.

ಅರ್ಜಿಯನ್ನು ಜೂನ್ 26ರ ಸಂಜೆ 5ಗಂಟೆಯೊಳಗಾಗಿ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ವಸತಿ ಶಾಲೆಯ ಹಿರೇಸಿಂದೋಗಿ ಅಥವಾ ಹೊಸಪೇಟೆ ರಸ್ತೆ ಮೌಲಾನಾ ಆಜಾದ್ ಭವನದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+