• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಧಾರವಾಡ; ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

|

ಧಾರವಾಡ, ಫೆಬ್ರವರಿ 24: ಧಾರವಾಡದಲ್ಲಿ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆಯಲ್ಲಿ ಉರ್ದು ಹಾಗೂ ಹಿಂದಿ ವಿಷಯ ಬೋಧನೆಗೆ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಿಂದ ಕಾರ್ಯನಿರ್ವಹಿಸುತ್ತಿರುವ ನವಲಗುಂದ ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆಯಲ್ಲಿ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಆಸಕ್ತರು ಮಾರ್ಚ್ 2ರೊಳಗೆ ಅರ್ಜಿಗಳನ್ನು ಹಾಕಬಹುದು.

ಧಾರವಾಡ; ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ ಧಾರವಾಡ; ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಅರ್ಜಿ ಆಹ್ವಾನ

ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆಯುಳ್ಳ ಅನುಭವಿ ಶಿಕ್ಷಕರು ಹಾಗೂ ನಿವೃತ್ತ ಶಿಕ್ಷಕರು ಮಾರ್ಚ್‌ 2 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮಂದಿ ಪ್ಲಾಜಾ, 1 ನೇ ಮಹಡಿ, ಕೆ.ಸಿ. ಪಾರ್ಕ್ ಪೋಸ್ಟ್ ಆಫೀಸ್ ಎದುರಿಗೆ ಹಳಿಯಾಳ ರಸ್ತೆ ಧಾರವಾಡ ಕಚೇರಿ ಸಂಪರ್ಕಿಸಬಹುದು.

ಎಚ್‌ಎಎಲ್ ಅಪ್ರೆಂಟಿಸ್ ತರಬೇತಿ; ಮಾರ್ಚ್ 6ರೊಳಗೆ ಅರ್ಜಿ ಹಾಕಿ ಎಚ್‌ಎಎಲ್ ಅಪ್ರೆಂಟಿಸ್ ತರಬೇತಿ; ಮಾರ್ಚ್ 6ರೊಳಗೆ ಅರ್ಜಿ ಹಾಕಿ

ಹೆಚ್ಚಿನ ಮಾಹಿತಿ ಪಡೆಯಲು ದೂರವಾಣಿ ಸಂಖ್ಯೆ 0836-2971590, 9980091492 ಗೆ ಕರೆ ಮಾಡಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

NPCIL ನೇಮಕಾತಿ 2021: 200 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿವೆNPCIL ನೇಮಕಾತಿ 2021: 200 ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿವೆ

ಕಂಪ್ಯೂಟರ್ ಆಪರೇಟರ್ ಹುದ್ದೆ; ಮಾನವ ಸಂಪನ್ಮೂಲ ಏಜೆನ್ಸಿಯಿಂದ ಹೊರಗುತ್ತಿಗೆ ಆಧಾರದ ಮೇಲೆ ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ, ನವಲಗುಂದ, ಅಣ್ಣಿಗೇರಿ, ಅಳ್ನಾವರ ಮತ್ತು ಹುಬ್ಬಳ್ಳಿ ನಗರ ತಾಲೂಲುಗಳ ನಾಡ ಕಚೇರಿಗಳಿಗೆ ಡಾಟಾ ಎಂಟ್ರಿ ಕಂಪ್ಯೂಟರ್ ಆಪರೇಟರ್ ನಿಯೋಜಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.

ಆಸಕ್ತ ಅಭ್ಯರ್ಥಿಗಳು ಮಾರ್ಚ್ 9ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2233840.

English summary
Apply for guest teacher post at Navalgund Moulana Azad English school. Candidates can apply till March 2, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X