• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಲಬುರಗಿ; ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

|

ಕಲಬುರಗಿ, ಏಪ್ರಿಲ್ 4; ಸೇಡಂ ತಾಲೂಕಿನ ಕೋಡ್ಲಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಏಪ್ರಿಲ್ 10ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಸಮಾಜ ಕಲ್ಯಾಣ ಇಲಾಖೆ (ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ) ವ್ಯಾಪ್ತಿಯಲ್ಲಿ ಕೋಡ್ಲಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಖಾಲಿಯಿರುವ ಸಮಾಜ ವಿಜ್ಞಾನ (ಆಂಗ್ಲ ಮಾಧ್ಯಮ) ಅತಿಥಿ ಶಿಕ್ಷಕರ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ.

ಕಲಬುರಗಿ; ಕೆಲಸ ಖಾಲಿ ಇದೆ, ಏ. 12ರೊಳಗೆ ಅರ್ಜಿ ಹಾಕಿ ಕಲಬುರಗಿ; ಕೆಲಸ ಖಾಲಿ ಇದೆ, ಏ. 12ರೊಳಗೆ ಅರ್ಜಿ ಹಾಕಿ

ಅರ್ಜಿಗಳನ್ನು ಸಲ್ಲಿಸುವವರು ಬಿ.ಎ. ಬಿ.ಇಡಿ. ಪಾಸಾಗಿರಬೇಕು. ಶಿಕ್ಷಕರನ್ನು ಗೌರವಧನದ ಆಧಾರದ ಮೇಲೆ ಶಾಲಾ ಹಂತದಲ್ಲಿ ನಿಯಮಾವಳಿಗೆ ಒಳಪಟ್ಟು ನೇಮಕ ಮಾಡಿಕೊಳ್ಳಲಾಗುತ್ತದೆ. ಅರ್ಹರು ಲಭ್ಯವಿಲ್ಲದಿದ್ದಲ್ಲಿ ನಿವೃತ್ತ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಕರ್ನಾಟಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; 402 ಹುದ್ದೆ

ಅರ್ಹ ಅಭ್ಯರ್ಥಿಗಳು ಸಂಬಂಧಟಪಟ್ಟ ಶೈಕ್ಷಣಿಕ ದಾಖಲೆಗಳೊಂದಿಗೆ 2021ರ ಏಪ್ರಿಲ್ 10 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೋಡ್ಲಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 8747924789.

NTRO ನೇಮಕಾತಿ 2021: 45 ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ NTRO ನೇಮಕಾತಿ 2021: 45 ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ; ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕಲಬುರಗಿ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ 'ಗ್ರಾಮ ಕಾಯಕ ಮಿತ್ರ' ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮ ಕಾಯಕ ಮಿತ್ರರಿಗೆ ಮಾಸಿಕ 6,000 ರೂ.ಗಳ ಗೌರವಧನ ನೀಡಲಾಗುತ್ತದೆ. ಅವರ ಕಾರ್ಯನಿರ್ವಹಣೆಯನ್ನು ಆಧರಿಸಿ 5,000 ರೂ.ಗಳ ವರೆಗೆ ಪ್ರೋತ್ಸಾಹ ಧನವನ್ನು ಸಹ ಪಡೆಯಬಹುದಾಗಿದೆ.

English summary
Apply for guest teacher post at Kittur Rani Chennamma residential school at Kodala, Sedam taluk of Kalaburgi. Candidates can submit applications till April 10.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X