ಧಾರವಾಡ; ಅತಿಥಿ ಶಿಕ್ಷಕರ ಹುದ್ದೆ ಭರ್ತಿ, ಸೆ.11ರ ತನಕ ಅರ್ಜಿ ಹಾಕಿ

ಧಾರವಾಡ, ಸೆಪ್ಟೆಂಬರ್ 03: ಧಾರವಾಡದ ನವಲಗುಂದ ಪಟ್ಟಣದ ಬಸವೇಶ್ವರ ನಗರದಲ್ಲಿರುವ ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆಯಲ್ಲಿ ಅತಿಥಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅರ್ಜಿಗಳನ್ನು ಸೆಪ್ಟೆಂಬರ್ 11ರ ತನಕ ಸಲ್ಲಿಸಬಹುದು.

ಬೆಂಗಳೂರಿನ ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದ ಅಧೀನದಲ್ಲಿ ಮೌಲಾನಾ ಆಜಾದ್ ಆಂಗ್ಲ ಮಾದರಿ ಶಾಲೆ ಕಾರ್ಯ ನಿರ್ವಹಣೆ ಮಾಡುತ್ತದೆ. ಶಾಲೆಯಲ್ಲಿ ಆಂಗ್ಲ ಮಾಧ್ಯಮದಲ್ಲಿ ಭೋದಿಸಲು ಗಣಿತ, ಇಂಗ್ಲೀಷ್, ಸಮಾಜ ಮತ್ತು ವಿಜ್ಞಾನ ವಿಷಯಗಳ ಶಿಕ್ಷಕರ ಹುದ್ದೆ ಭರ್ತಿ ಮಾಡಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 11 ಕೊನೆಯ ದಿನವಾಗಿದೆ. ಆಸಕ್ತ ಹಾಗೂ ಅರ್ಹ ವಿದ್ಯಾರ್ಹತೆವುಳ್ಳ ಅನುಭವಿ ಶಿಕ್ಷಕರು ಹಾಗೂ ನಿವೃತ್ತ ಶಿಕ್ಷಕರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Apply For Guest Teacher Post Moulana Azad school Dharwad

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಧಾರವಾಡ ಹಳಿಯಾಳ ರಸ್ತೆಯ ಪೋಸ್ಟ್ ಆಫೀಸ್ ಎದುರು, ಕೆ.ಸಿ.ಪಾರ್ಕ್, ಮಂದಿ ಪ್ಲಾಜಾ, 1 ನೇ ಮಹಡಿ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದೂರವಾಣಿ 0836-2971590, 8197601430 ಸಂಪರ್ಕಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+