ಕಲಬುರಗಿ; ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಕಲಬುರಗಿ, ಜೂನ್ 05; ಈ ಶೈಕ್ಷಣಿಕ ವರ್ಷದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗಳಲ್ಲಿ/ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ.
6 ರಿಂದ 10ನೇ ತರಗತಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲು ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಟಿಇಟಿ ಉತ್ತೀರ್ಣರಾಗಿರಬೇಕು. ಕನಿಷ್ಟ ಎರಡು ವರ್ಷದ ಅನುಭವ ಹೊಂದಿರಬೇಕು. ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ಕನ್ನಡ ವಿಷಯದ 5 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎ ಬಿ.ಇಡಿ, ಇಂಗ್ಲೀಷ್ ವಿಷಯದ 10 ಹುದ್ದೆಗಳಿಗೆ ಬಿಎ ಬಿ.ಇಡಿ. ಪಾಸಾಗಿರಬೇಕು. ವಿಜ್ಞಾನ ವಿಷಯದ 12 ಹುದ್ದೆಗಳಿಗೆ ಬಿ.ಎಸ್ಸಿ. ಬಿ.ಇಡಿ (ಸಿ.ಬಿ.ಝಡ್), ಗಣಿತ ವಿಷಯದ 14 ಹುದ್ದೆಗಳಿಗೆ ಬಿಎಸ್ಸಿ ಬಿ.ಇಡಿ. (ಪಿ.ಸಿ.ಎಂ.), ಸಮಾಜ ವಿಜ್ಞಾನ ವಿಷಯದ 10 ಹುದ್ದೆಗಳಿಗೆ ಬಿ.ಎ. ಬಿ.ಇಡಿ. ಹಾಗೂ ಉರ್ದು ವಿಷಯದ 1 ಹುದ್ದೆಗೆ ಬಿ.ಎ.ಬಿ.ಎಡ್. ವಿದ್ಯಾರ್ಹತೆ ಹೊಂದಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ಜೂನ್ 7ರೊಳಗಾಗಿ ಸಂಬಂಧಪಟ್ಟ ಅಗತ್ಯ ದಾಖಲೆಗಳೊಂದಿಗೆ ಆಯಾ ತಾಲೂಕುಗಳ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಕಲಬುರಗಿ ಮತ್ತು ಅಫಜಲಪೂರ ಇವರನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9741279422, ತಾಲ್ಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳು ಜೇವರ್ಗಿ 9535775141, ಆಳಂದ 8147775722, ಸೇಡಂ 7892369798, ಚಿತ್ತಾಪೂರ 9741168681 ಹಾಗೂ ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯಾಲಯದ ದೂರವಾಣಿ ಸಂಖ್ಯೆ 08472-247260 ಕರೆ ಮಾಡಬಹುದಾಗಿದೆ.
ಟೆಕ್ನಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ; ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಯೋಗಾಲಯಕ್ಕೆ ಟೆಕ್ನಿಕಲ್ ಆಫೀಸರ್ 1 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಸಂಚಿತ ವೇತನದಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಆಸಕ್ತರು ನಿಗದಿತ ಅರ್ಜಿ ನಮೂನೆ ಅರ್ಜಿಯನ್ನು ಸಂಸ್ಥೆಯ ವೆಬ್‍ಸೈಟ್ www.sims-shimoga.com ನಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ 15/06/2022 ರಂದು ಸಿಮ್ಸ್‍ನ ನಿರ್ದೇಶಕರ ಸಭಾ ಕೊಠಡಿಯಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಬಿಐಇಆರ್‌ಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ; 2022-23ನೇ ಸಾಲಿನ ಸಮನ್ವಯ ಶಿಕ್ಷಣ ಮಧ್ಯವರ್ತನೆಯಡಿ ಶಿವಮೊಗ್ಗ ಜಿಲ್ಲೆಯಲ್ಲಿ ಮಂಜೂರಾದ ಬಿಐಇಆರ್‌ಟಿ ಖಾಲಿ ಇರುವ ಹುದ್ದೆಗಳಿಗೆ ನೇರಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿಗಳನ್ನು ಅರ್ಹ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ.
ಅರ್ಜಿಯನ್ನು 8/06/2022 ರಂದು ಕಛೇರಿ ಸಮಯದೊಳಗೆ ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಶಿವಮೊಗ್ಗ ಇಲ್ಲಿಗೆ ಸಲ್ಲಿಸಬೇಕು.
ಅರ್ಜಿಯಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವುದು. 2021-22 ನೇ ಸಾಲಿನಲ್ಲಿ ನೇರಗುತ್ತಿಗೆಯಡಿಯಲ್ಲಿ ಕೆಲಸ ನಿರ್ವಹಿಸಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಾಥಮಿಕ ವಿಭಾಗಕ್ಕೆ ನಿಗದಿಪಡಿಸಿದ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ, ಪಿಯುಸಿ, ಎಂಸಿಟಿಟಿ ಮತ್ತು ವಿಶೇಷ ಡಿಇಡಿ. ಪ್ರೌಢ ಶಾಲಾ ವಿಭಾಗಕ್ಕೆ ನಿಗದಿಪಡಿಸಿದ ವಿದ್ಯಾರ್ಹತೆ ಬಿಎ, ಬಿಎಸ್ಸಿ, ವಿಶೇಷ ಬಿಇಡಿ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದಂದು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.












Click it and Unblock the Notifications