• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಎಚ್‌ಎಎಲ್ ಅಪ್ರೆಂಟಿಶಿಪ್ ತರಬೇತಿ; ಆಸಕ್ತರು ಅರ್ಜಿ ಹಾಕಿ

|

ಶಿವಮೊಗ್ಗ, ಅಕ್ಟೋಬರ್ 13 : ಹಿಂದೂಸ್ತಾನ್ ಏರೋನಾಟಿಕ್ ಲಿಮಿಟೆಡ್ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅಕ್ಟೋಬರ್ 29ರೊಳಗೆ ಆಸಕ್ತ ಅಭ್ಯರ್ಥಿಗಳನ್ನು ಹೆಸರುಗಳನ್ನು ನೋಂದಾಯಿಸಬಹುದಾಗಿದೆ.

ಹಿಂದೂಸ್ತಾನ್ ಏರೋನಾಟಿಕ್ ಲಿಮಿಟೆಡ್ (ಎಚ್‌ಎಎಲ್), ಬೆಂಗಳೂರು ಎಲೆಕ್ಟ್ರೀಷಿಯನ್, ವೆಲ್ಡರ್, ಕಂಪ್ಯೂಟರ್ ಆಪರೇಟರ್ ಆಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿಯನ್ನು ಕರೆದಿದೆ.

ಹಾಸನದಲ್ಲಿ ಕೆಲಸ ಖಾಲಿ ಇದೆ; ನ.10ರೊಳಗೆ ಅರ್ಜಿ ಹಾಕಿ

ಶಿವಮೊಗ್ಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹೆಸರು ನೋಂದಾವಣಿ ಮಾಡಿರುವ ಎಸ್. ಎಸ್. ಎಲ್. ಸಿ ಪಾಸಾದ 15 ರಿಂದ 18 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇಸ್ರೋ ನೇಮಕಾತಿ 2020: 55 ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಸಲ್ಲಿಸಬೇಕು. ಅರ್ಜಿಯ ಜೊತೆ ಎಸ್. ಎಸ್. ಎಲ್. ಸಿ. ಅಂಕಪಟ್ಟಿ, ಎಂಪ್ಲಾಯ್‍ಮೆಂಟ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಬಿಪಿಎಲ್/ಅಂತ್ಯೋದಯ ಕಾರ್ಡ್ ಹಾಗೂ ಇತ್ತೀಚಿನ ಭಾವಚಿತ್ರವನ್ನು ಸಲ್ಲಿಸಬೇಕು.

ಬೀದರ್‌; ಕೆಲಸ ಖಾಲಿ ಇದೆ, ಅ.16ರೊಳಗೆ ಅರ್ಜಿ ಹಾಕಿ

ಅಗತ್ಯವಿರುವ ಎಲ್ಲಾ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಅಭ್ಯರ್ಥಿಗಳು ಅಕ್ಟೋಬರ್ 29 ರೊಳಗಾಗಿ ಉದ್ಯೋಗ ವಿನಿಯಮ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಖಾನ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, 2ನೇ ಕ್ರಾಸ್, ಪಂಪನಗರ, ಗುತ್ಯಪ್ಪ ಕಾಲೋನಿ, ಸಾಗರ ರಸ್ತೆ ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಹೆಚ್ಚಿನ ಮಾಹಿತಿ ಪಡೆಯಲು ದೂರವಾಣಿ ಸಂಖ್ಯೆ 08182-255293, ಮೊಬೈಲ್ ನಂಬರ್ 8861890866/9980184267.

English summary
Applications invited for the HAL apprenticeship. Candidates can submit applications before October 29 to district employment exchange office Shimvamogga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X