• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಶಿವಮೊಗ್ಗ ; 10ನೇ ತರಗತಿ ಪಾಸ್‌ ಆದವರಿಗೆ ಕೆಲಸ ಖಾಲಿ ಇದೆ

|

ಬೆಂಗಳೂರು, ಜುಲೈ 01: ಆರೋಗ್ಯ ಇಲಾಖೆಯು ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಯೋಜನೆಯಡಿ ಶಿವಮೊಗ್ಗದಲ್ಲಿ 14 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 7ರ ಸಂಜೆಯೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ನಗರ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಗುತ್ತಿಗೆ ಆಧಾರ ಮೇಲೆ ಕಿರಿಯ ಪುರುಷ ಮತ್ತು ಆರೋಗ್ಯ ಸಹಾಯಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು.

10ನೇ ತರಗತಿ ಪಾಸ್‌ ಆದವರಿಗೆ ಬೆಂಗಳೂರಲ್ಲಿ ಕೆಲಸ ಖಾಲಿ ಇದೆ

ಕರ್ನಾಟಕ ರಾಜ್ಯದ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿಧೋದ್ಧೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿಯನ್ನು ಪಡೆದಿರಬೇಕು. ಅಥವಾ ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 2/3ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೋಮಾ ಪದವಿಯನ್ನು ಪೂರ್ಣಗೊಳಿಸಿರಬೇಕು.

ಕೆಪಿಎಸ್‌ಸಿ ನೇಮಕಾತಿ; 251 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಯು ಹೊಂದಿರುವ ಶ್ರೇಣಿ ಮತ್ತು ಮೀಸಲಾತಿಯನ್ವಯ ಆಯ್ಕೆ ನಡೆಯಲಿದೆ.

ಕೊಡಗು; ವಿವಿಧ ಹುದ್ದೆಗಳು ಖಾಲಿ ಇವೆ, ಅರ್ಜಿ ಹಾಕಿ

ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವಾಗ ಸಂಬಂಧಪಟ್ಟ ಹುದ್ದೆಗೆ ನಿಗದಿ ಮಾಡಿದ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, ಗುರುತಿನ ಚೀಟಿ, ಜಾತಿ ಪ್ರಮಾಣಪತ್ರ, ವಾಸಸ್ಥಳದ ಪ್ರಮಾಣಪತ್ರ, ಮಹಾನಗರಪಾಲಿಕೆ/ಸಂಬಂಧಿಸಿದ ಪಂಚಾಯಿತಿ ದೃಢೀಕರಣ ಪತ್ರ ಹಾಗೂ ಸ್ವವಿವರಗಳನ್ನು ಸಲ್ಲಿಸಬೇಕು.

ಅರ್ಜಿಗಳು ಎನ್.ಯು.ಹೆಚ್.ಎಂ. ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಆವರಣ, ಬಿ. ಹೆಚ್. ರಸ್ತೆ, ಶಿವಮೊಗ್ಗ ಇಲ್ಲಿ ಸಿಗಲಿದೆ. ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-298172.

English summary
Applications invited for the junior male health assistant post at Shivamogga district. Candidates can apply for the post till July 7, 2020. recruitment in 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X