ವಿವಿಧ ಹುದ್ದೆಗಳ ನೇಮಕಾತಿ: ಅನುವಾದಕ, ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಬೆಂಗಳೂರು, ಆಗಸ್ಟ್ 20: ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದಿದೆ. ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹಿಂದಿ ಅನುವಾದಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹರು ಅರ್ಜಿ ಸಲ್ಲಿಸಲು ಆಗಸ್ಟ್ 25 ಕಡೆಯ ದಿನವಾಗಿದೆ. ವಿದ್ಯಾರ್ಹತೆ ಸೇರಿದಂತೆ ಇತರ ವಿವರಗಳು ಇಲ್ಲಿವೆ.
ಕಂಪ್ಯೂಟರ್ ಆಧಾರಿತವಾಗಿ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲಿಶ್‌ನಲ್ಲಿ ಸಾತ್ನಕೋತ್ತರ ಪದವಿ ಪಡೆದಿರಬೇಕು. ಪದವಿಯಲ್ಲಿ ಹಿಂದಿ ಅಥವಾ ಇಂಗ್ಲಿಶ್ ವಿಷಯವನ್ನು ಕಡ್ಡಾಯವಾಗಿ ಓದಿರಬೇಕು.

ಹಿಂದಿಯಿಂದ ಇಂಗ್ಲಿಶ್ ಭಾಷಾಂತರದಲ್ಲಿ ಡಿಪ್ಲೋಮಾ ಪದವಿ ಪಡೆದಿರಬೇಕು ಅಥವಾ ಭಾಷಾಂತರದಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಎರಡು ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇರಬೇಕು. ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ವಯೋಮಿತಿ 18-30 ವರ್ಷಗಳು. ಎಸ್.ಸಿ. ಎಸ್.ಟಿ, ಓಬಿಸಿ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಲಿಕೆ ಇರುತ್ತದೆ.
ನೇಮಕಾತಿ ಪರೀಕ್ಷೆಯು ಅಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ www.ssckkr.kar.nic.in https://ssc.nic.in ವೆಬ್ ಸೈಟ್‌ಗೆ ಭೇಟಿ ನೀಡಬಹುದು. ನೇಮಕಾತಿ ಆಯೋಗದ ದೂರವಾಣಿ ಸಂಖ್ಯೆ 080-25502520 ಕರೆ ಮಾಡಬಹುದು.
ಆಗಸ್ಟ್ 23ರಂದು ನೇರ ಸಂದರ್ಶನ: ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಗಸ್ಟ್ 23ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3ರ ತನಕ ವಿವಿಧ ಹುದ್ದೆಯ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ. ಮೇಳದಲ್ಲಿ 3ಕ್ಕೂ ಹೆಚ್ಚಿನ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆಮಾಡಿಕೊಳ್ಳಲಿದ್ದಾರೆ.
ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೊಮಾ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಸಂದರ್ಶನಕ್ಕೆ ಆಗಮಿಸುವಾಗ 5 ಪ್ರತಿ ಬಯೋಡೇಟಾ, ವಿದ್ಯಾರ್ಹತೆ ಪ್ರಮಾಣ ಪತ್ರ ಹಾಗೂ ಪೋಟೋಗಳನ್ನು ತರಬೇಕು.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಗೆ ಭೇಟಿ ನೀಡಬಹುದು ಅಥವ ದೂರವಾಣಿ ಸಂಖ್ಯೆ 7022459064 8105619020, 9945587060ಗೆ ಕರೆ ಮಾಡಬಹುದು.
ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ: ನೇರ ಗುತ್ತಿಗೆ ಆಧಾರದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಹಾರ ಮತ್ತು ಪೌಷ್ಠಿಕ ಭದ್ರತೆ ಯೋಜನೆಯಡಿ ಹೊಸದಾಗಿ ಸೃಜಿಸಿರುವ ಯೋಜನಾ ನಿರ್ವಹಣಾ ತಂಡ ಜಿಲ್ಲಾ ಮಟ್ಟದ ಸಲಹೆಗಾರರು- 1 ಹುದ್ದೆ ಮತ್ತು ತಾಂತ್ರಿಕ ಸಹಾಯಕರು- 2 ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಮಟ್ಟದ ಸಲಹೆಗಾರರ ಹದ್ದೆಗೆ ಅರ್ಜಿ ಸಲ್ಲಿಸುವವರು ಬಿಎಸ್‌ಸಿ ಅಗ್ರಿಕಲ್ಚರ್ ಪದವಿ ಹೊಂದಿದ್ದು, Agronomy/ soil Science / plant protection or Any Other Agricultural Subjects with Computer knowledge ಅನುಭವ ಹೊಂದಿರಬೇಕು. ತಾಂತ್ರಿಕ ಸಹಾಯಕರು ಹುದ್ದೆಗೆ ಬಿಎಸ್‌ಸಿ ಅಗ್ರಿಕಲ್ಚರ್ ಪದವಿ with Computer knowledge ಅನುಭವ ಹೊಂದಿರಬೇಕು.
ಅರ್ಜಿಗಳನ್ನು ಸೂಕ್ತ ದಾಖಲೆಗಳೊಂದಿಗೆ ಆಗಸ್ಟ್ 29ರೊಳಗಾಗಿ ಕಚೇರಿಯ ಅವಧಿಯೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೃಷಿ ಸಂಕೀರ್ಣ, ಎಸ್ ಕರಿಯಪ್ಪ ರಸ್ತೆ (ಕನಕಪುರ ರಸ್ತೆ) ಬನಶಂಕರಿ, ಬೆಂಗಳೂರು- 560070 ಸಂಪರ್ಕಿಸಬಹುದು.












Click it and Unblock the Notifications