ಕರ್ನಾಟಕ ಗೃಹ ರಕ್ಷಕ ದಳದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಜನವರಿ 29 : ಕರ್ನಾಟಕ ಗೃಹ ರಕ್ಷಕ ಹಾಗೂ ಪೌರ ರಕ್ಷಣಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 15/2/2019 ಕೊನೆಯ ದಿನವಾಗಿದೆ.

ಬೋಧಕ 26, ಸಹಾಯಕ ಬೋಧಕ 16, ಸೈನಿಕ 18 ಮತ್ತು ಚಾಲಕ 5 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೈದರಾಬಾದ್-ಕರ್ನಾಟಕ ಪ್ರದೇಶದ ಮೀಸಲಾತಿ ಒಳಗೊಂಡ ಹುದ್ದೆಗಳಿಗೆ ಅಧಿಸೂಚನೆ ಅನ್ವಯ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಜನವರಿ 28 ರಿಂದ ಫೆಬ್ರವರಿ 15ರ ಸಂಜೆ 6 ಗಂಟೆಯ ತನಕ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ ಪಾವತಿ ಮಾಡಲು ಫೆಬ್ರವರಿ 18 ಕೊನೆಯ ದಿನವಾಗಿದೆ.

Apply for instructor and assistant instructor post

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 21 ವರ್ಷ ಪೂರ್ಣಗೊಳಿಸಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 28 ವರ್ಷ, ಇತರ ಅಭ್ಯರ್ಥಿಗಳಿಗೆ 26 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ : ಬೋಧಕ, ಸಹಾಯಕ ಬೋಧಕ ಹುದ್ದೆಗಳಿಗೆ ಪದವಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಹೊಂದಿರಬೇಕು. ಸೈನಿಕ ಮತ್ತು ಚಾಲಕ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ/ 10ನೇ ತರಗತಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಕೊನೆಯ ದಿನಾಂಕದಂದು ಹೊಂದಿರಬೇಕು.

ಅರ್ಜಿ ಶುಲ್ಕ : ಸಾಮಾನ್ಯ ವರ್ಗ, ಪ್ರವರ್ಗ 2(ಎ), 2 (ಬಿ), 3 (ಎ), 3 (ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ 250 ರೂ.ಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ - 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂ.ಗಳು.

ಅರ್ಜಿಗಳನ್ನು ಸಲ್ಲಿಸಲು, ಹೆಚ್ಚಿನ ಮಾಹಿತಿಗೆ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+