ಮಡಿಕೇರಿ; ಆಕಾಶವಾಣಿಯಲ್ಲಿ ಕೆಲಸ ಖಾಲಿ ಇದೆ
ಮಡಿಕೇರಿ, ಆಗಸ್ಟ್ 10; ಮಡಿಕೇರಿ ಆಕಾಶವಾಣಿಯಲ್ಲಿ ಸಾಂದರ್ಭಿಕ ಉದ್ಘೋಷಕರಾಗಿ ಕೆಲಸ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ವಯೋಮಿತಿ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 50 ವರ್ಷಗಳು. ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕನ್ನಡವನ್ನು ಚೆನ್ನಾಗಿ ಓದಲು ಮತ್ತು ಬರೆಯಲು ಗೊತ್ತಿರಬೇಕು.

ಅರ್ಜಿ ಸಲ್ಲಿಕೆ ಮಾಡುವವರು ಸ್ಪಷ್ಟ ಉಚ್ಛಾರಣೆ ಹೊಂದಿರಬೇಕು. ಕಂಪ್ಯೂಟರ್ ಬಳಸುವ ಜ್ಞಾನ ಇರಬೇಕು. ಆಂಗ್ಲ ಭಾಷೆಯಿಂದ ಕನ್ನಡಕ್ಕೆ ಮತ್ತು ಕನ್ನಡದಿಂದ ಆಂಗ್ಲ ಭಾಷೆಗ ಭಾಷಾಂತರ ಮಾಡಲು ಬರುವಂತಿರಬೇಕು.
ಅರ್ಹತೆಗಳು; ಅರ್ಜಿ ಸಲ್ಲಿಸುವವರಿಗೆ ಪ್ರಚಲಿತ ವಿದ್ಯಮಾನ, ಕಲೆ, ಸಂಸ್ಕೃತಿ, ಸಂಗೀತ, ರಂಗಭೂಮಿ, ಚಲನಚಿತ್ರ, ಸಾಹಿತ್ಯ, ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳಲ್ಲಿ ಸಾಮಾನ್ಯ ಜ್ಞಾನ ಹೊಂದಿರಬೇಕು. ಮಡಿಕೇರಿ ನಿವಾಸಿಗಳಿಗೆ ಆದ್ಯತೆ ನೀಡಲಾಗುತ್ತದೆ. ಅರ್ಜಿ ಶುಲ್ಕ ರೂ. 354ಗಳನ್ನು ಅರ್ಜಿಯಲ್ಲಿ ನಮೂದಿಸಿರುವ ಪ್ರಸಾರ ಭಾರತಿ ಬ್ಯಾಂಕ್ ಖಾತೆಗೆ ವರ್ಗಾಯಿಸಬೇಕು.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಧ್ವನಿ ಪರೀಕ್ಷೆ ಹಾಗೂ ಸಂದರ್ಶನ ಒಳಗೊಂಡ ಮೂರು ಹಂತಗಳಲ್ಲಿ ಆಯ್ಕೆ ಮಾಡಲಾಗುತ್ತದೆ. ನಿಗದಿತ ಅರ್ಜಿಗಳನ್ನು ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ರಜಾದಿನಗಳನ್ನು ಹೊರತುಪಡಿಸಿ ಆಕಾಶವಾಣಿ ಕೇಂದ್ರದಿಂದ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಇದು ಹುದ್ದೆಯಲ್ಲ ಅವಶ್ಯಕತೆಗೆ ಅನುಗುಣವಾಗಿ ಆಯಾಯ ದಿನಗಳಂದು ಕೆಲಸ ಮಾಡುವ ಅವಕಾಶವಾಗಿದೆ. ಯಾವುದೇ ಕಾರಣಕ್ಕೂ ಇದು ಖಾಯಂ ಆಗುವುದಿಲ್ಲ ಎಂದು ಆಕಾಶವಾಣಿ ಸ್ಪಷ್ಟಪಡಿಸಿದೆ.
ಸರ್ಕಾರಿ ಅಭಿಯೋಜಕ ಹುದ್ದೆಗೆ ಅರ್ಜಿ ಆಹ್ವಾನ; ಕೊಡಗು ಜಿಲ್ಲೆಯ ವಿವಿಧ ಸಿ.ಜೆ ಮತ್ತು ಜೆಎಂಎಫ್‍ಸಿ ನ್ಯಾಯಾಲಯಗಳಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರುಗಳ ಹುದ್ದೆಯಲ್ಲಿ ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಕೆಲಸ ನಿರ್ವಹಿಸಲು ಆಸಕ್ತಿಯುಳ್ಳ ಅರ್ಹ ವಕೀಲರುಗಳಿಂದ ಅರ್ಜಿ ಕರೆಯಲಾಗಿದೆ.
ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಸಂಚಿತ ಸಂಭಾವನೆಯಾಗಿ ರೂ. 35 ಸಾವಿರ ಪಡೆಯಲು ಅರ್ಹರು. ಅರ್ಜಿ ಸಲ್ಲಿಸಲು ನಿಗದಿಪಡಿಸಲಾದ ಕೊನೆಯ ದಿನಾಂಕ ಆಗಸ್ಟ್ 20. ಅರ್ಜಿ ಸಲ್ಲಿಕೆ ಮಾಡುವವರು 3 ವರ್ಷಗಳಿಗೆ ಕಡಿಮೆ ಇಲ್ಲದಂತೆ ವಕೀಲರಾಗಿ ಸೇವೆ ಸಲ್ಲಿಸುತ್ತಿರಬೇಕು.
ಅರ್ಹ ಅಭ್ಯರ್ಥಿಗಳು ಸದಸ್ಯ ಕಾರ್ಯದರ್ಶಿ ಗುತ್ತಿಗೆ ಆಧಾರದ ಸಹಾಯಕ ಸರ್ಕಾರಿ ಅಭಿಯೋಜಕರ ನೇಮಕಾತಿ ಸಮಿತಿ ಮತ್ತು ಸರ್ಕಾರಿ ಅಭಿಯೋಜಕರು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಡಿಕೇರಿ ಕೊಡಗು ಜಿಲ್ಲೆ ಇವರಿಗೆ ಅರ್ಜಿ ಸಲ್ಲಿಕೆ ಮಾಡಬೇಕು.
ಆಗಸ್ಟ್ 20ರೊಳಗೆ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಸರ್ಕಾರಿ ಅಭಿಯೋಜಕರು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಡಿಕೇರಿ ಕೊಡಗು ಜಿಲ್ಲೆ, ಇವರನ್ನು ಸಂಪರ್ಕಿಸಬಹುದು.












Click it and Unblock the Notifications