Get Updates
Get notified of breaking news, exclusive insights, and must-see stories!

ದಾವಣಗೆರೆ: ಕೆಲಸ ಖಾಲಿ ಇದೆ, ಮಾಸಿಕ ವೇತನ 9,000 ರೂ.ಗಳು

ದಾವಣಗೆರೆ, ಏಪ್ರಿಲ್ 02: ದಾವಣಗೆರೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮುಖ್ಯವಾದ ಮಾಹಿತಿಯೊಂದಿದೆ. ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಏಪ್ರಿಲ್ 21 ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 9,000 ರೂ. ವೇತನವನ್ನು ನಿಗದಿ ಮಾಡಲಾಗಿದೆ.

ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ 18 ರಿಂದ 45 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಎಸ್ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು ಹಾಗೂ ಕಂಪ್ಯೂಟರ್ ಜ್ಞಾನವುಳ್ಳರಾಗಿರಬೇಕು.

Apply For Jobs At Davanagere Gram Panchayats

ದಾವಣಗೆರೆ ತಾಲೂಕು ಹುಚ್ಚವ್ವನಹಳ್ಳಿ ಮತ್ತು ಚನ್ನಗಿರಿ ತಾಲೂಕಿನ ವಡ್ನಾಳ್ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.

ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ದೇವರಾಜ್ ಅರಸ್ ಬಡಾವಣೆ, 'ಬಿ' ಬ್ಲಾಕ್, ಶಿವಾಲಿ ಟಾಕೀಸ್ ಹತ್ತಿರ, ದಾವಣಗೆರೆ ಇವರನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-263939 ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ದಾವಣಗೆರೆ ಇವರನ್ನು 9590829024 ಮತ್ತು ಚನ್ನಗಿರಿ 9945738141 ಇವರನ್ನು ಸಂಪರ್ಕಿಸಬಹುದು.

ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿದ ಉಚಿತವಾಗಿ ಕಂಪ್ಯೂಟರ್ ಅಕೌಂಟಿಂಗ್ (ಟ್ಯಾಲಿ) ತರಬೇತಿ ಮತ್ತು ಮಹಿಳೆಯರಿಗೆ ಹೊಲಿಗೆ ತರಬೇತಿ ನೀಡಲಾಗುತ್ತಿದೆ.

ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ ಯುವತಿರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ 18 ರಿಂದ 45 ವಯೋಮಿತಿ ನಿಗದಿ ಮಾಡಲಾಗಿದೆ. ನಿರುದ್ಯೋಗಿ ಯುವಕ/ ಯುವತಿಯರಿಗೆ ಮೇ 2 ರಿಂದ 30 ದಿನಗಳ ಕಂಪ್ಯೂಟರ್ ಅಕೌಂಟಿಂಗ್ (ಟ್ಯಾಲಿ) ತರಬೇತಿ ಮತ್ತು ಯುವತಿಯರಿಗೆ ಮೇ 5 ರಿಂದ 30 ದಿನಗಳ ಮಹಿಳಾ ಹೊಲಿಗೆ ಉಚಿತ ತರಬೇತಿಗಳನ್ನು ನೀಡಲಾಗುತ್ತದೆ.

ಈ ತರಬೇತಿಗಳು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿಯು ಊಟ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿ ನೀಡಲಾಗುತ್ತದೆ.

ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಏಪ್ರಿಲ್ 30 ಕೊನೆಯ ದಿನವಾಗಿದೆ. ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಇವರನ್ನು ಸಂಪರ್ಕಿಸಿ. ಮೊಬೈಲ್ ಸಂಖ್ಯೆ 9980510717, 9483485489.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+