ಗದಗದಲ್ಲಿ ಕೆಲಸ ಖಾಲಿ ಇದೆ; ಜನವರಿ 11ರೊಳಗೆ ಅರ್ಜಿ ಹಾಕಿ

ಗದಗ, ಡಿಸೆಂಬರ್ 17: ಕೆ. ಎಚ್. ಪಾಟೀಲ್ ಕೃಷಿ ವಿಗ್ಯಾನ್ ಕೇಂದ್ರ ಹುಲ್ಕೋಟಿಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಜನವರಿ 11, 2021 ಕೊನೆಯ ದಿನವಾಗಿದೆ.

ಒಟ್ಟು 2 Subject Matter Specialist ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಗದಗ ಜಿಲ್ಲೆಯಲ್ಲಿ ಕಾರ್ಯ ನಿರ್ವಹಣೆ ಮಾಡಬೇಕು. ವೇತನ ಶ್ರೇಣಿ 15,600-39,100 ರೂ.ಗಳಾಗಿವೆ.

Subject Matter Specialist Agricultural Engineering 1, Agronomy 1 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

Apply For Jobs At KVK Hulkoti Gadag

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 11 ಜನವರಿ 2021ಕ್ಕೆ ಅನ್ವಯವಾಗುವಂತೆ 35 ವರ್ಷ ಮೀರಿರಬಾರದು. ಸಾಮಾನ್ಯ ಅಭ್ಯರ್ಥಿಗಳು 1 ಸಾವಿರ ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಎಸ್‌ಸಿ/ಎಸ್‌ಟಿ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸುವಾಗ ಸರಿಯಾದ ಮೊಬೈಲ್ ಸಂಖ್ಯೆ, ಇ-ಮೇಲ್ ವಿಳಾಸವನ್ನು ನೀಡಬೇಕು. ಸ್ಪೀಡ್ ಅಥವ ರಿಜಿಸ್ಟರ್ ಪೋಸ್ಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿಗಳನ್ನು ಕಳಿಸಲು ವಿಳಾಸ : Chairman, Agricultural Science Foundation, Hulkoti - 582205, Gadag District, Karnataka

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+