ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ; ಸೆ. 20ರೊಳಗೆ ಅರ್ಜಿ ಹಾಕಿ
ಬೆಂಗಳೂರು, ಸೆಪ್ಟೆಂಬರ್ 05; ಬೆಂಗಳೂರಿನಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ವತಿಯಿಂದ 'ಸಖಿ' (ಒನ್ ಸ್ಟಾಪ್ ಸೆಂಟರ್) ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಸೆಪ್ಟೆಂಬರ್ 20ರ ಸಂಜೆ 5.30 ರೊಳಗೆ ಅರ್ಜಿ ಸಲ್ಲಿಸಬಹುದು.
ಹೊರಗುತ್ತಿಗೆ ಆಧಾರದ ಮೇಲೆ ಆಪ್ತ ಸಮಾಲೋಚಕ 1 ಹುದ್ದೆ, ಸಮಾಜ ಸೇವಾ ಕಾರ್ಯಕರ್ತೆ 2 ಹುದ್ದೆ, ಕಾನೂನು ಸಲಹೆಗಾರರು- ವಕೀಲರು (ಪ್ಯಾರ ಲೀಗಲ್ ಹುದ್ದೆ) 1 ಹುದ್ದೆ ಹಾಗೂ ವಿವಿದೋದ್ದೇಶ ಸ್ವಚ್ಚತಾಗಾರರು 1 ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆಯ ವಿವರಗಳು: ಆಪ್ತ ಸಮಾಲೋಚಕ ಹುದ್ದೆಗೆ ಎಂ.ಎಸ್.ಡಬ್ಯ್ಲೂ, ಸ್ನಾತಕೋತ್ತರ ಕಾನೂನು ಪದವಿ, ಎಂ.ಎಸ್.ಸಿ ಹೋಮ್ ಸೈನ್ಸ್ (ಹ್ಯೂಮನ್ ಡೆವೆಲಪ್ ಮೆಂಟ್ ಮತ್ತು ಫ್ಯಾಮಿಲಿ ರಿಲೇಷನ್ ) ಎಂ.ಎಸ್.ಸಿ ಸೈಕಾಲಜಿ, ಎಂ.ಎಸ್.ಸಿ ಸೈಕಿಯಾಟ್ರಿ ಸೇವೆಯಲ್ಲಿ ಸರ್ಕಾರಿ, ಸ್ವಯಂ ಸೇವಾಸಂಸ್ಥೆಗಳಲ್ಲಿ ಕನಿಷ್ಠ 3 ವರ್ಷಗಳ ಸಮಾಲೋಚನ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ ಕನ್ನಡ, ಇಂಗ್ಲಿಷ್ ಬೆರಳಚ್ಚು, ಗೂಗಲ್ ಶೀಟ್ MS OFFICE ಹಾಗೂ ಪಿಪಿಟಿಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.
ಸಮಾಜ ಸೇವಾ ಕಾರ್ಯಕರ್ತೆ ಹುದ್ದೆಗೆ ಬಿ.ಎಸ್.ಡಬ್ಲ್ಯೂ, ಬಿ.ಎ (ಸೋಷಿಯಾಲಜಿ ಮಹಿಳಾ ಅಧ್ಯಯನ) ಪದವಿ ಹೊಂದಿರಬೇಕು. ಸರ್ಕಾರಿ, ಸ್ವಯಂ ಸೇವಾಸಂಸ್ಥೆಗಳಲ್ಲಿ ಕನಿಷ್ಠ 2 ವರ್ಷಗಳ ಸಮಾಜ ಕಾರ್ಯ ಅನುಭವ ಹೊಂದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ ಕನ್ನಡ, ಇಂಗ್ಲಿಷ್ ಬೆರಳಚ್ಚು, ಗೂಗಲ್ ಶೀಟ್ MS OFFICE ಹಾಗೂ ಪಿಪಿಟಿಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.
ವಕೀಲರು (ಪ್ಯಾರಾ ಲೀಗಲ್ ಹುದ್ದೆ) ಹುದ್ದೆಗೆ ಕಾನೂನು ಪದವಿ ಹೊಂದಿರಬೇಕು ಹಾಗೂ ಕಾನೂನು ಸೇವೆಯಲ್ಲಿ 2 ವರ್ಷ ಅನುಭವ ಇರಬೇಕು.
ವಿವಿದೋದ್ದೇಶ ಸ್ವಚ್ಚತಾಗಾರರ/ ಸೆಕ್ಯೂರಿಟಿ ಹುದ್ದೆಗೆ 7ನೇ ತರಗತಿ ವಿದ್ಯಾರ್ಹತೆ ಹೊಂದಿದ್ದು, ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಇರಬೇಕು. ವಯೋಮಿತಿ 18 ರಿಂದ 45 ವರ್ಷದ ಒಳಗಿರಬೇಕು.
ಆಸಕ್ತ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಉಪ ನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ.ಎಚ್. ಮರಿಗೌಡ ರಸ್ತೆ, ಬೆಂಗಳೂರು ಇಲ್ಲಿ ಸೆಪ್ಟೆಂಬರ್ 20ರ ಸಂಜೆ 5.30ರೊಳಗೆ ಸಲ್ಲಿಸಬಹುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ 080-26578688ಗೆ ಸಂಪರ್ಕಿಸಬಹುದು.
ತರಬೇತಿಗೆ ಅರ್ಜಿ ಆಹ್ವಾನ; ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ನಿರುದ್ಯೋಗ ಯುವಕ, ಯುವತಿಯರಿಗೆ ಸ್ವಂತ ಉದ್ಯೋಗ, ಕಛೇರಿ, ಕಂಪನಿ, ಕಾರ್ಖಾನೆಗಳಲ್ಲಿ ಉದ್ಯೋಗ ದೊರಕಿಸುವ ಸಲುವಾಗಿ 2023-24ನೇ ಸಾಲಿನಲ್ಲಿ ಸಮುದಾಯ ಆಧಾರಿತ ತರಬೇತಿ ಯೋಜನೆಯಡಿಯಲ್ಲಿ ತರಬೇತಿ ನೀಡಲಾಗುತ್ತಿದೆ.
ಈ ತರಬೇತಿ ಪಡೆಯಲು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮಾನ್ಯತೆ ಪಡೆದ ಕೇಂದ್ರಗಳೊಂದಿಗೆ ಬ್ಯೂಟಿ ಪಾರ್ಲರ್ ತರಬೇತಿ (ಪುರುಷರು ಮತ್ತು ಮಹಿಳೆಯರು) ಪ್ರಮಾಣೀಕರಣ ಕೋರ್ಸ್, ಹೆವಿ ಅರ್ಥ್ ಮೂವರ್ ತರಬೇತಿ (ಜೆಸಿಬಿ, ಕ್ರೇನ್, ಪೋಕ್ ಲೇನ್ ಸೇರಿದಂತೆ ಭಾರಿ ವಾಹನ ಚಾಲನಾ ತರಬೇತಿ), ಶಾರ್ಟ್ ಹ್ಯಾಂಡ್ ಟ್ರೈನಿಂಗ್ ಮತ್ತು ಭದ್ರತಾ ಸೇವೆಗಳ ತರಬೇತಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆ ಮಾಡುವವರ ವಯಮೋತಿ 18 ರಿಂದ 35 ವರ್ಷಗಳು. ಆಯ್ಕೆಯಾದ ಅಭ್ಯರ್ಥಿಯು ಕಡ್ಡಾಯವಾಗಿ ತರಬೇತಿಯನ್ನು ಪೂರ್ಣಗೊಳಿಸರಬೇಕು. ಅಭ್ಯರ್ಥಿಯು ಬೇರೆ ಯಾವುದೇ ಸರ್ಕಾರದ ವತಿಯಿಂದ ವೃತ್ತಿ ಪರ ತರಬೇತಿಯನ್ನು ಪಡೆದಿರಬಾರದು. ಆಸಕ್ತರು ವೆಬ್ ಸೈಟ್ https://kmdconline.karnataka.gov.in ನಲ್ಲಿ ಅರ್ಜಿಗಳನ್ನು ಸೆಪ್ಟೆಂಬರ್ 25ರೊಳಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ (ಕೇಂದ್ರಿಯ ವಿಭಾಗ), ಕೊಠಡಿ ಸಂಖ್ಯೆ ಎಫ್ ಎಫ್ -29/37, 1ನೇ ಮಹಡಿ, ಹಮೀದ್ ಷಾ ಕಾಂಪ್ಲೆಕ್ಸ್, ಹಲಸೂರು ಗೇಟ್ ಪೊಲೀಸ್ ಠಾಣೆ ಹತ್ತಿರ, ಕಬ್ಬನ್ ಪೇಟೆ ಮುಖ್ಯ ರಸ್ತೆ, ಬೆಂಗಳೂರು -02 ಇವರನ್ನು ಸಂಪರ್ಕಿಸಬಹುದು.












Click it and Unblock the Notifications