ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರಗಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಹಾಕಿ

|
Google Oneindia Kannada News

ಕಲಬುರಗಿ, ಆಗಸ್ಟ್ 27; ಕಲಬುರಗಿ ಪೊಲೀಸ್ ತರಬೇತಿ ಮಹಾವಿದ್ಯಾಲಯ, ಕಲಬುರಗಿಯ ಪ್ರೊಬೇಷನರಿ ಪಿ. ಎಸ್. ಐ. ಪ್ರಶಿಕ್ಷಣಾರ್ಥಿಗಳಿಗೆ ಮನೋವಿಜ್ಞಾನ ವಿಷಯ ಕುರಿತು ಬೋಧನೆ ಮಾಡಲು ಅರ್ಹ ಅತಿಥಿ ಉಪನ್ಯಾಸಕ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ಒಂದು ವಾರದೊಳಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಬಯೋಡೇಟಾ ಸಹಿತ ಕಳಿಸಬಹುದಾಗಿದೆ ಎಂದು ಕಲಬುರಗಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಪ್ರಾಂಶುಪಾಲರು ಹಾಗೂ ಪೊಲೀಸ್ ಅಧೀಕ್ಷರು ತಿಳಿಸಿದ್ದಾರೆ.

ಕೇಂದ್ರ ಮೀಸಲು ಪೊಲೀಸ್ ಪಡೆ ನೇಮಕಾತಿ: 2,439 ಹುದ್ದೆಗಳಿವೆ ಕೇಂದ್ರ ಮೀಸಲು ಪೊಲೀಸ್ ಪಡೆ ನೇಮಕಾತಿ: 2,439 ಹುದ್ದೆಗಳಿವೆ

ಮನೋ ವಿಜ್ಞಾನ ವಿಷಯ ಬೋಧಿಸಲು ಇಚ್ಛೆಹೊಂದಿರುವ ಉಪನ್ಯಾಸಕರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಉಪನ್ಯಾಸಕರ ಬೋಧನೆ ಭತ್ಯೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶ್ರೀ ಶರಣಬಸವೇಶ್ವರ, ಡಿಎಸ್‍ಪಿ ಅವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 94489 47267.

ಕರ್ನಾಟಕ ಹೈಕೋರ್ಟ್ ನೇಮಕಾತಿ 2021: 142 ಹುದ್ದೆಗಳಿಗೆ ಅರ್ಜಿ ಕರ್ನಾಟಕ ಹೈಕೋರ್ಟ್ ನೇಮಕಾತಿ 2021: 142 ಹುದ್ದೆಗಳಿಗೆ ಅರ್ಜಿ

Apply For Jobs In Kalaburagi Dharwad District

ಸಹಾಯಕ ಯೋಜನಾ ವ್ಯವಸ್ಥಾಪಕ; ಕರ್ನಾಟಕ ಅನುಸೂಚಿತ ಜಾತಿ ಉಪಯೋಜನೆ ಮತ್ತು ಬುಡಕಟ್ಟು ಯೋಜನೆಯಡಿ ಅನುಷ್ಠಾನ ಮಾಡುವ ಕಾರ್ಯಕ್ರಮಗಳ ಬಗ್ಗೆ ಬೆಳಗಾವಿ ವಿಭಾಗ ಮಟ್ಟದ ಸಮಗ್ರ ಮೇಲ್ವಿಚಾರಣೆಗೆ ಸಮಾಜ ಕಲ್ಯಾಣ ಇಲಾಖೆಯ ಧಾರವಾಡ ಜಂಟಿ ನಿರ್ದೇಶಕರ ಕಾರ್ಯಾಲಯದಲ್ಲಿ ಬೆಳಗಾವಿ ವಿಭಾಗ ಮಟ್ಟದ ಎಸ್. ಸಿ. ಎಸ್. ಪಿ, ಟಿ. ಎಸ್. ಪಿ. ಕೋಶ ತೆರೆಯಲಾಗಿದೆ.

ಸಮಗ್ರ ಮೇಲ್ವಿಚಾರಣಾ ಕೋಶದ ನಿರ್ವಹಣೆಗಾಗಿ ಹಾಗೂ ಸಮಗ್ರ ಮೇಲ್ವಿಚಾರಣೆಗಾಗಿ ಹೊರ ಸಂಪನ್ಮೂಲ ಆಧಾರದ ಮೇರೆಗೆ ಸಹಾಯಕ ಯೋಜನಾ ವ್ಯವಸ್ಥಾಪಕ 1 ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ.

ಮೈಸೂರು; ಮಿನಿ ಉದ್ಯೋಗ ಮೇಳಕ್ಕೆ ಹೆಸರು ನೋಂದಾಯಿಸಿ ಮೈಸೂರು; ಮಿನಿ ಉದ್ಯೋಗ ಮೇಳಕ್ಕೆ ಹೆಸರು ನೋಂದಾಯಿಸಿ

ಆಸಕ್ತವುಳ್ಳ ಅರ್ಹ ಅಭ್ಯರ್ಥಿಗಳು ಆಗಸ್ಟ್‌ 31ರ ಕಾರ್ಯಾಲಯದ ಅವಧಿಯೊಳಗಾಗಿ ಅರ್ಜಿಯನ್ನು ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಧಾರವಾಡ ಇವರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಂಟಿನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ 0836-2447201.

ಅರ್ಜಿ ಆಹ್ವಾನ; ಹಾಸನ ಜಿಲ್ಲೆಯಲ್ಲಿ 2021-22 ನೇ ಸಾಲಿಗೆ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಯೋಜನೆಯಡಿ ಗ್ರಾಮೀಣ/ ನಗರ/ ಪ್ರದೇಶದ 18 ವರ್ಷಗಳ ಮೇಲ್ಪಟ್ಟ (ಎಸ್.ಸಿ, ಎಸ್,ಟಿ, ಓ.ಬಿ.ಸಿ, ಅಲ್ಪಸಂಖ್ಯಾತ ಇತರೆ) ಪುರುಷ/ ಮಹಿಳಾ ಅಭ್ಯರ್ಥಿಗಳು ಹೊಸದಾಗಿ ಕೈಗಾರಿಕೆ / ಸೇವಾ ಉದ್ಯಮಗಳನ್ನು ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದು.

ಉತ್ಪಾದನಾ ವಲಯಕ್ಕೆ 25 ಲಕ್ಷ ರೂ. ಹಾಗೂ ಸೇವಾ ವಲಯಕ್ಕೆ 10 ಲಕ್ಷ ರೂ.ಗಳ ವರೆಗೆ ರಾಷ್ಟ್ರೀಕೃತ ಬ್ಯಾಂಕ್ ಮೂಲಕ ಸಾಲ ನೀಡಲಾಗುವುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಅಭ್ಯರ್ಥಿಗಳು https://kviconline. gov.in/pmegpeportal ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಡೈರಿ ಸರ್ಕಲ್ ಹತ್ತಿರ ಬಿ. ಎಂ. ರಸ್ತೆ ಹಾಸನದ ಆಡಳಿತ ಕಚೇರಿಯನ್ನು ಸಂಪರ್ಕಿಸಿ.

English summary
Apply for jobs in Kalaburagi and Dharwad district. In Kalaburagi applications invited for guest lecturer post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X