ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಪ್ಪಳ, ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ

|
Google Oneindia Kannada News

ಬೆಂಗಳೂರು, ಫೆಬ್ರವರಿ 23; ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಅಫಜಲಪುರ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿಯಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರ ಹುದ್ದೆ ಭರ್ತಿಗೆ ಅರ್ಜಿ ಕರೆಯಲಾಗಿದೆ.

ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾಧಿಕ್ ಹುಸೇನ್‍ಖಾನ್ ಈ ಕುರಿತು ಮಾಹಿತಿ ನೀಡಿದ್ದಾರೆ. ಗೌರವಧನದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಎನ್‌ಎಚ್‌ಎಐ ನೇಮಕಾತಿ; 15 ಜನರಲ್ ಮ್ಯಾನೇಜರ್‌ ಹುದ್ದೆಗೆ ಅರ್ಜಿ ಹಾಕಿ ಎನ್‌ಎಚ್‌ಎಐ ನೇಮಕಾತಿ; 15 ಜನರಲ್ ಮ್ಯಾನೇಜರ್‌ ಹುದ್ದೆಗೆ ಅರ್ಜಿ ಹಾಕಿ

ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು. ಕಡ್ಡಾಯವಾಗಿ ಜನ್ಮದಿನಾಂಕಕ್ಕೆ ಸಂಬಂಧಿಸಿದ ದಾಖಲೆಗಳು ಸಲ್ಲಿಸಬೇಕು.

ಐಡ್ಲ್ಯುಎಸ್‌ಟಿ ನೇಮಕಾತಿ; ಫಾರೆಸ್ಟ್‌ ಗಾರ್ಡ್‌ ಹುದ್ದೆಗಳು ಐಡ್ಲ್ಯುಎಸ್‌ಟಿ ನೇಮಕಾತಿ; ಫಾರೆಸ್ಟ್‌ ಗಾರ್ಡ್‌ ಹುದ್ದೆಗಳು

Apply For Jobs In Koppal And Kalaburagi

ಅಂಗವಿಕಲ ವ್ಯಕ್ತಿಯಾಗಿರಬೇಕು (ಅಂಗವಿಕಲರ ಗುರುತಿನ ಚೀಟಿ/ ಯು.ಡಿ.ಐ.ಡಿ. ಸಲ್ಲಿಸಬೇಕು). ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 12,000 ರೂ.ಗಳ ಗೌರವಧನ ನೀಡಲಾಗುತ್ತದೆ. ಈ ಹುದ್ದೆಯು ತಾತ್ಕಾಲಿಕವಾಗಿದ್ದು, ಯಾವುದೆ ಖಾಯಂಮಾತಿಗೆ ಅವಕಾಶ ಇರುವುದಿಲ್ಲ.

ಶಿವಮೊಗ್ಗ; ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ ಶಿವಮೊಗ್ಗ; ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

ಹುದ್ದೆಯನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ತಾಲೂಕಾ ಕೇಂದ್ರ ಸ್ಥಾನದಲ್ಲಿ ವಾಸಿಸುತ್ತಿರಬೇಕು ಹಾಗೂ ಇದಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್‌ ಅವರಿಂದ ಪಡೆದ ವಾಸಸ್ಥಳ ಪ್ರಮಾಣಪತ್ರ ಸಲ್ಲಿಸಬೇಕು.

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ 2022ರ ಮಾರ್ಚ್ 8ರ ಸಂಜೆ 5.30ರೊಳಗಾಗಿ ಸಲ್ಲಿಸಬೇಕು. ಅರ್ಜಿಗಳನ್ನು ಕಲಬುರಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಕಚೇರಿ ವೇಳೆಯಲ್ಲಿ ಸಲ್ಲಿಸಬೇಕು.

ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ವಿಕಲಚೇತನರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದುದ. ದೂರವಾಣಿ ಸಂಖ್ಯೆ 08472-235222.

ಅಪ್ರೆಂಟಿಸ್ ತರಬೇತಿ ಕ್ಯಾಂಪಸ್‌ ಸಂದರ್ಶನ; ಬೆಂಗಳೂರಿನ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈ. ಲಿ. ವತಿಯಿಂದ ಐಟಿಐ ಪಾಸಾದ ಅಥವಾ ಫಲಿತಾಂಶ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಟಣಕನಕಲ್‌ನ ಸರ್ಕಾರಿ ಕೈಗಾರಿಕಾ ತರವೇತಿ ಸಂಸ್ಥೆಯಲ್ಲಿ ಫೆಬ್ರವರಿ 28 ರಂದು ಬೆಳಗ್ಗೆ 9 ಗಂಟೆಗೆ ಶಿಶಿಕ್ಷು ತರಬೇತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಗಿದೆ.

ಐಟಿಐ ಎಲೆಕ್ಟ್ರಿಷಿಯನ್, ಫಿಟ್ಟರ್, ಟರ್ನರ್ ಮತ್ತು ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಮೆಕ್ಯಾನಿಕ್ ಡೀಸಲ್, ಟೂಲ್ ಆಂಡ್ ಡೈ ಮೇಕಿಂಗ್ ಮತ್ತು ವೆಲ್ಡರ್ ವೃತ್ತಿಗಳ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ಆಸಕ್ತ ಅಭ್ಯರ್ಥಿಗಳು ಆಧಾರ್ ಕಾರ್ಡ್, ಫೋಟೋ, ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು ಹಾಗೂ 2 ಸೆಟ್ ಝೆರಾಕ್ಸ್ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಟಣಕನಕಲ್‌ನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯನ್ನು ಸಂಪರ್ಕಿಸಬಹುದು.

ಕೊಡಗು ಜಿಲ್ಲೆಯಲ್ಲಿ ಕೆಲಸ ಖಾಲಿ ಇದೆ; ಕೊಡಗು ಜಿಲ್ಲೆಯಲ್ಲಿ ವಿವಿಧ ಕಡೆಗಳಲ್ಲಿ ಖಾಲಿ ಇರುವ ಆಶಾ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಡಿಕೇರಿ ತಾಲ್ಲೂಕಿನ ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಮೂರ್ನಾಡು ಪಟ್ಟಣ, ಮೂರ್ನಾಡು ಪಿಎಚ್‍ಸಿ ವ್ಯಾಪ್ತಿಯ ಬೇತು, ಚೆಯ್ಯಂಡಾಣೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಬೇತು, ಮಡಿಕೇರಿ ನಗರದ ತ್ಯಾಗರಾಜ ಕಾಲೋನಿಯಲ್ಲಿ ಹುದ್ದೆ ಖಾಲಿ ಇದೆ.

ವಿರಾಜಪೇಟೆ ತಾಲ್ಲೂಕಿನ ಕುಟ್ಟಂದಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ವಿ.ಬಾಡಗ, ಕಾನೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಬೆಸಗೂರು, ಬಿರುನಾಣಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ತೆರಾಲು, ಹೈಸೊಡ್ಲೂರು, ಬಿರುನಾಣಿ(ಎ), ಕಣ್ಣಂಗಾಲ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಹಚ್ಚಿನಾಡು, ಕಾರ್ಮಾಡು, ಸೋಮವಾರಪೇಟೆ ತಾಲ್ಲೂಕಿನ ಚೆಟ್ಟಳ್ಳಿ ಪಿಎಚ್‍ಸಿ ವ್ಯಾಪ್ತಿಯ ನೆಲ್ಯಹುದಿಕೇರಿ ಈ ವ್ಯಾಪ್ತಿಯಲ್ಲಿ ಹುದ್ದೆ ಭರ್ತಿ ಮಾಡಲಾಗುತ್ತಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅದೇ ಗ್ರಾಮದ ನಿವಾಸಿಯಾಗಿರಬೇಕು. ಎಸ್‍ಎಸ್‍ಎಲ್‍ಸಿ ಪಾಸಾಗಿರಬೇಕು (ಗಿರಿಜನ ಬುಡಕಟ್ಟು ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳು ಕನಿಷ್ಟ 4ನೇ ತರಗತಿ ಉತ್ತೀರ್ಣರಾಗಿರಬೇಕು). ವಯೋಮಿತಿ 25 ರಿಂದ 45 ವರ್ಷಗಳು.

ವಿವಾಹಿತೆ ಅಥವಾ ವಿಧವೆ, ವಿಚ್ಚೇದಿತ ಮಹಿಳೆಯಾಗಿದ್ದು, ಜೀವಂತ ಇಬ್ಬರು ಮಕ್ಕಳನ್ನು ಹೊಂದಿರಬೇಕು. ಸಮುದಾಯದ ಕೆಳಮಟ್ಟದ ಸವಲತ್ತು ಹೊಂದಿರುವ ವಿಭಾಗದಿಂದ ಆಧ್ಯತೆಯ ಮೇರೆ ಆರಿಸಿಕೊಳ್ಳಬೇಕು. ಅಭ್ಯರ್ಥಿಯು ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು.

Recommended Video

ಯುದ್ಧದ ಆತಂಕದಲ್ಲಿ ಉಕ್ರೇನ್ ನಿಂದ ಭಾರತಕ್ಕೆ ಮರಳಿದ 242 ಭಾರತೀಯರು | Oneindia Kannada

English summary
Apply for jobs in Koppal and Kalaburagi. Campus interview for apprenticeship at Koppal on Febuary 28.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X