ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ನೇಮಕಾತಿ; ಅರ್ಜಿ ಹಾಕಿ

|
Google Oneindia Kannada News

ಕಲಬುರಗಿ, ಡಿಸೆಂಬರ್ 20: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಡಿಸೆಂಬರ್ 29ರ ಸಂಜೆ 5.30 ರೊಳಗಾಗಿ ಕಚೇರಿ ಸಮಯದಲ್ಲಿ ಅರ್ಜಿ ಹಾಕಬೇಕು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕೋಶಗಳಲ್ಲಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದ ಕಾರ್ಯನಿರ್ವಹಿಸಲು ನಿವೃತ್ತ ಸರ್ಕಾರಿ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಿಇಎಲ್ ನೇಮಕಾತಿ 2020: 137 ಟ್ರೈನಿ ಇಂಜಿನಿಯರ್ ಹುದ್ದೆಗಳಿವೆ ಬಿಇಎಲ್ ನೇಮಕಾತಿ 2020: 137 ಟ್ರೈನಿ ಇಂಜಿನಿಯರ್ ಹುದ್ದೆಗಳಿವೆ

ಕಲಬುರಗಿ, ಬೀದರ್, ಯಾದಗಿರಿ, ಬಳ್ಳಾರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ತಾಂತ್ರಿಕ ಸಲಹೆಗಾರರು (ಪ್ರತಿ ಜಿಲ್ಲೆಗೆ ಒಬ್ಬರಂತೆ) 6 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಗದಗದಲ್ಲಿ ಕೆಲಸ ಖಾಲಿ ಇದೆ; ಜನವರಿ 11ರೊಳಗೆ ಅರ್ಜಿ ಹಾಕಿ ಗದಗದಲ್ಲಿ ಕೆಲಸ ಖಾಲಿ ಇದೆ; ಜನವರಿ 11ರೊಳಗೆ ಅರ್ಜಿ ಹಾಕಿ

Apply For Jobs Kalyana Karnataka Region Development Board

PWD, PRED, MI, RWS, KUWSDB, KRIDL ಇಲಾಖೆಗಳ ನಿವೃತ್ತ ಅಧೀಕ್ಷಕ ಅಭಿಯಂತರರು ಅಥವಾ ಕನಿಷ್ಠ 5 ವರ್ಷಗಳ ಅನುಭವ ಹೊಂದಿರುವ ನಿವೃತ್ತ ಕಾರ್ಯನಿರ್ವಾಹಕ ಅಭಿಯಂತರರು ಅರ್ಜಿ ಸಲ್ಲಿಸಬಹುದಾಗಿದೆ. ಮಾಸಿಕ ಗೌರವಧನ 40,000 ರೂ.ಗಳು.

ನೈಋತ್ಯ ರೈಲ್ವೆ ನೇಮಕಾತಿ: 1004 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ ನೈಋತ್ಯ ರೈಲ್ವೆ ನೇಮಕಾತಿ: 1004 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ

ತಾಂತ್ರಿಕ ಅಧಿಕಾರಿ 6 ಹುದ್ದೆಗಳಿಗೆ PWD, PRED, MI, RWS, KUWSDB, KRIDL ಇಲಾಖೆಗಳ ನಿವೃತ್ತ ಕಾರ್ಯನಿರ್ವಾಹಕ ಅಭಿಯಂತರರು ಅಥವಾ ಕನಿಷ್ಠ 5 ವರ್ಷಗಳ ಅನುಭವ ಹೊಂದಿರುವ ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಅರ್ಜಿ ಸಲ್ಲಿಸಬಹುದಾಗಿದೆ. ಮಾಸಿಕ ಗೌರವಧನ 30,000 ರೂ.ಗಳು.

ಡಾಟಾ ಎಂಟ್ರಿ ಆಪರೇಟರ್ 6 ಹುದ್ದೆಗಳಿಗೆ ಯಾವುದೇ ಪದವಿ ಅಥವಾ ಕಂಪ್ಯೂಟರ್ ಕೋರ್ಸ್ ಪ್ರಮಾಣ ಪತ್ರ ಹೊಂದಿದವರು ಅರ್ಜಿ ಹಾಕಬಹುದು. ಮಂಡಳಿಯ ಕಾರ್ಯದರ್ಶಿಗಳು ಅಧ್ಯಕ್ಷತೆಯಲ್ಲಿ ಸಂದರ್ಶನದ ಮೂಲಕ ಆಯ್ಕೆ ಅರ್ಹರ ಆಯ್ಕೆ ನಡೆಯಲಿದೆ.

ನಿವೃತ್ತ ಅಧಿಕಾರಿ, ಸಿಬ್ಬಂದಿಗಳ ವಯೋಮಿತಿ 65 ವರ್ಷ ಮೀರಿರಬಾರದು. ನಿವೃತ್ತ ಅಧಿಕಾರಿ/ಸಿಬ್ಬಂದಿಗಳು ತಮ್ಮ ಪಿಂಚಣಿ ಪತ್ರದ ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಹೊರಗುತ್ತಿಗೆ ಆಧಾರದ ಮೇಲೆ ಗರಿಷ್ಠ ಒಂದು ವರ್ಷದ ಅವಧಿಗೆ ಮಾತ್ರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ಕಂಪ್ಯೂಟರ್ ಆಪರೇಟರ್ ಹುದ್ದೆಗೆ ಕನ್ನಡ ಹಾಗೂ ಆಂಗ್ಲ ಭಾಷೆಯಲ್ಲಿ ಬೆರಳಚ್ಚು ಮಾಡುವ ಜ್ಞಾನದ ಜೊತೆಗೆ 2 ವರ್ಷಗಳ ಅನುಭವ ಹೊಂದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಜಿಲ್ಲೆಯ ಕೇಂದ್ರ ಸ್ಥಳದಲ್ಲಿ ವಾಸಿಸುತ್ತಿರುವುದು ಕಡ್ಡಾಯ.

ಆಸಕ್ತಿಯುಳ್ಳ ನಿವೃತ್ತ ಅಧಿಕಾರಿ ಹಾಗೂ ಸಿಬ್ಬಂದಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲಾತಿಗಳನ್ನು ಲಗತ್ತಿಸಿ ಕಲಬುರಗಿ ಐವಾನ್ ಶಾಹಿಯಲ್ಲಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯಾಲಯದಲ್ಲಿ (ರಜಾದಿನ ಹೊರತುಪಡಿಸಿ) ಡಿಸೆಂಬರ್ 29ರ ಸಂಜೆ 5.30 ರೊಳಗಾಗಿ ಕಚೇರಿ ಅವಧಿಯಲ್ಲಿ ಸಲ್ಲಿಸಬೇಕು.

ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯಾಲಯದಲ್ಲಿ 2020ರ ಡಿಸೆಂಬರ್ 31 ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನವಿದೆ. ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ಕಚೇರಿಯನ್ನು ಸಂಪರ್ಕಿಸಬಹುದು.

English summary
Apply for the various posts in Kalyana Karnataka Region Development Board. Candidates can submit applications till December 29, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X