ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಪ್ರೆಂಟಿಸ್ ತರಬೇತಿ; ಮಾಸಿಕ 15 ಸಾವಿರ ರೂ. ಸ್ಟೈಫಂಡ್

|
Google Oneindia Kannada News

ಮಡಿಕೇರಿ, ಅಕ್ಟೋಬರ್ 12; ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ 10 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ನೀಡಲಿದ್ದು, ಆಸಕ್ತರಿಂದ ಅರ್ಜಿ ಕರೆದಿದೆ.

ಜಿಲ್ಲಾ ಕಚೇರಿಗಳಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 10 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿ ನೀಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೆಪಿಟಿಸಿಎಲ್ ಅಪ್ರೆಂಟಿಸ್ ತರಬೇತಿ; ಅ. 16ರೊಳಗೆ ಅರ್ಜಿ ಹಾಕಿ ಕೆಪಿಟಿಸಿಎಲ್ ಅಪ್ರೆಂಟಿಸ್ ತರಬೇತಿ; ಅ. 16ರೊಳಗೆ ಅರ್ಜಿ ಹಾಕಿ

2021-22ನೇ ಸಾಲಿನಲ್ಲಿ ಕಲಬುರಗಿ ಜಿಲ್ಲಾ ಕಚೇರಿಯಲ್ಲಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಓರ್ವ ಅಭ್ಯರ್ಥಿಯನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ನೈಋತ್ಯ ರೈಲ್ವೆ ಅಪ್ರೆಂಟಿಸ್ ಹುದ್ದೆ ಭರ್ತಿ; 904 ಹುದ್ದೆಗಳಿವೆ ನೈಋತ್ಯ ರೈಲ್ವೆ ಅಪ್ರೆಂಟಿಸ್ ಹುದ್ದೆ ಭರ್ತಿ; 904 ಹುದ್ದೆಗಳಿವೆ

Apply For Journalism Apprenticeship At Kalaburagi District

ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಅಭ್ಯರ್ಥಿಗೆ ಮಾಸಿಕ 15,000 ರೂ. ಗಳ ಸ್ಟೈಫಂಡ್ ನೀಡಲಾಗುವುದು. ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ/ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.

ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ನೇಮಕಾತಿ; ಸಿಹಿಸುದ್ದಿ ಕೊಟ್ಟ ಸರ್ಕಾರಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ನೇಮಕಾತಿ; ಸಿಹಿಸುದ್ದಿ ಕೊಟ್ಟ ಸರ್ಕಾರ

ಅರ್ಜಿಯೊಂದಿಗೆ ಎಸ್. ಎಸ್. ಎಲ್. ಸಿ. ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ, ಪಾಸ್‍ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಸಲ್ಲಿಸಲು ನವೆಂಬರ್ 2 ಕೊನೆಯ ದಿನವಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರ ಕಚೇರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಿನಿ ವಿಧಾನಸೌಧ ಆವರಣ, ಲೋಕಸಭಾ ಸದಸ್ಯರ ಕಚೇರಿ ಹತ್ತಿರ, ಕಲಬುರಗಿ-585102 ಇವರನ್ನು ಸಂಪರ್ಕಿಸಬಹುದು. ಕಚೇರಿಯ ದೂರವಾಣಿ ಸಂಖ್ಯೆ 08472-223133.

ಕುರಿ ಸಾಕಾರಣಿಕೆ ತರಬೇತಿಗೆ ಅರ್ಜಿ ಹಾಕಿ; ಕಲಬುರಗಿ ಎಸ್. ಬಿ. ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ (ಕಿಟಸರ್ಡ್) ಸಂಸ್ಥೆಯಲ್ಲಿ ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ 10 ದಿನಗಳ ಕಾಲ ಕುರಿ ಸಾಕಾಣಿಕೆ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದ 18 ರಿಂದ 45 ವರ್ಷದೊಳಗಿನ ಬಿಪಿಎಲ್ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಅಕ್ಟೋಬರ್ 15 ರೊಳಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತರಬೇತಿ ಸಂಸ್ಥೆಯಲ್ಲಿ 2021ರ ಅಕ್ಟೋಬರ್ 16ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು 9243602888, 9886781239 ನಂಬರ್ ಮೂಲಕ ಸಂಪರ್ಕಿಸಲು ಕೋರಲಾಗಿದೆ.

ಸೆಕ್ಯುರಿಟಿ ಹುದ್ದೆಗೆ ಅರ್ಜಿ ಆಹ್ವಾನ; ಬೆಂಗಳೂರಿನ ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ಖಾಲಿ ಇರುವ ಸೆಕ್ಯೂರಿಟಿ ಹುದ್ದೆಗಾಗಿ ಮಾಜಿ ಸೈನಿಕರಿಂದ (ಹವಾಲ್ದಾರ್ ಮತ್ತು ಅದಕ್ಕಿಂತ ಕೆಳಗಿನ ಹುದ್ದೆ) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 21 ಕೊನೆಯ ದಿನಾಂಕವಾಗಿದೆ.

ಆಸಕ್ತರು ಶಿವಮೊಗ್ಗದ ಸೈನಿಕ ಮತ್ತು ಪುನರ್ವಸತಿ ಇಲಾಖೆಯ ಕಛೇರಿಯಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಕಛೇರಿಗೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925 ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

English summary
Application invited for the Journalism apprenticeship of 10 moths in Kalaburagi district. Candidates who belongs to scheduled castes and scheduled tribes can submit applications till November 2, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X