Bank Jobs: ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ: ಎಲ್ಲಿ? ಏನು? ಇಲ್ಲಿದೆ ಸಂಪೂರ್ಣ ಮಾಹಿತಿ
ಮಡಿಕೇರಿ, ಡಿಸೆಂಬರ್ 24: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಶಾಖೆಯಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಬ್ಯಾಂಕ್‌ನಲ್ಲಿ ಒಟ್ಟು 32 ಕಿರಿಯ ಸಹಾಯಕ ಹುದ್ದೆಗಳು ಖಾಲಿ ಇದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಜನವರಿ 16, 2025ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ ಜೂನಿಯರ್ ಅಸಿಸ್ಟೆಂಟ್ ಖಾಲಿಯಿದ್ದು, ಉದ್ಯೋಗ ಸ್ಥಳ ಕೊಡಗು ಆಗಿದೆ. ವೇತನ ಮಾಸಿಕ 30,350ರಿಂದ 58,250ಗಳವರೆಗೆ ಇದೆ.

ಶೈಕ್ಷಣಿಕ ಅರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಶೇ 55ರಷ್ಟು ಕನಿಷ್ಠ ಅಂಕದೊಂದಿಗೆ ವಾಣಿಜ್ಯೇತರ ಪದವಿ ಅಥವಾ ಶೇ 50 ಕನಿಷ್ಠ ಅಂಕದೊಂದಿಗೆ ವಾಣಿಜ್ಯ ಪದವಿ, ಡಿಪ್ಲೊಮೋ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಕನಿಷ್ಠ 6 ತಿಂಗಳ ಡಿಪ್ಲೊಮೋ ಇನ್ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ಸ್ ಸರ್ಟಿಫಿಕೇಟ್ ಕೋರ್ಸ್ ಕಡ್ಡಾಯವಾಗಿ ಮಾಡಿರಬೇಕು.
ವಯೋಮಿತಿ ಹಾಗೂ ಆಯ್ಕೆ ವಿಧಾನ
ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳ ಗರಿಷ್ಠ ವಯಸ್ಸು 38 ವರ್ಷ ಹಾಗೂ ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ದಾಟಿರಬಾರದು.
ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಸಾಮಾನ್ಯ ವರ್ಗ ಹಾಗೂ ಇತರೆ ಹಿಂದುಳಿದ ಅಭ್ಯರ್ಥಿಗಳು ರೂ. 1750 ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ 1, ಮಹಿಳೆಯರು, ಅಂಗವಿಕಲ ಅಭ್ಯರ್ಥಿಗಳಿಗೆ ರೂ. 1250 ಶುಲ್ಕವಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಅಗತ್ಯವಿರುವ ದಾಖಲೆಗಳು ಇದೆಯೇ ಎಂದು ಪರಿಶೀಲಿಸಿಕೊಳ್ಳಿ. ಆ ಬಳಿಕ ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ಗೆ ಲಿಂಕ್ ಮೇಲೆ ಕ್ಲಿಕ್ ಮಾಡಿ, ಆ ವೇಳೆ ಅಪ್ಲಿಕೇಷನ್ ತೆರೆದುಕೊಳ್ಳುತ್ತದೆ. ಈ ಅಪ್ಲಿಕೇಷನ್‌ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ, ಒಮ್ಮೆ ಪರಿಶೀಲಿಸಿ.
ತದನಂತರದಲ್ಲಿ ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ. ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಿದರೆ ಅರ್ಜಿ ಸಲ್ಲಿಕೆಯೂ ಪೂರ್ಣಗೊಳ್ಳುತ್ತದೆ. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ- ಡಿಸೆಂಬರ್ 20, 2024. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 16, 2025. ಶುಲ್ಕ ಪಾವತಿಸಲು ಕೊನೆಯ ದಿನಾಂಕ- ಜನವರಿ 17, 2025.












Click it and Unblock the Notifications