ಜೆಎನ್‌ಯುನಲ್ಲಿ ಕನ್ನಡ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಆಗಸ್ಟ್ 03 : ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಅಧ್ಯಯನ ಪೀಠದ ಪ್ರಾಧ್ಯಾಪಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರಬೇಕು ಎಂದು ನೇಮಕಾತಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಭ್ಯರ್ಥಿಗಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಬಗ್ಗೆ ಆಳವಾದ ಜ್ಞಾನ ಹೊಂದಿರಬೇಕು. ಸಂಬಂಧಪಟ್ಟ ಕ್ಷೇತ್ರದಲ್ಲಿ ಪಿ. ಎಚ್. ಡಿ. ಹೊಂದಿರಬೇಕು. 65 ವರ್ಷ ಮೇಲ್ಪಟ್ಟವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ಇತರ ವಿಭಾಗಗಳ ಜೊತೆಗೆ ಸಂವಹನ ನಡೆಸಲು ಸಾಧ್ಯವಾಗುವಂತೆ ಇಂಗ್ಲಿಶ್ ಅಥವ ಹಿಂದಿ ಭಾಷೆಯ ಜ್ಞಾನ ಹೊಂದಿರಬೇಕು.
ಹೆಸರಾಂತ ಪ್ರಕಾಶನ ಸಂಸ್ಥೆಯ ಮೂಲಕ ಕೃತಿಗಳನ್ನು ಪ್ರಕಟಿಸಬೇಕು. ಸಂಶೋಧಕರಿಗೆ ಮಾರ್ಗದರ್ಶನ ನೀಡಿದ ಅನುಭವ ಹೊಂದಿರಬೇಕು ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಬೇಕು.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು [email protected] ವಿಳಾಸಕ್ಕೆ ಸ್ವವಿವರಗಳನ್ನು ಕಳುಹಿಸಬಹುದು ಎಂದು ತಿಳಿಸಲಾಗಿದೆ.
ಆಸಕ್ತರು ಅರ್ಜಿಗಳನ್ನು ಆಗಸ್ಟ್ 10ರೊಳಗೆ ಸಲ್ಲಿಸಬೇಕು.












Click it and Unblock the Notifications