10ನೇ ಕ್ಲಾಸ್ ಪಾಸಾದವರು ಕೆಎಸ್ಆರ್‌ಪಿ ನೇಮಕಾತಿಗೆ ಅರ್ಜಿ ಹಾಕಿ
ಬೆಂಗಳೂರು, ನವೆಂಬರ್ 28 : ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. 849 ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 18, 2017.
ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಕೆಎಸ್ಆರ್‌ಪಿ) 849 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ಅಭ್ಯರ್ಥಿಗಳಿಗೆ 25 ವರ್ಷ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 27 ವರ್ಷದ ವಯೋಮಿತಿ ನಿಗದಿ ಪಡಿಸಲಾಗಿದೆ. ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 30 ವರ್ಷಗಳು.
ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು 18/12/2017ಕ್ಕೆ ಹೊಂದಿರತಕ್ಕದ್ದು.
ಶುಲ್ಕದ ವಿವಾರ : ಸಾಮಾನ್ಯ ವರ್ಗ, ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 250 ರೂ., ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1 ಮತ್ತು ಬುಡುಕಟ್ಟು ಜನಾಂಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ನಿಗದಿ ಮಾಡಲಾಗಿದೆ.

ಪ್ರಮುಖ ದಿನಾಂಕಗಳು
* ದಿನಾಂಕ 27/11/2017 ರಿಂದ ಅರ್ಜಿಗಳನ್ನು ಸಲ್ಲಿಸಬಹುದು
* ದಿನಾಂಕ 18/12/2017 ಸಂಜೆ 6 ಗಂಟೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ
* ದಿನಾಂಕ 20/12/2017ರ ತನಕ ಅರ್ಜಿ ಶುಲ್ಕ ಪಾವತಿ ಮಾಡಬಹುದು
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ












Click it and Unblock the Notifications