ಕಾನೂನು ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ನವೆಂಬರ್ 05 : ಕರ್ನಾಟಕದ ಮಾಹಿತಿ ಆಯೋಗದಲ್ಲಿ ಖಾಲಿ ಇರುವ ಕಾನೂನು ಸಹಾಯಕರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು ನಾಲ್ಕು ಹುದ್ದೆಗಳಿದ್ದು ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 7, 2015.
ಮಾಹಿತಿ ಆಯೋಗದ ಪ್ರಸ್ತಾವನೆಯನ್ನು ಪರಿಗಣಿಸಿ ಸರ್ಕಾರ ಕಾನೂನು ಸಹಾಯಕರ (law assistants) ವೇತನವನ್ನು 8000 ಸಾವಿರದಿಂದ 15,000 ರೂ.ಗಳಿಗೆ ಹೆಚ್ಚಿಸಿದೆ. ಕೆಲಸದ ಅವಧಿ ಎರಡು ವರ್ಷಗಳಾಗಿರುತ್ತದೆ. ಆಯುಕ್ತರ ಇಚ್ಛೆ ಮೇರೆಗೆ ವಿಸ್ತರಿಸಲಾಗುವುದು. [ಮಾಹಿತಿ ಆಯೋಗದ ವೆಬ್ ಸೈಟ್]

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಧಿಕೃತ ಕಾನೂನು ಪದವಿಯನ್ನು ಹೊಂದಿರತಕ್ಕದ್ದು. ಅರ್ಹತೆ ಇಲ್ಲದ ಅಭ್ಯರ್ಥಿಗಳನ್ನು ಯಾವುದೇ ಸೂಚನೆ ನೀಡದೆ ತಿರಸ್ಕಾರ ಮಾಡಲಾಗುತ್ತದೆ. [ನೇಮಕಾತಿ ಆದೇಶ ಓದಿ]
ಅರ್ಜಿ ಸಲ್ಲಿಸಲು ಯಾವುದೇ ನಿಗದಿತ ಅರ್ಜಿ ನಮೂನೆ ಇರುವುದಿಲ್ಲ. ಅಭ್ಯರ್ಥಿಗಳು ಹುಟ್ಟಿದ ದಿನಾಂಕ, ಶೈಕ್ಷಣಿಕ ದಾಖಲೆಗಳು, ಇತರೆ ಅರ್ಹತೆಗಳನ್ನು ಹೊಂದಿದ್ದಲ್ಲಿ ಸ್ವಯಂ ದೃಢಿಕೃತ ಪ್ರತಿಗಳೊಂದಿಗೆ ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಸಲ್ಲಿಸಬೇಕು.
ಅಭ್ಯರ್ಥಿಗಳು ಅರ್ಜಿಗಳನ್ನು ನವೆಂಬರ್ 7ರ ಸಂಜೆ 4 ಗಂಟೆಯೊಳಗೆ ಅಧೀನ ಕಾರ್ಯದರ್ಶಿಗಳು, ಕರ್ನಾಟಕ ಮಾಹಿತಿ ಆಯೋಗ ಅವರಿಗೆ ಅರ್ಜಿಗಳನ್ನು ಸಲ್ಲಿಸಬೇಕು. ಸಂದರ್ಶನದ ದಿನಾಂಕವನ್ನು ನಂತರ ಪ್ರಕಟಿಸಲಾಗುತ್ತದೆ.












Click it and Unblock the Notifications