ಕಲಬುರಗಿಯಲ್ಲಿ ಕೆಲಸ ಖಾಲಿ ಇದೆ; ನ. 30ರೊಳಗೆ ಅರ್ಜಿ ಹಾಕಿ

ಕಲಬುರಗಿ, ಸೆಪ್ಟೆಂಬರ್ 30 : ಸಮಾಜ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿನಲ್ಲಿ ಎರಡು ವರ್ಷಗಳ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿ ಪಡೆಯಲು ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾನೂನು ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಸಕ್ತರು ನವೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿಗಳನ್ನು ಸಲ್ಲಿಸುವವರು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿರಬೇಕು. ವಾರ್ಷಿಕ ಆದಾಯ 2.50 ಲಕ್ಷ ರೂ. ಮೀರಿರಬಾರದು. ಬಾರ್ ಕೌನ್ಸಿಲ್‍ನಲ್ಲಿ ನೋಂದಣಿಯಾಗಿರಬೇಕು.

Apply For Lawyer Practice Post At Kalaburagi

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 40 ವರ್ಷ ಮೀರಿರಬಾರದು. ಹಿರಿಯ ನ್ಯಾಯವಾದಿಗಳ ಬಳಿ ತರಬೇತಿಗೆ ನಿಯೋಜನೆಗೊಂಡಿರಬೇಕು. ಜಾತಿ ಹಾಗೂ ಆದಾಯ ಪ್ರಮಾಣಪತ್ರವನ್ನು ತಹಶೀಲ್ದಾರರಿಂದ ದೃಢೀಕರಿಸಿ ಲಗತ್ತಿಸಬೇಕು.

ಆಯ್ಕೆಯಾದ ಕಾನೂನು ಪದವೀಧರರಿಗೆ 10,000 ರೂ.ಗಳ ಮಾಸಿಕ ತರಬೇತಿ ಭತ್ಯೆ ನೀಡಲಾಗುತ್ತದೆ. ಆನ್‍ಲೈನ್ ಮೂಲಕ ಸಲ್ಲಿಸಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ 2020ರ ನವೆಂಬರ್ 27 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ. ಇಲಾಖೆಯ www.sw.kar.nic.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಅವಶ್ಯಕ ದಾಖಲಾತಿಗಳೊಂದಿಗೆ 2020ರ ನವೆಂಬರ್ 30 ರೊಳಗಾಗಿ ಅರ್ಜಿ ಸಲ್ಲಿಸುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+