ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಾವಣಗೆರೆ; ಬೋಧಕರ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

|
Google Oneindia Kannada News

ದಾವಣಗೆರೆ, ಜೂನ್‌ 30; ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಅರೆ ವೈದ್ಯಕೀಯ ವಿಜ್ಞಾನ ಶಿಕ್ಷಣ ಸಂಸ್ಥೆಯಲ್ಲಿ ಬೋಧಕೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಜುಲೈ 15 ಕೊನೆಯ ದಿನವಾಗಿದೆ.

ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಖಾಲಿ ಇರುವ ಒಂದು ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನ 20,000 ರೂ. ನೀಡಲಾಗುತ್ತದೆ. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ (ಒಂದು ವರ್ಷದ ಅವಧಿಗೆ) ಭರ್ತಿ ಮಾಡಲಾಗುತ್ತಿದೆ.

ಎಸ್‌ಬಿಐ ನೇಮಕಾತಿ; ಬೆಂಗಳೂರಲ್ಲಿ 23 ಹುದ್ದೆಗೆ ಅರ್ಜಿ ಹಾಕಿ ಎಸ್‌ಬಿಐ ನೇಮಕಾತಿ; ಬೆಂಗಳೂರಲ್ಲಿ 23 ಹುದ್ದೆಗೆ ಅರ್ಜಿ ಹಾಕಿ

ಪ್ಯಾರಾಮೆಡಿಕಲ್ ಬೋಧಕರ ಹುದ್ದೆಗೆ ಎಂ. ಎಸ್. ಸಿ. ನರ್ಸಿಂಗ್ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಕಮ್ಯೂನಿಟಿ ಹೆಲ್ತ್ ನರ್ಸಿಂಗ್ ಅಥವಾ ಮೆಡಿಕಲ್ ಸರ್ಜಿಕಲ್ ನರ್ಸಿಂಗ್ ವಿಷಯಗಳಲ್ಲಿ ಎಂ. ಎಸ್. ಸಿ. ನರ್ಸಿಂಗ್ ಉತ್ತೀರ್ಣರಾಗಿರುವ ಹಾಗೂ ಬೋಧನೆಯ ಅನುಭವವುಳ್ಳ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

 ಬೆಂಗಳೂರಿನ ಐಕಿಯಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಬೆಂಗಳೂರಿನ ಐಕಿಯಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Apply For Lecturer Post At Davanagere Paramedical College At Davangere

ಅಭ್ಯರ್ಥಿಗಳು ಕೆ. ಎಂ. ಸಿ. ನೋಂದಣಿ ಹೊಂದಿರಬೇಕು. ಆಸಕ್ತರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಜುಲೈ 15ರ ಸಂಜೆ 4. 30 ಕೊನೆಯ ದಿನವಾಗಿದೆ. ಅರ್ಜಿಯೊಂದಿಗೆ ವಿದ್ಯಾರ್ಹತೆ ಮತ್ತು ಅನುಭವದ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು.

ಎಸ್‌ಬಿಐ ನೇಮಕಾತಿ; ಬೆಂಗಳೂರಲ್ಲಿ 23 ಹುದ್ದೆಗೆ ಅರ್ಜಿ ಹಾಕಿ ಎಸ್‌ಬಿಐ ನೇಮಕಾತಿ; ಬೆಂಗಳೂರಲ್ಲಿ 23 ಹುದ್ದೆಗೆ ಅರ್ಜಿ ಹಾಕಿ

ನೋಂದಣಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ನಕಲು ಪ್ರತಿ ಹಾಗೂ ಇತ್ತೀಚಿನ ಪಾಸ್‍ಪೋರ್ಟ್‌ ಅಳತೆಯ 2 ಭಾವಚಿತ್ರಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ಚಿಗಟೇರಿ ಜಿಲ್ಲಾ ಆಸ್ಪತ್ರೆ, ದಾವಣಗೆರೆಯ ಕಛೇರಿ ಕೊಠಡಿ ಸಂಖ್ಯೆ 119ರಲ್ಲಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಕೋ-ಆರ್ಡಿನೇಟರ್‌ ಅವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 8660146081/ 9964029562.

ವಿವಿಧ ತರಬೇತಿಗೆ ಅರ್ಜಿ ಆಹ್ವಾನ; ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ (ರಿ), ಹಳಿಯಾಳದ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ 13 ದಿನಗಳ ಸಿಸಿಟಿವಿ ಕ್ಯಾಮರಾ ಇನಸ್ಟಾಲೇಷನ್ ಮತ್ತು ಸರ್ವೀಸಿಂಗ್ ಹಾಗೂ 30 ದಿನಗಳ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ತರಬೇತಿ. ಮಹಿಳೆಯರಿಗಾಗಿ ಹೊಲಿಗೆ ತರಬೇತಿ ಮತ್ತು ಕಂಪ್ಯೂಟರ್ ಟ್ಯಾಲಿ ಉಚಿತ ತರಬೇತಿಗಳನ್ನು ನೀಡಲಾಗುತ್ತಿದೆ.

ಈ ತರಬೇತಿಗಳನ್ನು ಪಡೆಯಲು 18 ರಿಂದ 45 ವರ್ಷದ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ ಇತ್ಯಾದಿ ವಿವರಗಳನ್ನು ಒಳಗೊಂಡ ಅರ್ಜಿಯನ್ನು ಜುಲೈ 4ರೊಳಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬೇಕು.

ತರಬೇತಿಯು ಜುಲೈ ತಿಂಗಳಲ್ಲಿ ಪ್ರಾರಂಭವಾಗುತ್ತಿದ್ದು ಊಟ, ವಸತಿ ಉಚಿತವಾಗಿರುತ್ತದೆ. ತರಬೇತಿ ಅವಧಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್, ಯೋಗ ತರಬೇತಿ, ಬ್ಯಾಂಕಿಂಗ್, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗೆಗಿನ ಮಾಹಿತಿ ನೀಡಲಾಗುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08284-295307/ 220807, ಮೊಬೈಲ್ ಸಂಖ್ಯೆ 9483485489, 9482188780, 9632225123, 8197022501ಗೆ ಸಂಪರ್ಕಿಸಬಹುದು.

ಉದ್ಯಮಶೀಲತಾ ತರಬೇತಿಗೆ ಅರ್ಜಿ ಹಾಕಿ; ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 300 ಮಹಿಳಾ ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಬೆಂಗಳೂರಿನ ಐ.ಐ.ಎಂ.ನಲ್ಲಿ ಉಚಿತ ಉದ್ಯಮಶೀಲತಾ ತರಬೇತಿ ನೀಡಲಾಗುತ್ತದೆ.

ಆಸಕ್ತರು ತರಬೇತಿಯನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ www.sw.kar.nic.in ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿಗಳನ್ನು ಸಲ್ಲಿಸಲು ಜುಲೈ 18 ಕೊನೆಯ ದಿನವಾಗಿದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 94822300400 ಹಾಗೂ ಇಲಾಖೆಯ ವೆಬ್ ಸೈಟ್ www.sw.kar.nic.in ಭೇಟಿ ನೀಡಬಹುದಾಗಿದೆ.

Recommended Video

Virat Kohli ಶತಕದ ಬದ್ಲು ನಮ್ಗೆ ಬೇಕಾಗಿರೋದು ಇದು...ರಾಹುಲ್ ದ್ರಾವಿಡ್ ಶಾಕಿಂಗ್ ಹೇಳಿಕೆ | *Cricket |OneIndia

English summary
Applications invited for the lecturer post at paramedical college in Davangere. Apply till July 15, 2023.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X