ದಾವಣಗೆರೆ: ಕೆಲಸ ಖಾಲಿ ಇದೆ, ಹುದ್ದೆಗಳ ವಿವರ
ದಾವಣಗೆರೆ, ಜೂನ್ 30: ದಾವಣಗೆರೆಯಲ್ಲಿ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ, ಜಲ ಜೀವನ್ ಮಿಷನ್ ಎಂಐಎಸ್ ಸಮಾಲೋಚಕರ ಹುದ್ದೆಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲಾ ವ್ಯಾಪ್ತಿಯಲ್ಲಿ 206 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಪ್ರಸ್ತುತ ಖಾಲಿ ಇರುವ 16 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ಅರ್ಜಿಗಳನ್ನು ಕರೆಯಲಾಗಿದೆ.

ಆಸಕ್ತರು ಜೂನ್ 29 ರಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಿದ ಬಳಿಕ ಜುಲೈ 20ರೊಳಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜಿಲ್ಲಾ ಪಂಚಾಯತ್ ಕಚೇರಿ, ಆಡಳಿತ ವಿಭಾಗದ ಕೊಠಡಿ ಸಂಖ್ಯೆ 25ಕ್ಕೆ ಸ್ವೀಕೃತಿ ಪ್ರತಿಯೊಂದಿಗೆ ಸಲ್ಲಿಕೆ ಮಾಡಬೇಕು.
ಆಸಕ್ತ ಅಭ್ಯರ್ಥಿಗಳು ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ವೆಬ್‍ಸೈಟ್ davanagere.nic.in ಮೂಲಕ ಅರ್ಜಿ ಸಲ್ಲಿಸಿ ನಂತರ ಸ್ವೀಕೃತಿ ಪತ್ರದ ಪ್ರತಿಯೊಂದಿಗೆ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 08192-226655 ಸಂಖ್ಯೆಗೆ ಕರೆ ಮಾಡಬಹುದು.
ಖಾಲಿ ಇರುವ ಹುದ್ದೆಗಳು; ರಾಜಗೊಂಡನಹಳ್ಳಿ , ಬೇತೂರು, ಕೊಂಡಜ್ಜಿ, ಹೆಬ್ಬಾಳು , ಕಬ್ಬಳ, ಉಕ್ಕಡಗಾತ್ರಿ, ಹಳೆಬಾತಿ, ಪಾಂಡೋಮಟ್ಟಿ, ಕಂದನಕೋವಿ, ಕಕ್ಕರಗೊಳ್ಳ, ಬನ್ನಿಕೋಡು, ವಡೆಯರಹತ್ತೂರು, ಓಬನ್ನನಹಳ್ಳಿ (ನರಗನಹಳ್ಳಿ), ದೊಡ್ಡಬ್ಬಿಹೆರೆ, ಅಣಜಿ, ಗುಡಾಳು.
ಎಂಐಎಸ್ ಸಮಾಲೋಚಕರ ಹುದ್ದೆ: ದಾವಣಗೆರೆ ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಖಾಲಿ ಇರುವ ಜಿಲ್ಲಾ ಎಂಐಎಸ್, ಎಂಐಎಸ್ ಸಮಾಲೋಚಕರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಎಂ.ಸಿ.ಎ, ಎಂ.ಎಸ್ಸಿ ಕಂಪ್ಯೂಟರ್ ಸೈನ್ಸ್, ಬಿ.ಇ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಡೇಟಾ ನಿರ್ವಹಣೆಯಲ್ಲಿ 3-5 ವರ್ಷಗಳ ಅನುಭವ ಹೊಂದಿರಬೇಕು.
ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಲು ಜುಲೈ 5 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರ್ಯ ನಿರ್ವಾಹಕ ಇಂಜಿನಿಯರ್ ದಾವಣಗೆರೆ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ.
ವೃತ್ತಿಯ ತರಬೇತಿಗೆ ಅರ್ಜಿ ಆಹ್ವಾನ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ 2 ವರ್ಷಗಳ ತರಬೇತಿಗಾಗಿ ಪರಿಶಿಷ್ಟ ಜಾತಿಯ ಅರ್ಹ ಕಾನೂನು ಪದವೀಧರರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲೆಯವರಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಕಾನೂನು ಪದವಿ ಪಡೆದು 2 ವರ್ಷಗಳ ಒಳಗಿರಬೇಕು. ಆಯ್ಕೆಯಾದವರಿಗೆ ಪ್ರತಿ ಮಾಸಿಕ 10 ಸಾವಿರ ರೂ.ಗಳ ಶಿಷ್ಯವೇತನ ನೀಡಲಾಗುವುದು.
ಆಸಕ್ತರು ಇಲಾಖೆಯ ವೆಬ್‍ಸೈಟ್ www.sw.kar.nic.in ಮೂಲಕ ಜುಲೈ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೃಥ್ವಿ ಮ್ಯಾನ್ಷನ್, ವಿನೋಬನಗರ, 100 ಅಡಿರಸ್ತೆ, ಶಿವಮೊಗ್ಗ ಇಲ್ಲಿಗೆ ಖುದ್ದಾಗಿ ಭೇಟಿ ನೀಡಿ ಅಥವಾ 08182-249241 ಸಂಖ್ಯೆಗೆ ಕರೆ ಮಾಡಿ.












Click it and Unblock the Notifications