ಉಡುಪಿಯಲ್ಲಿ ಕೆಲಸ ಖಾಲಿ ಇದೆ, ತಕ್ಷಣ ಅರ್ಜಿ ಹಾಕಿ
ಉಡುಪಿ, ಮೇ 19; ಉಡುಪಿ ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವವರಿಗೆ ಸಿಹಿಸುದ್ದಿ. ಉಪ ಯೋಜನಾ ನಿರ್ದೇಶಕ ಮತ್ತು ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ತಕ್ಷಣ ಅರ್ಜಿ ಹಾಕಬಹುದು.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಪಂಚಾಯಿತಿ ವ್ಯಾಪ್ತಿಯ ಉಳ್ಳೂರು, ಗುಲ್ವಾಡಿ ಹಾಗೂ ಯಡಮೊಗೆ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ ತಲಾ 1 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಜೂನ್ 1 ಕೊನೆಯ ದಿನವಾಗಿದೆ. ಅರ್ಜಿ ನಮೂನೆ, ಮೀಸಲಾತಿ ವಿವರ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯತಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ಉಪ ಯೋಜನಾ ನಿರ್ದೇಶಕ ಹುದ್ದೆ; ಉಡುಪಿ ಜಿಲ್ಲೆಯಲ್ಲಿ ಕೃಷಿ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಆತ್ಮ ಯೋಜನೆಯಡಿ ಉಪ ಯೋಜನಾ ನಿರ್ದೇಶಕರು - 1 ಹುದ್ದೆಯನ್ನು ನೇರವಾಗಿ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲಾಗುತ್ತಿದೆ.

ಅರ್ಜಿಗಳನ್ನು ಸಲ್ಲಿಕೆ ಮಾಡುವವರು ಕೃಷಿ ಹಾಗೂ ಕೃಷಿ ಸಂಬಂಧಿತ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಅನುಭವ ಹೊಂದಿರಬೇಕು. ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ ಸಿ-304, ರಜತಾದ್ರಿ, ಮಣಿಪಾಲ, ಉಡುಪಿ ಇವರನ್ನು ಸಂಪರ್ಕಿಸಬಹುದಾಗಿದೆ.
ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ; ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2023ರ ಜೂನ್ 1 ರಿಂದ 2024 ರ ಮಾರ್ಚ್ 30ರ ವರೆಗೆ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ ಅಥವ ತೋಟಗಾರಿಕೆ ಉಪನಿರ್ದೇಶಕರು ಉಡುಪಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.












Click it and Unblock the Notifications