ಬಳ್ಳಾರಿ; ಗ್ರಂಥಾಲಯ ಮೇಲ್ವಿಚಾರಕರ ಹುದ್ದೆ ಖಾಲಿ
ಬಳ್ಳಾರಿ, ಫೆಬ್ರವರಿ 12: ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 15 ಕೊನೆಯ ದಿನವಾಗಿದೆ.
ಬಳ್ಳಾರಿ ಜಿಲ್ಲಾ ಕೇಂದ್ರ ಗ್ರಂಥಾಲಯದ ವ್ಯಾಪ್ತಿಯಲ್ಲಿ ಬರುವ ಬಳ್ಳಾರಿ, ಸಿರುಗುಪ್ಪ, ಕೂಡ್ಲಿಗಿ ಮತ್ತು ಹಗರಿಬೊಮ್ಮನಹಳ್ಳಿ ತಾಲೂಕಿನ ಒಟ್ಟು 6 ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಖಾಲಿಯಿರುವ ಮೇಲ್ವಿಚಾರಕರ ಹುದ್ದೆ ಭರ್ತಿ ಮಾಡಲಾಗುತ್ತಿದೆ.
ನೇಮಕಾತಿಯನ್ನು ಗೌರವ ಸಂಭಾವನೆ ಆಧಾರದ ಮೇರೆಗೆ ಮಾಡಿಕೊಳ್ಳಲಾಗುತ್ತದೆ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣಗೊಂಡಿರಬೇಕು, ಸ್ಥಳೀಯ ಗ್ರಾಮ ಪಂಚಾಯಿತಿಗೆ ಸೇರಿರಬೇಕು.

ಮೀಸಲಾತಿ; ಹಗರಿಬೊಮ್ಮನಹಳ್ಳಿಯ ಬಾಚಿಗೊಂಡನಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಂಥಾಲಯಕ್ಕೆ ಅಂಗವಿಕಲ/ ವಿಕಲಚೇತನ ಹೊಂದಿರುವ ಸಾಮಾನ್ಯ ಅಭ್ಯರ್ಥಿ. ಕೂಡ್ಲಿಗಿ ಬಡೇಲಡಕು ಗ್ರಾಪಂ ವ್ಯಾಪ್ತಿಯ ಗ್ರಂಥಾಲಯಕ್ಕೆ ಪ್ರ. ವರ್ಗ-1 (ಇತರೆ), ಸಿರುಗುಪ್ಪದ ಹಳೇಕೋಟೆ ಗ್ರಾಪಂ ವ್ಯಾಪ್ತಿಯ ಗ್ರಂಥಾಲಕ್ಕೆ ಸಾಮಾನ್ಯ ಅಭ್ಯರ್ಥಿ (ಮಾಜಿ ಸೈನಿಕ) ಮೀಸಲಾತಿ ನಿಗದಿ ಮಾಡಲಾಗಿದೆ.
ಕೂಡ್ಲಿಗಿ ಹಾರಕಭಾವಿ ಗ್ರಂಥಾಲಯಕ್ಕೆ ಪರಿಶಿಷ್ಟ ಜಾತಿಯ (ಗ್ರಾಮೀಣ) ಅಭ್ಯರ್ಥಿ. ಹುರುಳಿಹಾಳ್ ಗ್ರಾಪಂ ವ್ಯಾಪ್ತಿಯ ಗ್ರಂಥಾಲಯಕ್ಕೆ ಸಾಮಾನ್ಯ ಅಭ್ಯರ್ಥಿ (ಇತರೆ) ಹಾಗೂ ಬಳ್ಳಾರಿಯ ಯರಗುಡಿ ಗ್ರಾಪಂ ವ್ಯಾಪ್ತಿಯ ಗ್ರಂಥಾಲಯಕ್ಕೆ 3ಬಿ (ಇತರೆ) ಅಭ್ಯರ್ಥಿ ಮೀಸಲಾಗಿ ನಿಗದಿಯಾಗಿದೆ.
ನಿಗದಿ ಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ವಯಸ್ಕರ ಶಿಕ್ಷಣದಡಿ ನಡೆಯುತ್ತಿರುವ ಮುಂದುವರಿಕೆ ಕಲಿಕಾ ಕೇಂದ್ರಗಳ ಪ್ರೇರಕ/ ಉಪಪ್ರೇರಕರು ಸಹ ಅರ್ಜಿ ಸಲ್ಲಿಸಬಹುದಾಗಿದೆ.
ಆದರೆ, ಅವರು ಮೇಲ್ವಿಚಾರಕರಾಗಿ ನೇಮಕಗೊಂಡ ನಂತರ ಪ್ರೇರಕ/ ಉಪಪ್ರೇರಕ ಹುದ್ದೆಗೆ ರಾಜೀನಾಮೆ ನೀಡಬೇಕು ಹಾಗೂ ಬಿಡುಗಡೆ ಪತ್ರವನ್ನು ಸಂಬಂಧಿಸಿದ ಇಲಾಖೆಯಿಂದ ಪಡೆದು ಆಯಾ ಕಚೇರಿಗೆ ಸಲ್ಲಿಸಬೇಕು. ಪ್ರೇರಕ/ ಉಪಪ್ರೇರಕರಿಗೆ ಮೀಸಲಾತಿ ಅನ್ವಯಿಸುತ್ತದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಯು 18 ವರ್ಷವನ್ನು ಪೂರೈಸಿರಬೇಕು. ಸಾಮಾನ್ಯ ಅಭ್ಯರ್ಥಿ 33 ವರ್ಷ, 2ಎ/ 2ಬಿ/ 3ಎ/ 3ಬಿ 36, ಪ.ಜಾತಿ/ ಪ. ಪಂಗಡ/ ಪ್ರ.ವರ್ಗ-1 ರ ಅಭ್ಯರ್ಥಿಗೆ 38 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಸ್ಥಳೀಯ ನಿವಾಸಿ ದೃಡೀಕರಣ ಪತ್ರ, ಅಂಗವಿಕಲತೆ ಇದ್ದಲ್ಲಿ ದೃಢೀಕರಣ ಪತ್ರ ಹಾಗೂ ಇತರೆ ದಾಖಲಾತಿಗಳನ್ನು ಆಯಾ ತಾಲೂಕಿನ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ/ ಪಂಚಾಯತಿ ಕಾರ್ಯದರ್ಶಿಗಳಿಗೆ ಸಲ್ಲಿಸಬೇಕು
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕೇಂದ್ರ ಗ್ರಂಥಾಲಯ ಕಚೇರಿಯನ್ನು ಸಂಪರ್ಕಿಸಿ, ದೂರವಾಣಿ ಸಂಖ್ಯೆ 08392-276887.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications