ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಳ್ಳಾರಿ; ವಿವಿಧ ಹುದ್ದೆಗಳ ಭರ್ತಿ, ಆಸಕ್ತರು ಅರ್ಜಿ ಹಾಕಿ

|
Google Oneindia Kannada News

ಬಳ್ಳಾರಿ, ಜನವರಿ 13; ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಕೇಂದ್ರ ಗ್ರಂಥಾಲಯದ ವ್ಯಾಪ್ತಿಯಲ್ಲಿ ಬರುವ ವಿವಿಧ ತಾಲೂಕಿನ ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.

ಗೌರವ ಸಂಭಾವನೆ ಆಧಾರದ ಮೇಲೆ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಫೆಬ್ರವರಿ 15 ಕೊನೆಯ ದಿನವಾಗಿದೆ.

ಗ್ರಾಮ ಲೆಕ್ಕಿಗರ ನೇಮಕಾತಿ; ಆಕಾಂಕ್ಷಿಗಳಿಗೆ ಶೀಘ್ರದಲ್ಲೇ ಸಿಹಿಸುದ್ದಿಗ್ರಾಮ ಲೆಕ್ಕಿಗರ ನೇಮಕಾತಿ; ಆಕಾಂಕ್ಷಿಗಳಿಗೆ ಶೀಘ್ರದಲ್ಲೇ ಸಿಹಿಸುದ್ದಿ

ಬಳ್ಳಾರಿ ತಾಲೂಕಿನ ಸಿರಿವಾರ, ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯತಿ, ಹರಪನಹಳ್ಳಿ ತಾಲೂಕಿನ ಅರಸಿಕೆರೆ, ಹಗರಿಬೊಮ್ಮನಹಳ್ಳಿ ತಾಲೂಕಿನ ಬನ್ನಿಕಲ್ಲು, ಹಡಗಲಿ ತಾಲೂಕಿನ ಕಾಲ್ವಿ(ಪಶ್ಚಿಮ) ಹಾಗೂ ಕೂಡ್ಲಿಗಿ ತಾಲೂಕಿನ ಬಡೇಲಡಕುಗಳಲ್ಲಿ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ; ಜ. 31ರ ತನಕ ಅರ್ಜಿ ಹಾಕಿ ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ; ಜ. 31ರ ತನಕ ಅರ್ಜಿ ಹಾಕಿ

Apply For Library Supervisor Post At Ballari And Vijayanagara

ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಎಸ್.ಎಸ್.ಎಲ್. ಸಿ ಯಲ್ಲಿ ಉತ್ತೀರ್ಣರಾಗಿರಬೇಕು. ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರಬೇಕು. (ನಿವಾಸಿ ಧೃಡೀಕರಣ ಪತ್ರ ಲಗತ್ತಿಸಬೇಕು). ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಸಲ್ಲಿಸಬೇಕು. ನಿಗದಿ ಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ಜನವರಿ 14ರೊಳಗೆ ಅರ್ಜಿ ಹಾಕಿ ಕೊಪ್ಪಳದಲ್ಲಿ ಕೆಲಸ ಖಾಲಿ ಇದೆ; ಜನವರಿ 14ರೊಳಗೆ ಅರ್ಜಿ ಹಾಕಿ

ಭರ್ತಿ ಮಾಡಿದ ಸೂಕ್ತ ದಾಖಲಾತಿ (ಎಸ್. ಎಸ್. ಎಲ್. ಸಿ ಅಂಕಪಟ್ಟಿ, ಟಿಸಿ, ಜಾತಿ ಪ್ರಮಾಣ ಪತ್ರ, ಸ್ಥಳೀಯ ನಿವಾಸಿ ದೃಡೀಕರಣ ಪತ್ರ, ಅಂಗವಿಕಲತೆ ಇದ್ದಲ್ಲಿ ದೃಡೀಕರಣ ಪತ್ರ) ಇತ್ಯಾದಿಗಳೊಂದಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ ಅರ್ಜಿಗಳನ್ನು ಸಲ್ಲಿಸಬೇಕು.

ಅರ್ಜಿಗಳನ್ನು ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷವನ್ನು ಪೂರೈಸಿರಬೇಕು (ಸಾಮಾನ್ಯ ಅಭ್ಯರ್ಥಿ 33 ವರ್ಷ, 2ಎ/ 2ಬಿ/ 3ಎ/ 3ಬಿ 36 ವರ್ಷ, ಪ.ಜಾತಿ/ ಪ.ಪಂಗಡ/ ಪ್ರ.ವರ್ಗ-1 38 ವರ್ಷದ ಗರಿಷ್ಠ ವಯೋಮಿತಿ).

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದಿದ್ದರೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೇಂದ್ರ ಗ್ರಂಥಾಲಯ ಬಳ್ಳಾರಿ ಕಛೇರಿಗೆ ಸಂರ್ಪಕಿಸಬಹುದಾಗಿದೆ.

ಸಮುದಾಯ ಸಂಪನ್ಮೂಲ ಹುದ್ದೆ; ಹೊಸಪೇಟೆ ನಗರಸಭೆ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿ ದೀನ್‍ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಕಾರ್ಯ ನಿರ್ವಹಿಸಲು ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

ಗೌರವಧನ ಆಧಾರದ ಮೇಲೆ ತಾತ್ಕಾಲಿಕವಾಗಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಸ್ವ-ಸಹಾಯ (ಗುಂಪು)ಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಒಟ್ಟು ಹುದ್ದೆ 3. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನ 8000 ರೂ. ನೀಡಲಾಗುತ್ತದೆ. ಸಾರಿಗೆ ವೆಚ್ಚ 2000 ರೂ. ನೀಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಜನವರಿ 27 ಕೊನೆಯ ದಿನವಾಗಿದೆ.

ಅರ್ಜಿಗಳನ್ನು ಸಲ್ಲಿಕೆ ಮಾಡುವವರು ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ ನೀಡಲಾಗುತ್ತದೆ. ಕಂಪ್ಯೂಟರ್ ಜ್ಞಾನ ಹೊಂದಿರಬೇಕು (ಪ್ರಮಾಣ ಪತ್ರ ಹೊಂದಿರಬೇಕು), ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಖಾಯಂ ವಾಸವಿದ್ದು , ಕನಿಷ್ಟ 3 ವರ್ಷಗಳಿಂದ ಸ್ವ-ಸಹಾಯ ಸಂಘ (ಗುಂಪಿನಲ್ಲಿ) ಸದಸ್ಯಯಾಗಿರಬೇಕು.

ಆಂತರಿಕ ಸಾಲ ಪಡೆದು ಕಟುಬಾಕಿದಾರರಾಗಿರಬಾರದು, ಸರ್ಕಾರಿ/ ಅರೇ ಸಕಾರಿ/ ಎನ್ .ಜಿ .ಓ/ ಗಳಲ್ಲಿ ಉದ್ಯೋಗಸ್ಥರಾಗಿರಬಾರದು. ಉತ್ತಮ ಸಂವಹನ ಕೌಶಲ್ಯ ಜೊತೆಗೆ ಸಮುದಾಯ ಚಟುವಟಿಕೆ ತರಬೇತಿಗಳಲ್ಲಿ ಪಾಲ್ಗೊಳ್ಳುವ ಇಚ್ಚಾಶಕ್ತಿ ಹೊಂದಿರಬೇಕು. ಕಾರ್ಯ ನಿಮಿತ್ತ ಅಗತ್ಯವಿದ್ದಲ್ಲಿ ಹೊರ ಜಿಲ್ಲೆಗೆ ಸಂಚಾರಕ್ಕೆ ಸಿದ್ದರಿರಬೇಕು. ಅರ್ಜಿ ಸಲ್ಲಿಸುವವರಿಗೆ ವಯಸ್ಸು 18 ರಿಂದ 45 ವರ್ಷಗಳು.

ಹೊಸಪೇಟೆ ನಗರಸಭೆ ವ್ಯಾಪ್ತಿಯ ಗುಂಪಿನ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ, ಆಸಕ್ತ ಅರ್ಜಿದಾರರು ಕಛೇರಿಯ ಅವಧಿಯಲ್ಲಿ ಸಮುದಾಯ ಸಂಘಟನಾಧಿಕಾರಿ ಅವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.

Recommended Video

ಪ್ರೊ ಕಬ್ಬಡಿಯಲ್ಲಿ ಅಗ್ರ ಸ್ಥಾನಕ್ಕೆ ಏರಿದೆ ಈ ತಂಡ ! | Oneindia Kannada

English summary
Apply for library supervisor post at Ballari and Vijayanagara district. Candidates can apply till February 15, 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X