ಚಿತ್ರದುರ್ಗದಲ್ಲಿ ಕೆಲಸ ಖಾಲಿ ಇದೆ; ಜುಲೈ 4ರ ತನಕ ಅರ್ಜಿ ಹಾಕಿ

ಚಿತ್ರದುರ್ಗ, ಜೂನ್ 13: ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಯಲ್ಲಿ ‌ವಿವಿಧ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಬೆಂಗಳೂರು-ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶ ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 2022ರ ಜುಲೈ 4 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ :
ಸಂಸ್ಥೆಯ ಹೆಸರು: ಚಿತ್ರದುರ್ಗ ಗ್ರಾಮ ಪಂಚಾಯಿತಿ
ಹುದ್ದೆಗಳ ಸಂಖ್ಯೆ: ವಿವರ ನೀಡಿಲ್ಲ
ಉದ್ಯೋಗ ಸ್ಥಳ: ಚಿತ್ರದುರ್ಗ
ಹುದ್ದೆಯ ಹೆಸರು: ಗ್ರಂಥಾಲಯ ಮೇಲ್ವಿಚಾರಕರು
ವೇತನ: ರೂ.12000 ಪ್ರತಿ ತಿಂಗಳು

Apply For Library Supervisor post at Chitradurga Gram Panchayat

ಅರ್ಜಿ ಸಲ್ಲಿಸುವ ವಿಧಾನ : ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಪಿಡಿಒ/ ಪಂಚಾಯತ್ ಕಾರ್ಯದರ್ಶಿ, ಮುಖ್ಯ ಗ್ರಂಥಾಲಯ ಅಧಿಕಾರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಚಿತ್ರದುರ್ಗ, ಕರ್ನಾಟಕ ಇವರಿಗೆ 2022 ಜುಲೈ 4ರೊಳಗೆ ಕಳುಹಿಸಬೇಕಾಗುತ್ತದೆ.

ಅರ್ಹತಾ ವಿವರ : ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಎಸ್‌ಎಸ್‌ಎಲ್‌ಸಿ (SSLC) ಪೂರ್ಣಗೊಳಿಸಿರಬೇಕು.

ವಯೋಮಿತಿ: ಅಭ್ಯರ್ಥಿಯು ಕನಿಷ್ಟ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ. ಪ್ರವರ್ಗ 3ಎ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಹೊಂದಿಸಿಕೊಳ್ಳಿ.

ಹೆಚ್ಚಿನ ಮಾಹಿತಿಗಾತಿ ಈ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ chitradurga.nic.in. ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ. ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
ಕೊನೆಯದಾಗಿ ಅರ್ಜಿ ನಮೂನೆಯನ್ನು, ಪಿಡಿಒ/ ಪಂಚಾಯತ್ ಕಾರ್ಯದರ್ಶಿ, ಮುಖ್ಯ ಗ್ರಂಥಾಲಯ ಅಧಿಕಾರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಚಿತ್ರದುರ್ಗ, ಕರ್ನಾಟಕ. ಈ ವಿಳಾಸಕ್ಕೆ ಜುಲೈ 4ರೊಳಗೆ ಅಂಚೆ ಮೂಲಕ ಕಳುಹಿಸಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+