ಹೊಸಕೋಟೆ; ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಜುಲೈ 07; ಸಾರ್ವಜನಿಕ ಗ್ರಂಥಾಲಯ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಕರೆಯಲಾಗಿದೆ.
ಹೊಸಕೋಟೆ ತಾಲೂಕಿನ ವಾಗಟ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಗೌರವ ಸಂಭಾವನೆ ಆಧಾರದಲ್ಲಿ ತಾತ್ಕಾಲಿಕವಾಗಿ ಮೇಲ್ವಿಚಾರಕರ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಆಗಸ್ಟ್ 6ರ ತನಕ ಅರ್ಜಿ ಸಲ್ಲಿಸಬಹುದು.
ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವವರು ಕನಿಷ್ಠ ಎಸ್. ಎಸ್. ಎಲ್. ಸಿ. ವಿದ್ಯಾರ್ಹತೆ ಹೊಂದಿರಬೇಕು. ಹೊಸಕೋಟೆ ತಾಲ್ಲೂಕಿನ ವಾಗಟ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಸಾಮಾನ್ಯ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

ಅಭ್ಯರ್ಥಿಗಳು ವಾಗಟ ಗ್ರಾಮ ಪಂಚಾಯಿತಿ ಕಚೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ವಾಗಟ ಗ್ರಾಮ ಪಂಚಾಯಿತಿ ಕಚೇರಿಗೆ ಆಗಸ್ಟ್ 6ರ ತನಕ ಸಲ್ಲಿಕೆ ಮಾಡಬಹುದಾಗಿದೆ.
ಹುದ್ದೆಗಳ ನಿಬಂಧನೆ/ ಷರತ್ತುಗಳ ಪಟ್ಟಿಗಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಗ್ರಾಮಾಂತರ ಜಿಲ್ಲಾ ಕೇಂದ್ರ ಗ್ರಂಥಾಲಯ, 714, ನೆಲ ಮಹಡಿ, 5ನೇ ಮುಖ್ಯ ರಸ್ತೆ, 10ನೇ ಕ್ರಾಸ್, ಎಂ.ಸಿ. ಲೇಔಟ್, ವಿಜಯನಗರ, ಬೆಂಗಳೂರು-560040 ಇವರನ್ನು ಸಂಪರ್ಕಿಸಬಹುದು. ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23352460.
ಅತಿಥಿ ಉಪನ್ಯಾಸಕರ ಹುದ್ದೆ; ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಬಚ್ಚಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆ ಭರ್ತಿ ಮಾಡಲಾಗುತ್ತಿದೆ.
ಜೀವಶಾಸ್ತ್ರ ಹಾಗೂ ಇಂಗ್ಲೀಶ್ ವಿಷಯದ ಅತಿಥಿ ಉಪನ್ಯಾಸಕರ ಹುದ್ದೆ ತುಂಬಲಾಗುತ್ತಿದೆ. ಜೀವಶಾಸ್ತ್ರ ಉಪನ್ಯಾಸಕರ ಹುದ್ದೆಗೆ MSc in Botany ಅಥವಾ Zoology ಜೊತೆಗೆ B.Ed ಪದವಿ ಪಡೆದಿರಬೇಕು.
ಇಂಗ್ಲೀಷ್ ವಿಷಯದ ಉಪನ್ಯಾಸಕರ ಹುದ್ದೆಗೆ MA in English ಜೊತೆಗೆ B.Ed ಪದವಿಯ ವಿದ್ಯಾರ್ಹತೆ ಹೊಂದಿರಬೇಕು ಎಂದು ಪ್ರಕಟಣೆ ತಿಳಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿಯ ಜೊತೆ ಕರ್ನಾಟಕ ಸರ್ಕಾರದಿಂದ ನಿಗದಿಪಡಿಸಿದ ವೇತನ ನೀಡಲಾಗುತ್ತದೆ.
ಅರ್ಹ, ಆಸಕ್ತರು ತಮ್ಮ ಅರ್ಹತಾ ಮಾನದಂಡಗಳೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಬಚ್ಚಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರನ್ನು ಖುದ್ದಾಗಿ ಭೇಟಿ ಮಾಡಬಹುದು.

ಪ್ರಾಂಶುಪಾಲರ ಮೊಬೈಲ್ ಸಂಖ್ಯೆ 7259613001 ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ.
ಉದ್ಯಮ ಶೀಲತಾ ತರಬೇತಿ; ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ 300 ಮಹಿಳಾ ಪದವೀಧರರಿಗೆ ತರಬೇತಿ ನೀಡಲಾಗುತ್ತದೆ.
200 ಪರಿಶಿಷ್ಟ ಜಾತಿ, 100 ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಐಐಎಂ ಬೆಂಗಳೂರಿನಲ್ಲಿ ಉಚಿತ ಉದ್ಯಮಶೀಲತಾ ತರಬೇತಿ ನೀಡುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಆಸಕ್ತರ ಅಭ್ಯರ್ಥಿಗಳು ಜುಲೈ 18ರೊಳಗೆ ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ www.sw.kar.nic.in ಮೂಲಕ ಸಲ್ಲಿಸಬೇಕು. ಸಾಮಾನ್ಯ ಅರ್ಹತೆಗಳ ವಿವರ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಮೊಬೈಲ್ ಸಂಖ್ಯೆ 9482300400.
ಕಾರ್ಯಕರ್ತರ ಹುದ್ದೆಗೆ ಅರ್ಜಿ; ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗಾಗಿ ಗ್ರಾಮೀಣ ಹಾಗೂ ನಗರ ಪುನರ್ವಸತಿ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲದಲ್ಲಿ ಖಾಲಿ ಇರುವ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆ ಭರ್ತಿ ಮಾಡಲಾಗುತ್ತಿದೆ.
ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಗೆ ನಗರ ಪುನರ್ವಸತಿ ಕಾರ್ಯಕರ್ತರ 2 ಹುದ್ದೆ, ಹೊಸಕೋಟೆ ನಗರಸಭೆ ವ್ಯಾಪ್ತಿಗೆ ನಗರ ಪುನರ್ವಸತಿ ಕಾರ್ಯಕರ್ತರ 2 ಹುದ್ದೆ ಹಾಗೂ ನೆಲಮಂಗಲ ಅರೆಬೊಮ್ಮನಹಳ್ಳಿ ವ್ಯಾಪ್ತಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ 1 ಹುದ್ದೆ ಖಾಲಿ ಇದೆ. ಆಸಕ್ತರು ಜುಲೈ 25ರ ತನಕ ಅರ್ಜಿ ಸಲ್ಲಿಸಬಹುದು.
ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುವವರು ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರನ್ನು ಸಂಪರ್ಕಿಸಬಹುದಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications