ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರಗಿ; ಕೆಲಸ ಖಾಲಿ ಇದೆ, ಅರ್ಜಿ ಹಾಕಲು ಡಿ. 17 ಕೊನೆ ದಿನ

|
Google Oneindia Kannada News

ಕಲಬುರಗಿ, ನವೆಂಬರ್ 18 : ಕಲಬುರಗಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಲ್ಲಿ ಖಾಲಿಯಿರುವ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದದೆ. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಡಿಸೆಂಬರ್ 17 ಕೊನೆ ದಿನ.

ಸೇಡಂ ತಾಲೂಕಿನ ಇಟಕಲ್, ಮದನಾ ಮತ್ತು ಕೋಲಕುಂದಾ, ಅಫಜಲಪುರ ತಾಲೂಕಿನ ಕಲ್ಲೂರ ಮತ್ತು ಚೌಡಾಪುರ ಹಾಗೂ ಆಳಂದ ತಾಲೂಕಿನ ಸರಸಂಬಾ ಗ್ರಾಮ ಪಂಚಾಯಿತಿಗಳ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆ ಭರ್ತಿ ಮಾಡಲಾಗುತ್ತಿದೆ.

ಬೀದರ್‌ನಲ್ಲಿ ಕೆಲಸ ಖಾಲಿ ಇದೆ; ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಬೀದರ್‌ನಲ್ಲಿ ಕೆಲಸ ಖಾಲಿ ಇದೆ; ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸ್ಥಳೀಯ ಪಂಚಾಯಿತಿ ವ್ಯಾಪ್ತಿಗೆ ವ್ಯಾಪ್ತಿಗೊಳಪಟ್ಟಿರಬೇಕು. ಈ ಕುರಿತು ದೃಢೀಕರಣ ಪತ್ರವನ್ನು ಅರ್ಜಿಯ ಜೊತೆಗೆ ಸಲ್ಲಿಸಬೇಕು. ನಿಗದಿತ ಮೀಸಲಾತಿಗೊಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ಕೆಎಸ್ಆರ್‌ಟಿಸಿಯಿಂದ ಅನುಕಂಪ ಆಧಾರಿತ ನೇಮಕಾತಿ ಸ್ಥಗಿತ ಕೆಎಸ್ಆರ್‌ಟಿಸಿಯಿಂದ ಅನುಕಂಪ ಆಧಾರಿತ ನೇಮಕಾತಿ ಸ್ಥಗಿತ

Apply For Library Supervisor Post At Kalaburagi

ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದವರಿಗೆ ಆದ್ಯತೆ. ಆಯ್ಕೆಯಾದವರಿಗೆ ಪ್ರತಿ ತಿಂಗಳು 7000 ರೂ.ಗಳ ಗೌರವ ಸಂಭಾವನೆ ನೀಡಲಾಗುತ್ತದೆ.

ಬಿಎಂಆರ್‌ಸಿಎಲ್ ನೇಮಕಾತಿ ರದ್ದು; ಪರೀಕ್ಷಾ ಶುಲ್ಕ ವಾಪಸ್ ಬಿಎಂಆರ್‌ಸಿಎಲ್ ನೇಮಕಾತಿ ರದ್ದು; ಪರೀಕ್ಷಾ ಶುಲ್ಕ ವಾಪಸ್

ಆಸಕ್ತರು ಅರ್ಜಿಯನ್ನು ಕಲಬುರಗಿ ಮಿನಿವಿಧಾನ ಸೌಧದ ಮೂರನೇ ಮಹಡಿಯ ಕೊಠಡಿ ಸಂಖ್ಯೆ 26ರಲ್ಲಿನ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು.

ಮುಚ್ಚಿದ ಲಕೋಟೆಯಲ್ಲಿ ಅರ್ಜಿಗಳನ್ನು ಸಲ್ಲಿಸುವಾಗ ಅವಶ್ಯಕ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಲಗತ್ತಿಸಬೇಕು. ಆಯಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕಚೇರಿಗೆ ಡಿಸೆಂಬರ್ 17ರ ಸಂಜೆ 5.30ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08472-221069.

English summary
Apply for library supervisor post at Kalaburagi district. Candidates can submit applications till December 17, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X