ಬಳ್ಳಾರಿ; ಗ್ರಂಥಾಲಯ ಮೇಲ್ವಿಚಾರಕ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ, ಡಿಸೆಂಬರ್ 11; ಬಳ್ಳಾರಿಯಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 14ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕುರಗೋಡು ಪುರಸಭೆ ಯಲ್ಲಾಪುರದ 19ನೇ ವಾರ್ಡ್‍ನಲ್ಲಿ ನಿರ್ಮಿಸಿದ ಗ್ರಂಥಾಲಯ ನಿರ್ವಹಣೆಗೆ ಗೌರವಧನ ಆಧಾರದ ಮೇಲೆ ಒಬ್ಬ ಮೇಲ್ವಿಚಾರಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

ಕುರಗೋಡು ಪುರಸಭೆಯ ಮುಖ್ಯಾಧಿಕಾರಿ ವಿಜಯಲಕ್ಷ್ಮಿ ಈ ಕುರಿತು ಮಾಹಿತಿ ನೀಡಿದ್ದಾರೆ. ಗ್ರಂಥಾಲಯ ನಿರ್ವಹಣೆಯಲ್ಲಿ ಅನುಭವ ಹೊಂದಿದ, ಪದವಿ ಪೂರ್ಣಗೊಳಿಸಿರುವ ಸ್ಥಳೀಯ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗುದೆ.

Apply For Library Supervisor Post At Kuragodu Ballari

ಆಸಕ್ತರು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 14. ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ ಮತ್ತು ಪದವಿ ಪ್ರಮಾಣ ಪತ್ರ, ಜಾತಿ ಆದಾಯ ಪ್ರಮಾಣ ಪತ್ರ, ಇತ್ತೀಚಿನ ಪಾಸ್ ಫೋರ್ಟ್‌ ಅಳತೆಯ 2 ಭಾವಚಿತ್ರ, ಆಧಾರ್‌ ಕಾರ್ಡ್‌, ರೇಷನ್‍ ಕಾರ್ಡ್‌ ಜೆರಾಕ್ಸ್ ಪ್ರತಿ, ಬ್ಯಾಂಕ್‍ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಹಾಗೂ ಇತರೆ ದಾಖಲೆ ಸಲ್ಲಿಸಬೇಕು.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಚೇರಿಯನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆಗಳು 08392-263166.

ಡಿಸೆಂಬರ್ 12ರಂದು ಸಂದರ್ಶನ; ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ 12ರಂದು ಅಪ್ರೆಂಟಿಸ್ ನೇಮಕಾತಿಗಾಗಿ ಸಂದರ್ಶನ ಆಯೋಜನೆ ಮಾಡಲಾಗಿದೆ.

ಸೋಮವಾರ ಬೆಳಗ್ಗೆ 9ಕ್ಕೆ ಕ್ಯಾಂಪಸ್ ಸಂದರ್ಶನ ಆರಂಭವಾಗಲಿದೆ. ಪ್ರತಿಷ್ಠಿತ ಕಂಪನಿಗಳಲ್ಲಿ ಅಪ್ರೆಂಟಿಸ್ ನೇಮಕಾತಿಗಾಗಿ ಸಂದರ್ಶನ ನಡೆಯಲಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಗವಿಶಂಕರ್ ತಿಳಿಸಿದ್ದಾರೆ.

ಕ್ಯಾಂಪಸ್ ಸಂದರ್ಶನದಲ್ಲಿ ಟೋಯೋಟಾ, ಜಿ-ಟೆಕ್ನೋ, ಜಿಂದಾಲ್, ಶಾತವಾಹನ ಇಸ್ಪಾತ್ ಲಿ, ಹ್ಯಾಲಿಸ್ ಬ್ಲೂ ಹಾಗೂ ಇನ್ನಿತರ ಕಂಪನಿಗಳು ಪಾಲ್ಗೊಳ್ಳಲಿವೆ. ಫಿಟ್ಟರ್, ಟರ್ನರ್, ಎಲೆಕ್ಟ್ರಿಷಿಯನ್, ವೆಲ್ಡರ್, ಇ. ಎಂ, ಎಂ. ಎಂ. ವಿ, ಮೆಕ್ಯಾನಿಕ್ ಡೀಸಲ್ ವೃತ್ತಿಗಳ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ವಯೋಮಿತಿ 18 ರಿಂದ 26 ವರ್ಷಗಳು.

ಕ್ಯಾಂಪಸ್ ಸಂದರ್ಶನಕ್ಕೆ ಬರುವಾಗ ಎಸ್. ಎಸ್. ಎಲ್. ಸಿ ಅಂಕಪಟ್ಟಿ ಮತ್ತು ಐಟಿಐ ಅಂಕಪಟ್ಟಿ, ಎರಡು ಭಾವಚಿತ್ರ, ಆಧಾರ್ ಕಾರ್ಡನ ಪ್ರತಿ ಹಾಗೂ ಬಯೋಡೇಟಾ ತರಬೇಕು.

ಐಟಿಐ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರೂ ಕ್ಯಾಂಪಸ್ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9741183501 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+