ಮಡಿಕೇರಿಯಲ್ಲಿ ಕೆಲಸ ಖಾಲಿ ಇದೆ; ಮಾ.30ರೊಳಗೆ ಅರ್ಜಿ ಹಾಕಿ
ಮಡಿಕೇರಿ, ಮಾರ್ಚ್ 03; ಮಡಿಕೇರಿ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 30 ಕೊನೆಯ ದಿನವಾಗಿದೆ.
ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ ಮಡಿಕೇರಿ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗಳನ್ನು ಮಾಸಿಕ 7 ಸಾವಿರ ರೂ. ಗೌರವ ಸಂಭಾವನೆ ಆಧಾರದ ಮೇಲೆ ಭರ್ತಿ ಮಾಡುತ್ತಿದೆ.
ಈ ಹುದ್ದೆಗಳಿಗೆ ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಅಭ್ಯರ್ಥಿಗಳು ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಿಂದ ಮಾಹಿತಿ ಪಡೆಯಬಹುದಾಗಿದೆ.

ಮೀಸಲಾತಿ ವಿವರ; ವಿರಾಜಪೇಟೆ ತಾಲೂಕಿನ ಹೊಸೂರು ಅಮ್ಮತ್ತಿ ಗ್ರಾ. ಪಂ. ಗ್ರಂಥಾಲಯ ಸಾಮಾನ್ಯ ಅಭ್ಯರ್ಥಿ (ಮಾ.ಸೈ) ಮತ್ತು ಆಲೂರು ಸಿದ್ದಾಪುರ ಗ್ರಾ. ಪಂ. ಗ್ರಂಥಾಲಯ 2ಎ(ಸಾ. ಅ). ಸೋಮವಾರಪೇಟೆ ತಾಲೂಕು ಶಿರಂಗಾಲ ಗ್ರಾ. ಪಂ. ಗ್ರಂಥಾಲಯ ಸಾ. ಅ (ಸಾ. ಅ) ಮತ್ತು ಚೆಂಬೆ ಬೆಳ್ಳೂರು ಗ್ರಾ. ಪಂ. ಗ್ರಂಥಾಲಯ ಪ್ರವರ್ಗ-1(ಮಹಿಳಾ ಅಭ್ಯರ್ಥಿ).
ಅರ್ಜಿಯ ಜೊತೆಗೆ ವಿದ್ಯಾರ್ಹತೆ ಹಾಗೂ ಇತರೆ ದಾಖಲೆಗಳನ್ನು ದೃಡೀಕರಿಸಿದ ಪ್ರತಿಯನ್ನು ಲಗತ್ತಿಸಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಕಚೇರಿಗೆ ಸಲ್ಲಿಸುವುದು. ಅರ್ಜಿಗಳನ್ನು ಮಾರ್ಚ್ 30ರೊಳಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ಮುಖ್ಯ ಗ್ರಂಥಾಲಯಾಧಿಕಾರಿಯವರ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08272 225463.












Click it and Unblock the Notifications