ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗ; ಕೆಲಸ ಖಾಲಿ ಇದೆ, ಡಿ. 8ರೊಳಗೆ ಅರ್ಜಿ ಹಾಕಿ

|
Google Oneindia Kannada News

ಶಿವಮೊಗ್ಗ, ನವೆಂಬರ್ 10; ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 8 ಕೊನೆಯ ದಿನವಾಗಿದೆ.

ಗೌರವ ಸಂಭಾವನೆ ಆಧಾರದ ಮೇಲೆ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯಿತಿ ಸ್ಥಳೀಯ ನಿವಾಸಿಗಳಾಗಿರತಕ್ಕದ್ದು. ಕನಿಷ್ಟ ಎಸ್‍ಎಸ್‍ಎಲ್‍ಸಿ ಪಾಸಾಗಿರಬೇಕು ಮತ್ತು ಆಯಾ ಪಂಚಾಯಿತಿಗಳಿಗೆ ನಿಗದಿಪಡಿಸಿದ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2021: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2021: ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ

ತೀರ್ಥಹಳ್ಳಿ ತಾಲ್ಲೂಕು ಬಾಂಡ್ಯಕುಕ್ಕೆ (ಪರಿಶಿಷ್ಟ ಜಾತಿ ಗ್ರಾಮೀಣ ಅಭ್ಯರ್ಥಿ), ಹೊಸನಗರ ತಾಲ್ಲೂಕು ರಿಪ್ಪನಪೇಟೆ (ಸಾಮಾನ್ಯ ಅಭ್ಯರ್ಥಿ), ಭದ್ರಾವತಿ ತಾಲ್ಲೂಕು ಸಿಂಗನಮನೆ (ಸಾಮಾನ್ಯ ಅಭ್ಯರ್ಥಿ), ಸಾಗರ ತಾಲ್ಲೂಕು ತುಮರಿ (ಸಾಮಾನ್ಯ ಅಭ್ಯರ್ಥಿ) ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ಗ್ರಂಥಾಲಯ ಮೇಲ್ವಿಚಾರಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

ದಾವಣಗೆರೆ; ಕೆಲಸ ಖಾಲಿ ಇದೆ, ನ.30ರೊಳಗೆ ಅರ್ಜಿ ಹಾಕಿ ದಾವಣಗೆರೆ; ಕೆಲಸ ಖಾಲಿ ಇದೆ, ನ.30ರೊಳಗೆ ಅರ್ಜಿ ಹಾಕಿ

Apply For Library Supervisor Post At Shivamogga

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವ ಸಂಭಾವನೆ ರೂ.12,000 ನೀಡಲಾಗುತ್ತದೆ. ಆಸಕ್ತರು ಅರ್ಜಿ ಹಾಗೂ ಇತರೆ ದಾಖಲಾತಿಗಳನ್ನು ಪಂಚಾಯಿತಿಗೆ ಸಲ್ಲಿಸಲು ಡಿಸೆಂಬರ್ 8 ಕಡೆಯ ದಿನವಾಗಿದೆ. ಅರ್ಜಿ ನಮೂನೆಯನ್ನು ಆಯಾ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಪಡೆದುಕೊಳ್ಳಬಹುದು.

ಕೊಡಗು; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಕೊಡಗು; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿ ಕಾರ್ಯಾಲಯ ಅಥವಾ ಉಪನಿರ್ದೇಶಕರ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-222905 ಅನ್ನು ಸಂಪರ್ಕಿಸಬಹುದೆಂದು ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ದಿಮೆದಾರರ ಸಭೆ; ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಹಾಸನ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಕಾರ್ಯಾಲಯ, ಬಿ. ಕಾಟೀಹಳ್ಳಿ ಕೈಗಾರಿಕಾ ಎಸ್ಟೇಟ್, ಅರಸೀಕೆರೆ ರಸ್ತೆ, ಹಾಸನ ಇಲ್ಲಿ ನವೆಂಬರ್ 12ರಂದು ಮಧ್ಯಾಹ್ನ 3 ಗಂಟೆಗೆ ಪರಿಶಿಷ್ಟ ಜಾತಿ/ ವರ್ಗದ ಉದ್ದಿಮೆದಾರರ ಸಭೆ ಏರ್ಪಡಿಸಲಾಗಿದೆ.

ಸಭೆಯಲ್ಲಿ ಪರಿಶಿಷ್ಟ ಜಾತಿ/ ವರ್ಗದ ಉದ್ದಿಮೆದಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು (ತರಬೇತಿ, ಹಣಕಾಸು ನೆರವು, ತಾಂತ್ರಿಕ ಉನ್ನತೀಕರಣ, ಮಾರುಕಟ್ಟೆ ವ್ಯವಸ್ಥೆ ಇತ್ಯಾದಿ) ಚರ್ಚಿಸಲಾಗುವುದು. ಆಸಕ್ತ ಪರಿಶಿಷ್ಟ ಜಾತಿ/ ವರ್ಗದ ಉದ್ದಿಮೆದಾರರು ಈ ಸಭೆಯಲ್ಲಿ ಭಾಗವಹಿಸಬಹುದಾಗಿದೆ.

ತರಬೇತಿಗೆ ಅರ್ಜಿ ಆಹ್ವಾನ; ಕೋಲಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2021-22ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 10 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಆಯೋಜಿಸಿದೆ, ಆಸಕ್ತರಿಂದ ಅರ್ಜಿ ಕರೆದಿದೆ.

ಇಲಾಖೆಯ ಜಿಲ್ಲಾ ಕಛೇರಿಗಳಲ್ಲಿ ತರಬೇತಿ ನೀಡಲು ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡದ ಒಬ್ಬ ಅಭ್ಯರ್ಥಿಯನ್ನು ಮೆರಿಟ್ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಭ್ಯರ್ಥಿಗೆ ಮಾಸಿಕ 15,000 ರೂ. ಗಳ ಸ್ಟೈಫಂಡ್ ನೀಡಲಾಗುತ್ತದೆ.

ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿಯನ್ನು ನೀಡಲಾಗುವುದು. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಎಸ್. ಎಸ್. ಎಲ್. ಸಿ. ಅಂಕಪಟ್ಟಿ, ಪದವಿ ಮತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕು.

Recommended Video

ಸೆಹ್ವಾಗ್ ಹೇಳಿದ ಭಾರತದ ಉಪನಾಯಕ ವೇಗದ ಬೌಲರ್ ಯಾರು? | Oneindia Kannada

ಅರ್ಜಿಗಳನ್ನು ಹಿರಿಯ ಸಹಾಯಕ ನಿರ್ದೇಶಕರ ಕಛೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಆವರಣ, ಕೋಲಾರ ಇವರಿಗೆ ಸಲ್ಲಿಸಬೇಕು. ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ 9480841219 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

English summary
Applications invited for the library supervisor post at Shivamogga. Candidates can apply till December 8, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X