ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಿತ್ರದುರ್ಗ; ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಹಾಕಿ

|
Google Oneindia Kannada News

ಚಿತ್ರದುರ್ಗ, ಅಕ್ಟೋಬರ್ 25; ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ತಾಲೂಕಿನ ಮಠದ ಕುರುಬರಹಟ್ಟಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 10/11/2021 ಕೊನೆಯ ದಿನವಾಗಿದೆ.

ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗಳನ್ನು ಮಾಸಿಕ ಗೌರವ ಧನ ರೂ. 12000 ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಕರೆಯಲಾಗಿದೆ.

ರಾಯಚೂರು; ಬೋಧಕರ ಹುದ್ದೆಗೆ ನವೆಂಬರ್ 4ರ ತನಕ ಅರ್ಜಿ ಹಾಕಿರಾಯಚೂರು; ಬೋಧಕರ ಹುದ್ದೆಗೆ ನವೆಂಬರ್ 4ರ ತನಕ ಅರ್ಜಿ ಹಾಕಿ

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 10/11/2021ರೊಳಗೆ ಪಿಡಿಓ/ ಪಂಚಾಯಿತಿ ಕಾರ್ಯದರ್ಶಿಗಳಿಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಮೇಲ್ವಿಚಾರಕರ ಹುದ್ದೆ ಪರಿಶಿಷ್ಟ ಜಾತಿ (ಗ್ರಾಮೀಣ) ಅಭ್ಯರ್ಥಿಗೆ ಮೀಸಲಾಗಿದೆ.

ಬಿಎಂಆರ್‌ಸಿಎಲ್ ನೇಮಕಾತಿ; 37 ಹುದ್ದೆಗಳಿಗೆ ಅರ್ಜಿ ಹಾಕಿ ಬಿಎಂಆರ್‌ಸಿಎಲ್ ನೇಮಕಾತಿ; 37 ಹುದ್ದೆಗಳಿಗೆ ಅರ್ಜಿ ಹಾಕಿ

Apply For Library Supervisor Post Chitradurga

ಷರತ್ತುಗಳು; ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಎಸ್. ಎಸ್. ಎಲ್. ಸಿ. (ಉತ್ತೀರ್ಣ) ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಅಭ್ಯರ್ಥಿ ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರಬೇಕು (ತಹಶೀಲ್ದಾರ್ ಕಚೇರಿಯಿಂದ ಪಡೆದಿರುವ ದೃಢೀಕರಣ ಪತ್ರ ಲಗತ್ತಿಸಿರಬೇಕು).

KSLU ನೇಮಕಾತಿ 2021: 13 ಶಿಕ್ಷಕ, ಬೋಧಕ ಹುದ್ದೆಗಳಿಗೆ ನೇಮಕ KSLU ನೇಮಕಾತಿ 2021: 13 ಶಿಕ್ಷಕ, ಬೋಧಕ ಹುದ್ದೆಗಳಿಗೆ ನೇಮಕ

ನಿಗದಿಪಡಿಸಿದ ಮೀಸಲಾತಿ ಹೊಂದಿರುವ ಅಭ್ಯರ್ಥಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲಾತಿ (ಎಸ್. ಎಸ್. ಎಲ್‌. ಸಿ . ಅಂಕಪಟ್ಟಿ, ಟಿಸಿ, ಮೀಸಲಾತಿ ಪ್ರಮಾಣ ಪತ್ರ, ಸ್ಥಳೀಯ ವಾಸ ದೃಢೀಕರಣ ಪತ್ರ, ಅಂಗವಿಕಲತೆ ಇದ್ದಲ್ಲಿ ಪ್ರಮಾಣ ಪತ್ರ) ಲಗತ್ತಿಸಿ ಸಲ್ಲಿಸಬೇಕು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ, ಗರಿಷ್ಠ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಗ್ರಂಥಾಲಯ ವಿಜ್ಞಾನ ತರಬೇತಿ ಪಡೆದಿದ್ದರೆ ಆದ್ಯತೆ ನೀಡಲಾಗುತ್ತದೆ.

ವಯಸ್ಕರ ಶಿಕ್ಷಣದಡಿ ನಡೆಯುತ್ತಿರುವ ಮುಂದುವರಿಕಾ ಕಲಿಕಾ ಕೇಂದ್ರಗಳ ಪ್ರೇರಕ/ ಉಪಪ್ರೇರಕರು ಸಹ ಅರ್ಜಿಗಳನ್ನು ಸಲ್ಲಿಸಬಹುದು (ದೃಢೀಕರಣ ಪತ್ರ ಲಗತ್ತಿಸಬೇಕು) ಮೇಲ್ವಿಚಾರಕರಾಗಿ ನೇಮಕಗೊಂಡ ನಂತರ ಪ್ರೇರಕ/ ಉಪ ಪ್ರೇರಕ ಹುದ್ದೆಗೆ ರಾಜೀನಾಮೆ ನೀಡಬೇಕು ಮತ್ತು ಬಿಡುಗಡೆ ಪತ್ರವನ್ನು ಸಂಬಂಧಿಸಿದ ಇಲಾಖೆಯಿಂದ ಪಡೆದು ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ; ಬೀದರ್‌ನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ 10 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಹ ಪತ್ರಿಕೋದ್ಯಮ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿತ್ತು.

ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 28ರ ತನಕ ವಿಸ್ತರಣೆ ಮಾಡಲಾಗಿದೆ. 2021-22ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಗಳನ್ನು ತರಬೇತಿಗೆ ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ಮಾಸಿಕ 15 ಸಾವಿರ ರೂ.ಗಳ ಸ್ಟೈಪಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ, ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಟೈಪಿಂಗ್ ಜ್ಞಾನ ಹೊಂದಿರುವುದು ಕಡ್ಡಾಯ. ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅಭ್ಯರ್ಥಿಗಳ ವಯೋಮತಿ 40 ವರ್ಷದೊಳಗಿರಬೇಕು.

ಅರ್ಜಿಯೊಂದಿಗೆ ಎಸ್. ಎಸ್. ಎಲ್. ಸಿ. ಅಂಕಪಟ್ಟಿ ಸೇರಿದಂತೆ ವಿದ್ಯಾರ್ಹತೆ ಪ್ರಮಾಣ ಪತ್ರಗಳು, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ 2 ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ಸಲ್ಲಿಸಬೇಕು. ಸ್ಥಳೀಯ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಬೇರೆ ಜಿಲ್ಲೆಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು.

ಆಸಕ್ತರು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ರೈಲ್ವೆ ನಿಲ್ದಾಣದ ಆವರಣದ ಹತ್ತಿರ, ಬೀದರ್ ಜಿಲ್ಲೆ, ಬೀದರ್ ಇಲ್ಲಿಗೆ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ವಾರ್ತಾ ಇಲಾಖೆಯ ದೂರವಾಣಿ ಸಂಖ್ಯೆ 08482-225370ಗೆ
ಸಂಪರ್ಕಿಸಬಹು.

English summary
Apply for library supervisor post at Chitradurga district. Candidates can apply till November 11, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X