ಧಾರವಾಡ: ಕೆಲಸ ಖಾಲಿ ಇದೆ, ವೇತನ ರೂ. 16,382ಗಳು

ಧಾರವಾಡ, ನವೆಂಬರ್ 05: ಜಿಲ್ಲಾ ಪಂಚಾಯತಿ ಧಾರವಾಡ ನೇಮಕಾತಿ ಅಧಿಸೂಚನೆಯೊಂದನ್ನು ಹೊರಡಿಸಿದೆ. ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯತಿಗಳ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 5 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಧಾರವಾಡ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಲ್ಲಿ ಖಾಲಿ ಇರುವ 32 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ. 16,382 ಗೌರವ ಸಂಭಾವನೆ ನೀಡಲಾಗುತ್ತದೆ ಎಂದು ಅಧಿಸೂಚನೆ ಹೇಳಿದೆ.

Apply For Library Supervisor Post In Dharwad District

ಶೈಕ್ಷಣಿಕ ವಿದ್ಯಾರ್ಹತೆ: ಅರ್ಜಿ ಸಲ್ಲಿಕೆ ಮಾಡುವವರು ದ್ವಿತೀಯ ಪದವಿ ಪೂರ್ವ ಪರೀಕ್ಷೆ (ಪಿಯುಸಿ)ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು. ಈ ವಿದ್ಯಾರ್ಹತೆಯನ್ನು ಅಧಿಸೂಚನೆ ಹೊರಡಿಸುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರಬೇಕು.

ವಿದ್ಯಾರ್ಹತೆಯ ದಾಖಲಾತಿಗಳ ನೈಜತೆ ಬಗ್ಗೆ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ದೃಢಪಡಿಸಿಕೊಂಡು ನಂತರ ನೇಮಕಾತಿ ಆದೇಶ ನೀಡಲಾಗುವುದು. ಒಂದು ವೇಳೆ ಇಬ್ಬರು ಅಥವಾ ಹೆಚ್ಚಿನ ಅಭ್ಯರ್ಥಿಗಳು ಸಮನಾದ ಅಂಕಗಳ ಮೆರಿಟ್ ಹೊಂದಿದ್ದು, ವಯಸ್ಸಿನಲ್ಲಿ ಹಿರಿಯರಾದವರನ್ನು ಆಯ್ಕೆ ಮಾಡಲಾಗುವುದು. ಅದರಂತೆ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗುವುದು.

ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರತಕ್ಕದ್ದು, ಪರಂತು ಸಂಬಂಧ ಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿ ಲಭ್ಯತೆ ಇಲ್ಲದೆ ಇದ್ದಲ್ಲಿ ಆಯಾ ತಾಲೂಕು ಪಂಚಾಯಿತಿಯ ವ್ಯಾಪ್ತಿಯಲ್ಲಿನ ಬೇರೆ ಗ್ರಾಮ ಪಂಚಾಯತ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸುವುದು.

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಹಾಗೂ ಗರಿಷ್ಠ ವಯೋಮಿತಿಯು ಸಾಮಾನ್ಯ ವರ್ಗ 35 ವರ್ಷ, 2ಎ/ 2ಬಿ/ 3ಎ/ 38 ವರ್ಷ, ಪ.ಜಾತಿ/ ಪ. ಪಂಗಡ/ಪ್ರ-1 40 ವರ್ಷಗಳು.

ಅಭ್ಯರ್ಥಿಗಳಿಗೆ ಸೂಚನೆಗಳು: ನೇಮಕಾತಿ ಅಧಿಸೂಚನೆಯಲ್ಲಿ ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ಅಭ್ಯರ್ಥಿಗಳನ್ನು ಮೊದಲ ಆದ್ಯತೆ ಮೇರೆಗೆ ಪರಿಗಣಿಸಲಾಗುವುದು ಎಂದು ಹೇಳಿದೆ. ಒಂದು ವೇಳೆ ಅದೇ ಗ್ರಾಮ ಪಂಚಾಯತಿಯ ಅರ್ಹ ಅಭ್ಯರ್ಥಿ ಲಭ್ಯವಿಲ್ಲದಿದ್ದಲ್ಲಿ ಆಯಾ ತಾಲ್ಲೂಕು ಪಂಚಾಯತಿ ವ್ಯಾಪ್ತಿಯಲ್ಲಿನ ಬೇರೆ ಗ್ರಾಮ ಪಂಚಾಯತಿ ಅಭ್ಯರ್ಥಿಗಳನ್ನು ಎರಡನೇ ಆದ್ಯತೆ ಮೇರೆಗೆ ಆಯ್ಕೆಗೆ ಪರಿಗಣಿಸಲಾಗುತ್ತದೆ.

ನೇಮಕಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನುಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ಕಡ್ಡಾಯವಾಗಿ ಪಡೆದಿರತಕ್ಕದ್ದು. ಖಾಲಿ ಹುದ್ದೆ ಮತ್ತು ಇತರೆ ವಿವರಗಳಿಗಾಗಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಸೆಲ್ಫ್‌ ಅಟೆಸ್ಟೆಡ್‌ ಪಾಸ್‌ ಪೋರ್ಟ್‌ ಸೈಜ್‌ ಫೋಟೋ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪಿ.ಯು.ಸಿ ಅಂಕಪಟ್ಟಿ, ಸರ್ಟಿಫಿಕೇಶನ್‌ ಕೋರ್ಸ್‌ ಮತ್ತು ಲೈಬ್ರರಿ ಸೈನ್ಸ್‌ ವಿಷಯದಲ್ಲಿ ಪಡೆದ ಪ್ರಮಾಣ ಪತ್ರ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಬಗ್ಗೆ ಪ್ರಮಾಣ ಪತ್ರ (ತಹಸೀಲ್ದಾರ್‌ರಿಂದ ಪಡೆದ ನಿವಾಸಿ ದೃಢೀಕರಣ ಪತ್ರ), ಜಾತಿ ಮತ್ತು ಆದಾಯ (ಉದ್ಯೋಗಕ್ಕಾಗಿ ಪಡೆದ) ಪ್ರಮಾಣ ಪತ್ರ, ಕನ್ನಡ ಮಾಧ್ಯಮದ ವ್ಯಾಸಂಗ ಪ್ರಮಾಣ ಪತ್ರ, ಇತರೆ ಯಾವುದೇ ರೀತಿಯ ಮೀಸಲಾತಿ ಕೋರಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹ ಪ್ರಮಾಣ ಪತ್ರಗಳನ್ನು ಸಂಬಂದಿಸಿದ ಸಕ್ಷಮ ಪ್ರಾಧಿಕಾರದಿಂದ ಪಡೆದಿರತಕ್ಕದ್ದು.

ಗ್ರಾಮ ಪಂಚಾಯತವಾರು ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ಮೀಸಲಾತಿ ವಿವರ ಹಾಗೂ ನಿಬಂಧನೆಗಳನ್ನು ತಿಳಿದುಕೊಳ್ಳಲು ಮತ್ತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತಿಯ ವೆಬ್‌ಸೈಟ್ https://zpdharwad.karnataka.gov.in ಅಥವಾ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿಗಳ ಕಚೇರಿಯನ್ನು ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+