ಹಾಸನದಲ್ಲಿ ಕೆಲಸ ಖಾಲಿ ಇದೆ; ಫೆ.25ರ ತನಕ ಅರ್ಜಿ ಹಾಕಿ
ಹಾಸನ, ಜನವರಿ 28: ಹಾಸನ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಹಾಕಲು ಫೆಬ್ರವರಿ 25 ಕೊನೆಯ ದಿನವಾಗಿದೆ.
ಗೌರವ ಸಂಭಾವನೆ ಮೇಲೆ ಸಕಲೇಶಪುರ ತಾಲ್ಲೂಕು ಬಾಳ್ಳುಪೇಟೆ ಗ್ರಾಮ ಪಂಚಾಯಿತಿ ಗ್ರಂಥಾಲಯ (3ಎ, ಮಹಿಳಾ) ಹಾಗೂ ಬೇಲೂರು ತಾಲೂಕು ಅಡಗೂರು ಗ್ರಾಮ ಪಂಚಾಯಿತಿ ಗ್ರಂಥಾಲಯ (ಸಾಮಾನ್ಯ) ಮೇಲ್ವಿಚಾರಕರನ್ನು ನೇಮಕ ಮಾಡಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 7000 ರೂ. ಗೌರವ ಸಂಭಾವನೆಯನ್ನು ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರು ಆಯಾ ಪಂಚಾಯಿತಿ ಸ್ಥಳೀಯ ನಿವಾಸಿಗಳಾಗಿರಬೇಕು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು ಮತ್ತು ಆಯಾ ಪಂಚಾಯಿತಿಗಳಿಗೆ ನಿಗದಿಪಡಿಸಿದ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳಾಗಿರಬೇಕು.
ಆಸಕ್ತರು ಅರ್ಜಿ ಹಾಗೂ ಇತರೆ ದಾಖಾಲಾತಿಗಳನ್ನು ಪಂಚಾಯಿತಿಗೆ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 25, 2021. ಅರ್ಜಿ ನಮೂನೆಯನ್ನು ಆಯಾ ಪಂಚಾಯಿತಿ ಕಾರ್ಯಾಲಯಗಳಲ್ಲಿ ಪಡೆದುಕೊಳ್ಳಬಹುದು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿ ಕಾರ್ಯಲಯ ಅಥವಾ ಉಪನಿರ್ದೇಶಕರ ಕಚೇರಿಯನ್ನು 08172-268608 ನಂಬರ್‌ನಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ಹೇಳಿದೆ.












Click it and Unblock the Notifications