ಕೋಲಾರ; ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಹಾಕಿ

ಕೋಲಾರ, ಅಕ್ಟೋಬರ್ 06: ಕೋಲಾರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆಯ್ದ ಗ್ರಾಮ ಪಂಚಾಯತಿ, ಅಲೆಮಾರಿ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 3ರ ಸಂಜೆ 5 ಗಂಟೆ ತನಕ ಅರ್ಜಿ ಸಲ್ಲಿಸಬಹುದು.

ಕೋಲಾರ ತಾಲೂಕಿನ ಕುರುಗಲ್ ಗ್ರಾಮ ಪಂಚಾಯತಿ ಗ್ರಂಥಾಲಯ, ಮಾಲೂರು ತಾಲೂಕಿನ ನೊಸಗೆರೆ ಗ್ರಾಮ ಪಂಚಾಯತಿ ಗ್ರಂಥಾಲಯ, ಶಿವಾರಪಟ್ಟಣದ ಗ್ರಾಮ ಪಂಚಾಯತಿ ಗ್ರಂಥಾಲಯ, ಮುಳಬಾಗಿಲು ತಾಲೂಕಿನ ಹನುಮನಹಳ್ಳಿ ಗ್ರಾಮ ಪಂಚಾಯತಿ ಗ್ರಂಥಾಲಯ, ಪಿಚ್ಚಗುಂಟ್ಲಹಳ್ಳಿ ಅಲೆಮಾರಿ ಗ್ರಂಥಾಲಯದಲ್ಲಿ ಹುದ್ದೆ ಖಾಲಿ ಇದೆ.

ಬಂಗಾರಪೇಟೆ ತಾಲೂಕಿನ ಹುಲ್ಕೂರು ಗ್ರಾಮ ಪಂಚಾಯತಿ ಗ್ರಂಥಾಲಯ, ಶ್ರೀನಿವಾಸಪುರ ತಾಲೂಕಿನ ತಾಡಿಗೋಳ್ ಗ್ರಾಮ ಪಂಚಾಯತಿ ಗ್ರಂಥಾಲಯ, ಮಾಸ್ತೇನಹಳ್ಳಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಲ್ಲಿ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಿಲಾಗಿದೆ.

Apply For Library Supervisor Post In Kolar

ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಕೇಂದ್ರ ಗ್ರಂಥಾಲಯ ಕಛೇರಿಯಲ್ಲಿ ಅರ್ಜಿಗಳನ್ನು ಪಡೆದು ಅಕ್ಟೋಬರ್ 5 ರಿಂದ ನವೆಂಬರ್ 3 ರ ಸಂಜೆ 5 ಗಂಟೆಯೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಎಸ್. ಎಸ್. ಎಲ್. ಸಿ ಉತ್ತೀರ್ಣರಾಗಿರಬೇಕು. ವಯೋಮಿತಿ ಕನಿಷ್ಟ 18 ವರ್ಷ ಹಾಗೂ ಗರಿಷ್ಟ 40 ವರ್ಷ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+