
ಉಡುಪಿಯಲ್ಲಿ ಕೆಲಸ ಖಾಲಿ ಇದೆ; ಜೂನ್ 21ರೊಳಗೆ ಅರ್ಜಿ ಹಾಕಿ
ಉಡುಪಿ, ಮೇ 30; ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಚೇರಿ ರಜತಾದ್ರಿ, ಉಡುಪಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 21/6/2022 ಕೊನೆಯ ದಿನವಾಗಿದೆ.
ಉಡುಪಿ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಕರೆಯಲಾಗಿದೆ.
ಬಿಡಿಎ ನೇಮಕಾತಿ; ಜೂನ್ 18ರೊಳಗೆ ಅರ್ಜಿ ಸಲ್ಲಿಸಿ
ಲೋಡರ್ಸ್ ಹುದ್ದೆಗಳು 33, ಕ್ಲೀನರ್ಸ್ 8. ಆಯ್ಕೆಯಾದ ಅಭ್ಯರ್ಥಿಗಳಿಗೆ 17000-28,950 ರೂ. ತನಕ ವೇತನ ನೀಡಲಾಗುತ್ತದೆ. ಅಗತ್ಯ ದಾಖಲಾತಿಗಳ ಜೊತೆ 21/6/2022ರೊಳಗೆ ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ತುಮಕೂರು; ಸೇವಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಷರತ್ತುಗಳು; ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಕನ್ನಡ ಮಾತನಾಡಲು ತಿಳಿದಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ ವಯೋಮಿತಿ 55 ವರ್ಷಗಳು.
ಆಕಾಶವಾಣಿಯಲ್ಲಿ ಅರೆಕಾಲಿಕ ವರದಿಗಾರರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್ಸ್, ಕ್ಲೀನರ್ಸ್ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ/ ದಿನಗೂಲಿ/ ಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ/ ಹೊರಗುತ್ತಿಗೆ ಕಾರ್ಯದಡಿ ಹಾಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಹಾಗೂ ಈ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ ಕನಿಷ್ಠ ದಿನಾಂಕದಿಂದ ಕನಿಷ್ಠ 2 ವರ್ಷಗಳ ಸೇವೆಯಲ್ಲಿ ಮುಂದುವರೆದಿರುವ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ಆಸಕ್ತರು ಅರ್ಜಿ ನಮೂನೆಗಳನ್ನು ಜಿಲ್ಲಾ ನಗರಾಭಿವೃದ್ಧಿ ಕೋಶ, ಉಡುಪಿ/ ಉಡುಪಿ ನಗರಸಭೆ/ ಕುಂದಾಪುರ, ಕಾರ್ಕಳ, ಕಾಪು ಪುರಸಭೆ/ ಸಾಲಿಗ್ರಾಮ, ಬೈಂದೂರು ಪಟ್ಟಣ ಪಂಚಾಯಿತಿಗಳಲ್ಲಿ ಪಡೆಯಬಹುದಾಗಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಚೇರಿ, ಉಡುಪಿ ಮತ್ತು ಆಯಾ ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯಿತಿಗಳಲ್ಲಿ ಪಡೆಯಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕ ಮತ್ತು ಸ್ಥಳ; ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಚೇರಿ, ಉಡುಪಿ 21/6/2022.
ಈ ನೇಮಕಾತಿಯು ಸರ್ಕಾರದ/ ಪೌರಾಡಳಿತ ನಿರ್ದೇಶನಾಲಯದಿಂದ ಕಾಲ ಕಾಲಕ್ಕೆ ಹೊರಡಿಸುವ ಆದೇಶ/ ಸುತ್ತೋಲೆಯ ಷರತ್ತಿಗೊಳಪಟ್ಟಿದೆ.
ಅರೆಕಾಲಿಕ ವರದಿಗಾರರ ಹುದ್ದೆ ನೇಮಕಾತಿ; ಆಕಾಶವಾಣಿ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ, ಹಾಸನ, ವಿಜಯನಗರ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಿಗೆ ಅರೆಕಾಲಿಕ ವರದಿಗಾರರನ್ನು ನೇಮಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆದಿದೆ.
ಅಭ್ಯರ್ಥಿಯು ಪಿಜಿ ಡಿಪ್ಲೊಮಾ/ ಪತ್ರಿಕೋದ್ಯಮ/ ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದ್ದು 24 ರಿಂದ 45 ವಯೋಮಿತಿಯಲ್ಲಿರಬೇಕು. ಕನಿಷ್ಟ 2 ವರ್ಷಗಳ ಮಾಧ್ಯಮ ಅನುಭವ ಇರಬೇಕು. ಜಿಲ್ಲಾ ಮುಖ್ಯ ಕೇಂದ್ರದಲ್ಲಿ ಅಥವಾ ಜಿಲ್ಲೆಯ ಜಿಲ್ಲಾ ಮುಖ್ಯ ಕೇಂದ್ರ/ ಪುರಸಭೆ ವ್ಯಾಪ್ತಿಯ 10 ಕಿ. ಮೀ. ಆಸುಪಾಸಿನ ಪ್ರದೇಶದಲ್ಲಿ ವಾಸವಿರಬೇಕು.
ಅಭ್ಯರ್ಥಿಗೆ ಕಂಪ್ಯೂಟರ್ ಮತ್ತು ವರ್ಡ್ ಪ್ರೊಸೆಸಿಂಗ್ ಬಗ್ಗೆ ತಿಳುವಳಿಕೆ ಇರಬೇಕು. ಸುದ್ದಿ ಸಂಗ್ರಹ ಉಪಕರಣಗಳನ್ನು ಹೊಂದಿರಬೇಕು. ವಿದ್ಯುನ್ಮಾನ ಮಾಧ್ಯಮಕ್ಕೆ ವರದಿಗಾರಿಕೆಯಲ್ಲಿ ಅನುಭವವಿರಬೇಕು. ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಆದ್ಯತೆ ನೀಡಲಾಗುವುದು.
ಅಭ್ಯರ್ಥಿಯ ಪೂರ್ಣ ವಿವರಗಳು, ಅಗತ್ಯ ದಾಖಲಾತಿಗಳ ಪ್ರತಿಗಳು ಹಾಗೂ ಅರ್ಜಿ ಶುಲ್ಕದ ಬ್ಯಾಂಕ್ ಡ್ರಾಫ್ಟ್ಅನ್ನು ಒಳಗೊಂಡ ಅರ್ಜಿಗಳನ್ನು ರಿಜಿಸ್ಟರ್ಡ್ ಅಂಚೆ ಮೂಲಕ ಖುದ್ದಾಗಿ ಜೂನ್ 10 ರೊಳಗೆ ತಲುಪುವಂತೆ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಕೆಗೆ ವಿಳಾಸ; ದಿ ಡೆಪ್ಯುಟಿ ಜನರಲ್, (ಇ) & ಹೆಚ್ಓಓ, ರೀಜನಲ್ ನ್ಯೂಸ್ ಯುನಿಟ್, ಆಲ್ ಇಂಡಿಯಾ ರೇಡಿಯೋ, ರಾಜ್ಭವನ್ ರಸ್ತೆ, ಬೆಂಗಳೂರು 560001.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 8317466729/ 9448159726/ 9482169168/ 080-22356344/ 22373000.