ಬ್ಲೂ ಫ್ಲ್ಯಾಗ್ ಬೀಚಿನಲ್ಲಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಹಾಕಿ
ಬ್ಲೂ ಫ್ಲ್ಯಾಗ್ ಬೀಚಿನಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ಉಡುಪಿ, ಮಾರ್ಚ್ 08; ಬ್ಲೂ ಫ್ಲ್ಯಾಗ್ ಬೀಚಿನಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕನ್ನಡ, ಇಂಗ್ಲಿಶ್ ಅಥವಾ ಹಿಂದಿ ಭಾಷೆಯಲ್ಲಿ ವ್ಯವಹರಿಸಲು ಶಕ್ತರಾಗಿರಬೇಕು.
ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದಿರುವ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿ ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್ ಬೀಚಿನಲ್ಲಿ ಮ್ಯಾನೇಜರ್ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕಂಪ್ಯೂಟರ್ ಬಗ್ಗೆ ಜ್ಞಾನ ಹೊಂದಿರುವ (ಟ್ಯಾಲಿ, ಪಿಪಿಟಿ, ಎಕ್ಸೆಲ್) ಬಗ್ಗೆ ಜ್ಞಾನ ಹೊಂದಿರಬೇಕು. ಈಗಾಗಲೇ ಬೀಚಿನಲ್ಲಿ ಅಥವಾ ಯಾವುದೇ ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಯಲ್ಲಿ ಕನಿಷ್ಟ 5 ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರುವವರು ಅಥವಾ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಉಡುಪಿ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 0820-2574868.
ಅಂಗನವಾಡಿ ಸಹಾಯಕಿಯರ ಹುದ್ದೆ; ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಪದವು, ಕುರ್ಸುಕಟ್ಟೆ, ಕಂಬಳಗುಡ್ಡೆ, ಕಾಯಿನಾಲು, ನಂದಳಿಕೆ ಮಾವಿನಕಟ್ಟೆ, ಸಚ್ಚರಿಪೇಟೆ-2, ಮಲೆಬೆಟ್ಟು ಮತ್ತು ಮಲಾಯಿಬೆಟ್ಟು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಕಾರ್ಕಳ ಇವರನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 08258-230992.












Click it and Unblock the Notifications