ಧಾರವಾಡ; ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಹಾಕಿ

ಧಾರವಾಡ, ಆಗಸ್ಟ್ 20; ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಧಾರವಾಡ ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಆಗಸ್ಟ್ 24 ಕೊನೆಯ ದಿನವಾಗಿದೆ.

ಬ್ಯಾಂಕ್ ಕಾರ್ಯ ವ್ಯಾಪ್ತಿಗೆ ಒಳಪಡುವ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ನೇಮಕ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ.

ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಧಾರವಾಡದ ಕೇಂದ್ರ ಕಚೇರಿ ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಸುಭಾಸ ರಸ್ತೆ, ಧಾರವಡ ಇಲ್ಲಿ ಕೇಂದ್ರ ಕಚೇರಿ ಇದೆ. ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಸಕ್ತರು ಸಲ್ಲಿಕೆ ಮಾಡಬಹುದು.

Apply For Marketing Executive Posts At Dharwad

ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಎಂಬಿಎ (ಮಾರ್ಕೆಟಿಂಗ್)/ ಸಿಎ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಆಸಕ್ತ ಅಭ್ಯರ್ಥಿಗಳು ಆಗಸ್ಟ್ 24ರೊಳಗೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಬ್ಯಾಂಕಿನ ಅಧಿಕಾರಿ ಮೊಬೈಲ್ ನಂಬರ್ 7259014297ಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕೆಲಸ ಮಾಡಬೇಕಿದೆ. ಒಟ್ಟು ಎಷ್ಟು ಹುದ್ದೆಗಳಿವೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿಲ್ಲ. ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ಲಿ. ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿಗಳಿಗೆ ವಯೋಮಿತಿ ನಿಗದಿ ಮಾಡಲಾಗಿದೆ.

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಬರೆದು, ಸ್ವಯಂ ದೃಢೀಕರಿಸಿದ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಭ್ಯರ್ಥಿಗಳು ಸಲ್ಲಿಕೆ ಮಾಡಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ; Chief Executive Officers, KCC Bank Limited, Head Office: Post Box No: 21, Subhas Road, Dharwad, Karnataka.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

kccbankdharwad.vwghosting.in

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+